ರೂಪವೇ ಶಾಪವಾದವಳ ಕಥೆ `ದೃಷ್ಟಿಬೊಟ್ಟು’ ಸೆಪ್ಟಂಬರ್ 9 ರಿಂದ ಆರಂಭ
ಹಿರಿಯ ನಟಿ ಅಂಬಿಕಾ ಕಿರುತೆರೆಗೆ ಮರಳಿ ಸೇರ್ಪಡೆ, ನಟ ವಿಜಯ್ ಸೂರ್ಯ ಮತ್ತೆ ಕಲರ್ಸ್ ಕನ್ನಡ ವಾಹಿನಿಗೆ ಪ್ರವೇಶ, ನಟ ರಕ್ಷ್ ನಿರ್ಮಾಣ ಹೀಗೆ ಹಲವು ವಿಶೇಷತೆಗಳಿರುವ “ದೃಷ್ಟಿ ಬೊಟ್ಟು” ಇದೇ ತಿಂಗಳ 9 ರಿಂದ ಜನರ ಮನೆ ಮನೆಗೆ ಬರಲು ಸಜ್ಜಾಗಿದೆ
ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿ ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆ ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು `ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ.
ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ.
`ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು `ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ
ಈ ಧಾರಾವಾಹಿಯ ಸ್ಪೆಷಲ್ ಪಾರ್ಟನರ್ ಸ್ಪರ್ಶ್ ಮಸಾಲಾ. ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು `ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.
ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ.
ದುರುಳ ಪೆÇೀಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳುತ್ತಾ ಮುಂದೆ ಸಾಗುತ್ತದೆ. ದೃಷ್ಟಿಗೆ ತನ್ನ ಸೋದರಿ ಸಿಕ್ಕಳೆ ವಿಧಿ ದತ್ತ ಮತ್ತು ದೃಷ್ಟಿಯನ್ನು ಒಂದುಮಾಡುವುದೆ ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಬಲ್ಲಳೆ ಇಂಥ ಎಲ್ಲ ಪ್ರಶ್ನೆಗಳಿಗೂ ಉತ್ತರ ಬೇಕೆಂದರೆ ನೀವು `ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೋಡಬೇಕು.
ಸೆಪ್ಟೆಂಬರ್ 9ರ ಸಂಜೆ 6:30ಕ್ಕೆ ತಪ್ಪದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮೊದಲ ಸಂಚಿಕೆ ವೀಕ್ಷಿಸಬೇಕು. ಬಳಿಕ ಜಿಯೊ ಸಿನಿಮಾ ಆಪ್ ನಲ್ಲಿ ಕೂಡ `ದೃಷ್ಟಿಬೊಟ್ಟು’ ಧಾರಾವಾಹಿ ವೀಕ್ಷಿಸಬಹುದಾಗಿದೆ.