Duniya Vijay-S Narayan combination film “Marutha” is all set for release

ದುನಿಯಾ ವಿಜಯ್- ಎಸ್ ನಾರಾಯಣ್ ಕಾಂಬಿನೇಷನ್ ಚಿತ್ರ “ಮಾರುತ” ಬಿಡುಗಡೆಗೆ ಸಜ್ಜು - CineNewsKannada.com

ದುನಿಯಾ ವಿಜಯ್- ಎಸ್ ನಾರಾಯಣ್ ಕಾಂಬಿನೇಷನ್ ಚಿತ್ರ “ಮಾರುತ” ಬಿಡುಗಡೆಗೆ ಸಜ್ಜು

ಹಿರಿಯ ನಿರ್ದೇಶಕ ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದ ಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ನಿರ್ಮಿಸಿರುವ “ಮಾರುತ” ನವೆಂಬರ್ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ

ನಿರ್ದೇಶಕ ಎಸ್ ನಾರಾಯಣ್ ಮಾತನಾಡಿ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣಕ್ಕೆ ಮುಂದಾದರು. ಶ್ರೇಯಸ್ ಮಂಜು ಹಾಗೂ ಬೃಂದಾ ಆಚಾರ್ಯ ನಾಯಕ – ನಾಯಕಿ ಅಂತ ನಿಗದಿಯಾದರು. ಚಿತ್ರದಲ್ಲಿ ಎಲ್ಲರ ಗಮನ ಸೆಳೆಯುವ ಪ್ರಮುಖಪಾತ್ರಕ್ಕೆ ಉತ್ತಮ ನಟರೊಬ್ಬರು ಬೇಕಿತ್ತು. ಆಗ ನಮಗೆ ನೆನಪಾಗಿದ್ದೆ ದುನಿಯಾ ವಿಜಯ್ ಅವರು. ಅಭಿನಯಿಸಲು ವಿಜಯ್ ಅವರು ಒಪ್ಪಿದ್ದು ಬಹಳ ಖುಷಿಯಾಯಿತು. ನಿರ್ದೇಶನದ 51ನೇ ಚಿತ್ರ. ಇಷ್ಟು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು, ಶರತ್ ಲೋಹಿತಾಶ್ವ ಅವರ ಜೊತೆಗೆ ಕೆಲಸ ಮಾಡಿರುವ ಮೊದಲ ಚಿತ್ರವಿದು. ರಂಗಾಯಣ ರಘು, ಸಾಧುಕೋಕಿಲ, ತಾರಾ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ, ವಿನಯ್ ಬಿದ್ದಪ್ಪ, ರಣವ್ ಹೀಗೆ ದೊಡ್ಡ ತಾರಾಬಳಗವೇ ಇದೆ. ವಿಶೇಷಪಾತ್ರದಲ್ಲಿ ರವಿಚಂದ್ರನ್ ಅವರು ನಟಿಸಿದ್ದಾರೆ ಎಂದರು

ಮೊಬೈಲ್ ಯುಗದಲ್ಲಿ ನಾವು ನಮ್ಮ ಮಕ್ಕಳ ಬಗ್ಗೆ ಎಷ್ಟು ಗಮನ ಕೊಟ್ಟರೂ ಕಡಿಮೆ. ಅದರಲ್ಲೂ ಹೆಣ್ಣುಮಕ್ಕಳ ಮೇಲಂತೂ ವಿಶೇಷ ಗಮನ ಕೊಡಬೇಕು. ತಂದೆ – ತಾಯಿ ಮಕ್ಕಳ ಜೊತೆಗೆ ಸ್ವಲ್ಪ ಸಮಯ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದ ಮೂಲಕ ತೋರಿಸಿದ್ದೇವೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ ಚಿತ್ರವಿದು. ಈ ಚಿತ್ರವನ್ನು ಸದ್ಯದಲ್ಲೇ ಪೆÇಲೀಸ್ ಅಧಿಕಾರಿಗಳು ಹಾಗೂ ಮಹಿಳಾ ಆಯೋಗದವರು ವೀಕ್ಷಿಸಲಿದ್ದಾರೆ. “ಮಾರುತ 2” ಕೂಡ ಬರಲಿದೆ ಎಂದು ಹೇಳಿದರು

ನಟ ದುನಿಯಾ ವಿಜಯ್ ಮಾತನಾಡಿ ಮನುಷ್ಯನಿಗೆ ಎಲ್ಲದಕ್ಕಿಂತ ಶಿಸ್ತು ಹಾಗೂ ಸಮಯ ಪರಿಪಾಲನೆ ಮುಖ್ಯ. ಅದನ್ನು ಕಲಿತದ್ದು ಎಸ್ ನಾರಾಯಣ್ ಅವರಿಂದ. ಇನ್ನೂ, ಕೆ.ಮಂಜು ಜೊತೆಗೆ ಈಗಾಗಲೇ ಸಿನಿಮಾ ಮಾಡಿದ್ದೀನಿ. ರಮೇಶ್ ಯಾದವ್ ಮಂಜು ಅವರಿಗೆ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಶ್ರೇಯಸ್, ಬೃಂದಾ ಆಚಾರ್ಯ ಸೇರಿದಂತೆ ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು

ನಿರ್ಮಾಪಕ ಕೆ ಮಂಜು ಮಾತನಾಡಿ 225 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿಬಿಡುಗಡೆಯಾಗುತ್ತಿದೆ. ನವೆಂಬರ್ ತಿಂಗಳು ನಮಗೆ ಲಕ್ಕಿ. ಏಕೆಂದರೆ,ನಿರ್ಮಾಣದ “ರಾಜಾಹುಲಿ” ಹಾಗೂ ರಮೇಶ್ ಯಾದವ್ ನಿರ್ಮಾಣದ “ದಾಸ” ಚಿತ್ರಗಳು ನವೆಂಬರ್ ನಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದವು. ಈಗ “ಮಾರುತ” ಸಹ ಅದೇ ರೀತಿ ಯಶಸ್ವಿಯಾಗುವ ಭರವಸೆ ಇದೆ ಎಂದು ಹೇಳಿದರು

ನಿರ್ಮಾಪಕ ರಮೇಶ್ ಯಾದವ್ ಮಾತನಾಡಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರವನ್ನು ಕೆ.ಮಂಜು ಅವರ ಜೊತೆಗೆ ಸೇರು ನಿರ್ಮಾಣ ಮಾಡಿರುವುದು ಖುಷಿಯಾಗಿದೆ. ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು.

ನಾಯಕ ಶ್ರೇಯಸ್ ಮಂಜು ಮಾತನಾಡಿ ಎಸ್ ನಾರಾಯಣ್ ಅವರಂತಹ ಅನುಭವಿ ನಿರ್ದೇಶಕರ ಬಳಿ ಕೆಲಸ ಮಾಡಿ ಸಾಕಷ್ಟು ಕಲಿತಿದ್ದೇನೆ. ಇನ್ನೂ, ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದ್ದು, ಅವರೊಟ್ಟಿಗೆ ಅಭಿನಯಿಸಿದ್ದು, ಬಹಳ ಸಂತೋಷವಾಗಿದೆ. ನಮ್ಮ ಅಪ್ಪ ಹಾಗೂ ರಮೇಶ್ ಯಾದವ್ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಾನು ಕೇಳಿದನ್ನೆಲ್ಲಾ ಒಂದು ದಿನ ಇಲ್ಲ ಎನ್ನದೆ ನೀಡಿರುವ ನಮ್ಮಪ್ಪನ ಬಗ್ಗೆ ಎಷ್ಟು ಹೇಳಿದರು ಕಡಿಮೆ ಎಂದು ತಿಳಿಸಿದರು.

ನಾಯಕಿ ಬೃಂದಾ ಆಚಾರ್ಯ ಮಾತನಾಡಿ ಎಸ್ ನಾರಾಯಣ್ ಅವರ ಜೊತೆಗೆ ಕೆಲಸ ಮಾಡಿ ಶಿಸ್ತನ್ನು ಕಲಿತಿದ್ದೇನೆ. ಒಂದೊಳ್ಳೆ ಪಾತ್ರ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು

ಚಿತ್ರದಲ್ಲಿ ನಟಿಸಿರುವ ಹಿರಿಯ ನಟ ಶರತ್ ಲೋಹಿತಾಶ್ವ, ವಿನಯ್ ಬಿದ್ದಪ್ಪ, ರಣವ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin