“ಲವ್ ಯೂ ಮುದ್ದು” ಚಿತ್ರದ ನೈಜ ಕಥೆಯ ನಾಯಕ-ನಾಯಕಿಯನ್ನು ಪರಿಚಯಿಸಿದ ನಿರ್ದೇಶಕ ಕುಮಾರ್

ಮಹಾರಾಷ್ಟ್ರದ ಸೊಲ್ಲಾಪುರದ ಯುವ ದಂಪತಿಗಳ ಕಥೆ ಆಧರಿಸಿ ಕನ್ನಡದಲ್ಲಿ “ಲವ್ ಯು ಮುದ್ದು” ಚಿತ್ರವನ್ನು ತೆರೆಗೆ ತರಲು ನಿರ್ದಶಕ ಕುಮಾರ್ ಮುಂದಾಗಿದ್ದು ಚಿತ್ರ ತೆರೆಗೆ ಬರಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ನೈಜ ಕಥೆಯ ನಾಯಕ ನಾಯಕಿಯನ್ನು ಪರಿಚಯಿಸಿದ್ದಾರೆ

ಲವ್ ಯು ಮುದ್ದು ಸಿನಿಮಾ ಶೀರ್ಷಿಕೆ ಹಾಗೂ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಇಮ್ಮಡಿಗೊಳಿಸಿದೆ. ಮೊದಲ ಬಾರಿಗೆ ಪ್ರೇಮಕಥೆಯನ್ನು ಕುಮಾರ್ ತೆರೆಗೆ ತರುತ್ತಿದ್ದಾರೆ. ನೈಜ ಘಟನೆಯನ್ನು ದೃಶ್ಯ ರೂಪಕ್ಕೆ ಇಳಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವ ದಂಪತಿಗಳಾದ ಆಕಾಶ್ ನಾರಾಯಣ್ಕರ್ ಮತ್ತು ಅಂಜಲಿ ಭಾಯ್ ಶಿಂಧೆ ಕಥೆ ಈಗ ಲವ್ ಯು ಮುದ್ದು ಸಿನಿಮಾ ರೂಪ ತಾಳಿದೆ.

ಪ್ರೀತಿಯೇ ಸರ್ವಸ್ವ, ಪ್ರೀತಿಯೇ ಸಕಲ ಅನ್ನೋದನ್ನು ಸಾಬೀತು ಮಾಡಿದ ಜೋಡಿ ಆಕಾಶ್ ಹಾಗೂ ಅಂಜಲಿ. ಅವರ ಜೀವನದಲ್ಲಾದ ಏಳುಬೀಳಿನ ಕಥೆಯನ್ನು ಕುಮಾರ್ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ

ಆಕಾಶ್ ಪ್ರೀತಿಸಿ ಮದುವೆಯಾದ ಜೋಡಿ. ನವದಂಪತಿಗಳು ದೇವರ ದರ್ಶನ ಪಡೆಯಲು ಹೋದಾಗ ಊಹಿಸಲಾಗದ ಘಟನೆ ನಡೆಯಿತು. ಅದು ಏನು ಅವರಿಬ್ಬ ಬಾಳಲ್ಲಿ ನಡೆದ ಘೋರ ದುರಂತವೇನು ಅನ್ನೋದನ್ನು ಲವ್ ಯು ಮುದ್ದು ಸಿನಿಮಾದಲ್ಲಿಯೇ ನೋಡಬೇಕು.

ಲವ್ ಯು ಮುದ್ದು ಭಾವುಕ ಸಿನಿಮಾ. ಚಿತ್ರ ನೋಡಿ ಹೊರಬಂದವರ ಕಣ್ಣಂಚಲ್ಲಿ ನೀರು ಬರುವುದು ಗ್ಯಾರಂಟಿ ಅನ್ನೋದು ಚಿತ್ರತಂಡ ಭರವಸೆ. ರಿಯಲ್ ಜೋಡಿ ಜೀವನದ ಬಂಧವನ್ನು ಸ್ಪರ್ಶಿಸುವ ಸಿನಿಮೀಯ ಅನುಭವವನ್ನು ಚಿತ್ರ ಮಂದಿರದಲ್ಲಿ ನೋಡಬಹುದು ಎಂದು ನಿರ್ದೇಶಕ ಕುಮಾರ್ ತಿಳಿಸಿದ್ದಾರೆ

ಆಕಾಶ್ ಅಂಜಲಿ ದಂಪತಿಯಾಗಿ ಸಿದ್ದು ಮೂಲಿಮನಿ ಹಾಗೂ ಯುವ ನಟಿ ರೇಷ್ಮಾ ಅಭಿನಯಿಸಿದ್ದಾರೆ. ಉಳಿದಂತೆ ರಾಜೇಶ್ ನಟರಂಗ, ತಬಲ ನಾಣಿ, ಗಿರೀಶ್ ಶಿವಣ್ಣ, ಶ್ರೀವತ್ಸ ಮತ್ತು ಸ್ವಾತಿ ತಾರಾಬಳಗದಲ್ಲಿದ್ದಾರೆ.

ಕೆಮಿಸ್ಟ್ರಿ ಆಫ್ ಕರಿಯಪ್ಪ ಸಾರಥಿ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರವನ್ನು ಕಿಶನ್ ಟಿ.ಎನ್. ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಲಕ್ಷ್ಮಿಕಾಂತ್ ಟಿ.ಎಸ್. ತಂಡದ ಭಾಗವಾಗಿದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿ.ಎಸ್.ದೀಪು ಸಂಕಲನ ನಿರ್ವಹಿಸಿದ್ದಾರೆ.ಚಿತ್ರ ನವೆಂಬರ್ 7ಕ್ಕೆ ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ

Related Posts

ಬಂಬೂ ಸವಾರಿ ಚಿತ್ರದ “ಗೋವಿಂದಾ ಗೋವಿಂದಾ” ಹಾಡು ಬಿಡುಗಡೆ

ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಸಕ್ಸಕ್ ಫುಲ್ ಸಿನಿಮಾ ಜಾತ್ರೆ ಆರಂಭವಾಗಿರುವ ಸಮಯದಲ್ಲಿ ಬಂಬೂ ಸವಾರಿ ಹೆಸರಲ್ಲಿ ಸಿನಿಮಾ ಸದ್ದಿಲ್ಲದೇ ಬಿಡುಗಡೆಗೆ ಸಜ್ಜಾಗಿದೆ.ಮೊದಲ ಹಂತ ಚಿತ್ರತಂಡ ಹಾಡು ಬಿಡುಗಡೆ ಮಾಡಿದ್ದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು ಮಾಡಿದೆ ಗೋವಿಂದಾ.. ಎಂಟ್ರಾನ್ ಸಾಮಿ…

ಹೆಸರು ಬದಲಾಯಿಸಿಕೊಂಡು ಅದೃಷ್ಠ ಕಂಡುಕೊಳ್ಳಲು ಮುಂದಾದ “ರಿಲ್ಯಾಕ್ಸ್”

ನಟ ಕೋಮಲ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ “ರೋಲೆಕ್ಸ್” ಚಿತ್ರದ ಶೀರ್ಷಿಕೆ ಈಗ “ರಿಲ್ಯಾಕ್ಸ್” ಎಂದು ಬದಲಾಗಿದೆ. ಈ ಮೂಲಕ ಅದೃಷ್ಠ ಪರೀಕ್ಷೆಗೆ ಚಿತ್ರತಂಡ ಮುಂದಾಗಿದೆ. ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಚಿತ್ರಕ್ಕೆ ಸಂಗೀತ ನೀಡಿದ್ದು ನಿರ್ಮಾಪಕ ಅಂಬಟಿ ಮಧು ಮೋಹನ್ ಹಾಡು…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581