“ವೀರ ಕಂಬಳ” ಚಿತ್ರದಲ್ಲಿ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ
ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ `ವೀರ ಕಂಬಳ’ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಕ್ಷಣಗಳು ಹತ್ತಿರವಾಗುತ್ತಿರುವ ಹೊತ್ತಿನಲ್ಲಿ ವೀರ ಕಂಬಳದ ಒಡಲಿನಲ್ಲಿರುವ ಒಂದೊಂದೇ ವಿಷಯಗಳು ಅನಾವರಣವಾಗುತ್ತಿವೆ.
ವೀರ ಕಂಬಳ ರೂಪುಗೊಂಡಿದ್ದರ ಹಿಂದೆ ದಶಕಗಳಷ್ಟು ಸುದೀರ್ಘ ಕಥನವಿದೆ. ಸರಿಸುಮಾರು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿ ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಈ ಸಿನಿಮಾ ರೂಪಿಸಿದ್ದಾರೆ. ಅತ್ಯಂತ ಮಹತ್ವದ ಪಾತ್ರವೊಂದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿದ್ದಾರೆ.
ವೀರೇಂದ್ರ ಹೆಗ್ಗಡೆ ಚಿತ್ರದಲ್ಲಿ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆಂಬ ವಿಚಾರ ವರ್ಷಗಳ ಹಿಂದೆಯೇ ಹೊರ ಬಂದಿತ್ತು. ನಿರ್ದೇಶಕರಾಗಲಿ, ಚಿತ್ರತಂಡದವರಾಗಲಿ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟು ಕೊಡದೆ ಗೌಪ್ಯತೆ ಕಾಪಾಡಿಕೊಂಡಿದ್ದರು. ಆದರೀಗ ವೀರೇಂದ್ರ ಹೆಗ್ಗಡೆ ನಿರ್ವಹಿಸಿದ್ದಾರೆ.
ಕಂಬಳದ ಇತಿಹಾಸ ಅರಿಯುತ್ತಾ ಹೋದಂತೆಲ್ಲ ಅದಕ್ಕೂ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೂ ಇರುವ ಅವಿನಾಭಾವ ನಂಟಿನ ವಿಚಾರ ರಾಜೇಂದ್ರ ಸಿಂಗ್ ಬಾಬು ಅವರನ್ನು ಬೆರಗುಗೊಳಿಸಿತ್ತಂತೆ.
ತುಳುನಾಡ ಸೀಮೆಯ ಖಾಸಗಿ ಮನೋರಂಜನೆಯ ಕ್ರೀಡೆಯಾಗಿದ್ದ ಕಂಬಳವನ್ನು ಎಪ್ಪತ್ತರ ದಶಕದಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಿದ್ದವರು ವೀರೇಂದ್ರ ಹೆಗ್ಗಡೆ. ನಂತರ ಬೇರೆ ಬೇರೆ ರೂಪಗಳಲ್ಲಿ ರೂಪಾಂತರ ಹೊಂದಿ ಇಡೀ ಕರುನಾಡನ್ನೇ ಸೆಳೆದುಕೊಂಡಿತ್ತು. ಕಾರಣದಿಂದಲೇ ವೀರೇಂದ್ರ ಹೆಗ್ಗಡೆ ಸಿನಿಮಾದಲ್ಲಿನ ಮಹತ್ವದ ಪಾತ್ರ ಮಾಡಬೇಕೆಂಬ ಆಸೆಯೊಂದು ಬಾಬು ಅವರೊಳಗೆ ಚಿಗಿತುಕೊಂಡಿತ್ತು.

ರಾಜೇಂದ್ರ ಸಿಂಗ್ ಬಾಬು ಮಾತನಾಡಿ ಕಂಬಳದ ಬಗ್ಗೆ ವಿಶೇಷ ಪ್ರೀತಿ ಹೊಂದಿರುವ ಹೆಗ್ಗಡೆಯವರು ನಟಸಲು ಒಪ್ಪಿಗೆ ಸೂಚಿಸಿದ್ದರು. ಕಡೆಗೂ ಒಂದಿಡೀ ಸಿನಿಮಾದ ಆತ್ಮದ, ಮೌಲಿಕ ಸಂದೇಶ ರವಾನಿಸುವ ಪಾತ್ರಕ್ಕೆ ವೀರೇಂದ್ರ ಹೆಗ್ಗಡೆ ಜೀವ ತುಂಬಿದ್ದಾರೆ. À ಪಾತ್ರ ಕೂಡಾ ವೀರಕಂಬಳದ ಆಕರ್ಷಣೆಗಳಲ್ಲೊಂದಾಗಿದೆ ಎಂದು ಹೇಳಿದ್ದಾರೆ
ಚಿತ್ರವನ್ನು ಡಾ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ಚೇತನ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ.
ವಿಜಯ್ ಕೊಡಿಯಾಲ್‍ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ಅವರ ವಸ್ತ್ರವಿನ್ಯಾಸವಿದೆ.

