'Dollars Payte' first look released

‘ಡಾಲರ್ಸ್ ಪೇಟೆ’ ಫಸ್ಟ್ ಲುಕ್ ಬಿಡುಗಡೆ - CineNewsKannada.com

‘ಡಾಲರ್ಸ್ ಪೇಟೆ’ ಫಸ್ಟ್ ಲುಕ್ ಬಿಡುಗಡೆ

ಡಾಲರ್ಸ್ ಪೇಟೆ’ ಫಸ್ಟ್ ಲುಕ್ ರಿವೀಲ್ – ಮೋಹನ್ ಎನ್ ಮುನಿನಾರಾಯಣಪ್ಪ ನಿರ್ದೇಶನದ ಮೊದಲ ಚಿತ್ರ

ಮೋಹನ್ ಎನ್ ಮುನಿನಾರಾಯಣಪ್ಪ ಆಕ್ಷನ್ ಕಟ್ ಹೇಳಿರುವ ‘ಡಾಲರ್ಸ್ ಪೇಟೆ’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ. ‘ಮಾರ್ಫಿ’, ‘ಮದಗಜ’ ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿ ನಾರಾಯಣಪ್ಪ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗಿ ಹೊಸ ಹೆಜ್ಜೆ ಇಟ್ಟಿದ್ದು, ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

‘ಡಾಲರ್ಸ್ ಪೇಟೆ’ ಚಿತ್ರಕ್ಕೆ ಮೋಹನ್ ಎನ್ ಮುನಿನಾರಾಯಣಪ್ಪ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಪ್ರಚಾರ ಕಾರ್ಯ ಆರಂಭಿಸಿದೆ. ಇಂಟ್ರಸ್ಟಿಂಗ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಎಲ್ಲರ ಗಮನ ಸೆಳೆದಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಕ್ಯಾರೆಕ್ಟರ್ ಫೋಸ್ಟರ್ ರಿವೀಲ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ.ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ, ಆಕರ್ಷ್ ಕಮಲ, ವೆಂಕಟ್ ರಾಜು, ಮುಖ್ಯ ತಾರಾಬಳಗದಲ್ಲಿದ್ದು, ಪೃಥ್ವಿ ಅಂಬರ್ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ. ಉಳಿದಂತೆ ಕುಶಾಲ್.ಎಸ್, ದತ್ತು, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್ ಮಹೇಂದ್ರ ಒಳಗೊಂಡ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಆನಂದ್ ಸುಂದರೇಶ ಕ್ಯಾಮೆರಾ ವರ್ಕ್, ಮಹೇಶ್ ತೊಗಟ್ಟ ಸಂಕಲನ, ಅರ್ಜುನ್ ರಾಜ್ ಮತ್ತು ನರಸಿಂಹ ಸಾಹಸ ನಿರ್ದೇಶನ ಹಾಗೂ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಪೆಂಟ್ರಿಕ್ಸ್ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಪೂಜಾ.ಟಿ.ವೈ ‘ಡಾಲರ್ಸ್ ಪೇಟೆ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin