Dr. Vishnuvardhan memorial construction near Kengeri: Foundation stone for the memorial to be laid on September 18, his birthday

ಕೆಂಗೇರಿ ಬಳಿ ಡಾ . ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ: ಹುಟ್ಟುಹಬ್ಬವಾದ ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು - CineNewsKannada.com

ಕೆಂಗೇರಿ ಬಳಿ ಡಾ . ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ: ಹುಟ್ಟುಹಬ್ಬವಾದ ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು

ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸ ಸಿಂಹ ವಿಷ್ಣುವರ್ಧನ್ ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಇದರಿಂದ ಅವರ ಅಭಿಮಾನಿಗಳಲ್ಲಿ ಬಾರಿ ನಿರಾಸೆ ಮೂಡಿಸಿತ್ತು. ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ.

ಸೆಪ್ಟೆಂಬರ್ 18ರಂದು ಅಮೃತಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಮಹತ್ವದ ಕೆಲಸಕ್ಕೆ ದಾದಾರ ಫ್ಯಾನ್ಸ್ ಮುಂದಾಗುತ್ತಿದ್ದಾರೆ.

ವಿಷ್ಣು ಸೇನಾ ಸಮಿತಿ ವೀರಕಪುತ್ರ ಶ್ರೀನಿವಾಸ್ ಮಾಹಿತಿ ನೀಡಿ ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಹೇಳಿಕೇಳಿ ಕಿಚ್ಚ ವಿಷ್ಣುದಾದಾರ ಅಪ್ಪಟ ಅಭಿಮಾನಿ. ಸುದೀಪ್ ಅವರ ಹುಟ್ಟುಹಬ್ಬದಂದೇ ಯಜಮಾನರ ಸ್ಮಾರಕದ ಬ್ಲ್ಯೂಪ್ರಿಂಟ್‍ನ್ನು ಸ್ವತಃ ಕಿಚ್ಚ ಅನಾವರಣ ಮಾಡಲಿದ್ದಾರೆ. ಸೆಪ್ಟೆಂಬರ್ 18ರಂದು ದಾದಾ ಬರ್ತಡೇ ದಿನವೇ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು. ಕೆಂಗೇರಿ ಬಳಿ ನಿರ್ಮಾಣ ಆಗುವ ಸ್ಮಾರಕ, ಅಭಿಮಾನ್ ಸ್ಟುಡಿಯೋ ಪುಣ್ಯಭೂಮಿಗೆ ಸಮ ಅಲ್ಲ ಎಂದು ತಿಳಿಸಿದ್ದಾರೆ.

ಅಮೃತವರ್ಷ ಆಚರಿಸಲು ಮೂರು ವರ್ಷದಿಂದ ಪ್ಲಾನ್ ಮಾಡಿಕೊಳ್ಳುತ್ತಿದ್ದೇವೆ. ಅದೇ ದಿನದಂದು ಸ್ಮಾರಕ ಕೆಲಸ ನಿರ್ಮಾಣ ಕೆಲಸ ಆರಂಭಿಸುತ್ತಿದ್ದೇವೆ. ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಸರ್ ಬರ್ತಡೇ ದಿನದಂದು ಸ್ಮಾರಕ ಹೇಗಿರಲಿದೆ ಎಂಬ ಮಾಡೆಲ್ ಪರಿಚಯಿಸುತ್ತೇವೆ. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು ಹಾಕುತ್ತೇವೆ. ಪುಣ್ಯಭೂಮಿಗೆ ಸಮ ಎಂದು ವಾದ ಮಾಡಲು ಹೋಗುವುದಿಲ್ಲ. ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪ್ಯಾರೆಲ್ ಎಂದು ಹೇಳುವುದಿಲ್ಲ. ಇದು ಅಸಂಖ್ಯಾತ ಭಾವನೆ ಬೆಸೆದ ಜಾಗ ಇದು. ಪುಣ್ಯಭೂಮಿ ಉಳಿಸಿಕೊಳ್ಳುತ್ತೇವೆ. ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಕುಟುಂಬದವರು ಹೇಳಿದ್ದಾರೆ. ನೀವೆಲ್ಲರೂ ನಿರ್ಧಾರ ಮಾಡಿಕೊಂಡು ಬನ್ನಿ ಎಂದಿದ್ದಾರೆ. ಅದಕ್ಕಾಗಿ ರೂಪುರೇಷೆ ಸಿದ್ದ ಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ದಾದಾ ಅವರ ದರ್ಶನ ಕೇಂದ್ರ ಮಾಡುತ್ತೇವೆ. ಅದು ಅರ್ಥಪೂರ್ಣ ಕೆಲಸಕ್ಕೆ ವೇದಿಕೆಯಾಗಲಿದೆ ಎಂಬುದನ್ನು ಸೆಪ್ಟೆಂಬರ್ 2ಕ್ಕೆ ಮಾಹಿತಿ ನೀಡುತ್ತೇನೆ ಎಂದರು.

ಯಜಮಾನರ ಮಹೋತ್ಸವ

ಸಾಹಸ ಸಿಂಹ ವಿಷ್ಣುವರ್ಧನ್ ಅವರ ಯಜಮಾನರ ಅಮೃತ ಮಹೋತ್ಸವನ್ನ ಒಂದು ದಿನ ಮಾಡೋಕೆ ಪ್ಲಾನ್ ಮಾಡಲಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಈ ಸಂಭ್ರಮ ಮಾಡಲಾಗುತ್ತಿದೆ. ಈ ಒಂದು ಅಮೃತ ಮಹೋತ್ಸವದಲ್ಲಿ ಇಡೀ ಇಂಡಸ್ಟ್ರಿ ಭಾಗಿ ಆಗಲಿದೆ ಎಂದು ಮಾಹಿತಿ ಹಂಚಿಕೊಂಡರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin