ತೋತಾಪುರಿ-2 ಚಿತ್ರದಲ್ಲಿ ಡಾಲಿ ನಾಯಕ: ನಟರಿಬ್ಬರ ಹೊಸ ಲುಕ್ ಬಿಡುಗಡೆ
ತೋತಾಪುರಿ ಚಿತ್ರದ ಮೊದಲ ಭಾಗದ ಅಂತ್ಯದಲ್ಲಿ ಕಾಣಿಸಿಕೊಂಡು ಸ್ಪೆಷಲ್ ಲುಕ್ ನೀಡಿದ್ದ ನಟ ಡಾಲಿ ಧನಂಜಯ್ ತೋತಾಪುರಿ-2 ಚಿತ್ರದಲ್ಲಿ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ಪಾತ್ರ ಚಿತ್ರದಲ್ಲಿ ತುಂಬಾ ವಿಶೇಷವಾಗಿ ಮೂಡಿಬಂದಿದೆ ಎನ್ನುತ್ತಿದೆ ಚಿತ್ರತಂಡ.
ಗುರುಪೂರ್ಣಿಮೆ. ಅಂಗವಾಗಿ ತೋತಾಪುರಿ-2 ಚಿತ್ರದ ಫಸ್ಟ್ ಲುಕ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಪೆÇೀಸ್ಟರ್ ನಲ್ಲಿ ನಾಯಕರಾದ ಡಾಲಿ ಡಾಲಿ ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಹೇಗಿರುತ್ತೆ ಅನ್ನೋದರ ಝಲಕ್ ಇದೆ.
ಜಗತ್ತೇ ಒಂದು ಮನೆ, ನಾವೆಲ್ಲ ಒಂದೇ ಸೂರಿನಡಿ ಬದುಕುತ್ತಿರುವವರು ಎನ್ನುವ ಭಾವೈಕ್ಯತೆಯ ಸಂದೇಶ ಸಾರುವ ಸ್ಟ್ರಾಂಗ್ ಕಂಟೆಂಟ್ ಒಳಗೊಂಡಿದ್ದ ತೋತಾಪುರಿ ಚಿತ್ರವು ಪ್ರೇಕ್ಷಕರಿಂದ, ವಿಮರ್ಶಕರಿಂದ ಅಪಾರ ಮೆಚ್ಚುಗೆ ಪಡೆದು ಯಶಸ್ವಿಯಾಗಿತ್ತು, ಆಗಲೇ ತೋತಾಪುರಿ ಚಿತ್ರದ ಎರಡನೇ ಭಾಗವನ್ನು ಮಾಡುತ್ತಿರುವುದಾಗಿ ನಿರ್ದೇಶಕ ವಿಜಯಪ್ರಸಾದ್ ಸೂಚನೆ ನೀಡಿದ್ದರು. ಅದರಂತೆ ಈಗ ತೋತಾಪುರಿ ಭಾಗ-2 ನಿರ್ಮಾಣವಾಗಿದ್ದು, ಶೀಘ್ರದಲ್ಲೇ ತೆರೆ ಕಾಣಲು ಸಿದ್ದವಾಗುತ್ತಿದೆ.
ಮೊದಲ ಭಾಗದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ವಿಜಯ ಪ್ರಸಾದ್ ಅವರ ನಿರ್ದೇಶನದ ಈ ಚಿತ್ರವನ್ನು ಶಿವಲಿಂಗ ಖ್ಯಾತಿಯ ನಿರ್ಮಾಪಕ ಕೆ.ಎ. ಸುರೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದರು. ಈಗ ಚಿತ್ರತಂಡ ತೋತಾಪುರಿ-2 ಪೆÇೀಸ್ಟರ್ ಬಿಡುಗಡೆ ಮಾಡಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರುವ ಸೂಚನೆಯನ್ನು ನೀಡಿದೆ, ಸದ್ಯದಲ್ಲೇ ಚಿತ್ರದ ಟೀಸರ್, ಟ್ರೈಲರ್, ಸಾಂಗ್ ಬಿಡುಗಡೆಯ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ. ಅಲ್ಲದೆ ಸೆನ್ಸಾರ್ ಪ್ರಕ್ರಿಯೆ ಮುಗಿದ ಕೂಡಲೇ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದೆ.
ತೋತಾಪುರಿ ಪಾರ್ಟ್-2 ಮೊದಲಿಗಿಂತ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಡಾಲಿ ಅಭಿಮಾನಿಗಳಿಗಂತೂ ಫುಲ್ ಮೀಲ್ಸ್ ಅನ್ನಬಹುದು. ಅಲ್ಲದೆ ಪೆÇೀಸ್ಟ್ ಪೆÇ್ರಡಕ್ಷನ್ ಹಂತದ ಸಣ್ಣಪುಟ್ಟ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಫಸ್ಟ್ ಕಾಪಿ ಹೊರಬರಲಿದೆ. ನಂತರ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗುವುದು, ನಮ್ಮ ನಿರೀಕ್ಷೆಯಂತೆಯೇ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಪ್ರೇಕ್ಷಕರಿಗೆ ಇಷ್ಟವಾಗುವ ಮನರಂಜನಾತ್ಮಕ ಕಂಟೆಂಟ್ ಚಿತ್ರದಲ್ಲಿದೆ.
ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆಯ ಜೊತೆ ಕಾಮಿಡಿ ಪಂಚಿಂಗ್ ನೀಡಲಿದೆ ಎಂದು ಚಿತ್ರದ ನಿರ್ಮಾಪಕ ಕೆ.ಎ.ಸುರೇಶ್ ಅವರು ಹೇಳಿದ್ದಾರೆ, ಈ ಚಿತ್ರದಲ್ಲಿ ಡಾಲಿ ಧನಂಜಯ ಅಲ್ಲದೆ ಜಗ್ಗೇಶ್, ದತ್ತಣ್ಣ, ಸುಮನ ರಂಗನಾಥ್, ಅದಿತಿ ಪ್ರಭುದೇವ, ವೀಣಾ ಸುಂದರ್, ಹೇಮಾದತ್ ಹೀಗೆ ಮೊದಲ ಭಾಗದಲ್ಲಿದ್ದ ಬಹುತೇಕ ಪಾತ್ರಗಳು ಮುಂದುವರಿಯಲಿವೆ.