ದುನಿಯ ವಿಜಯ್ ಪುತ್ರಿ ರಿತನ್ಯಾ ಹಾಗು ರಿಷಿ ನಟನೆಯ “ಜವರ’ ಆರಂಭ
ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಪುತ್ರಿ ರಿತನ್ಯ ಮತ್ತು ಅಪರೇಷ್ ಅಲಮೇಲಮ್ಮ ಖ್ಯಾತಿಯ ನಟ ರಿಷಿ ನಟನೆಯ “ಜವರ” ಸಿನಿಮಾ ಸೆಟ್ಟೇರಿದೆ. ಯಲಾ ಕುನ್ನಿ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ದಳವಾಯಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಸ್ಮಶಾನದಲ್ಲಿ ಶವಗಳನ್ನು ಹೂಳುವ ಕೆಲಸ ಮಾಡುತ್ತಿರುವ ನೀಲಮ್ಮ “ಜವರ” ಸಿನಿಮಾಗೆ ಕ್ಲಾಪ್ ಮಾಡಿದ್ದು ವಿಶೇಷವಾಗಿತ್ತು. ವಿಶೇಷ ಪಾತ್ರಗಳಲ್ಲಿ ಹಿರಿಯ ನಟ ರಂಗಾಯಣ ರಘು ಮತ್ತು ನಟಿ ಶ್ರುತಿ ಕಾಣಿಸಿಕೊಳ್ಳುತ್ತಿದ್ದಾರೆ
ನಟ ರಿಷಿ ಮಾತನಾಡಿ ರುದ್ರ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಕಥೆ ತುಂಬಾ ಇಷ್ಟವಾಯಿತು, ನಿರ್ದೇಶಕರು ಕಥೆ ಹೇಳುವಾಗಲೇ ಸ್ಕ್ರೀನ್ ಪ್ಲೇ ಕೂಡ ರೆಡಿಮಾಡಿಕೊಂಡಿದ್ದರು. ಅದು ತುಂಬಾ ಇಷ್ಟ ಆಯ್ತು. ನಿರ್ದೇಶಕರು ತುಂಬಾ ಯೋಚಿಸಿ ಮಾಡಿರುವ ಕಥೆ ಇದು.ನಿರ್ದೇಶಕ ಎನ್ನುವುದಕ್ಕಿಂತ ಕ್ರಿಯೇಟಿವ್ ಹೆಡ್ ಎನ್ನುಬಹುದು. ರಿತನ್ಯಾ ತುಂಬಾ ಚೆನ್ನಾಗಿ ನಟಿಸುತ್ತಾರೆ’ ಎಂದು ಹೇಳಿದರು.

ನಾಯಕಿ ರಿತನ್ಯಾ ಮಾತನಾಡಿ ‘ವೈದ್ಯಕೀಯ ವಿದ್ಯಾರ್ಥಿನಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ದೊಡ್ಡ ದೊಡ್ಡ ಕಲಾವಿದರು ಈ ಸಿನಿಮಾದಲ್ಲಿದ್ದಾರೆ ಅವರ ಜೊತೆ ನಟಿಸುತ್ತಿರುವುದು ತುಂಬಾ ಖುಷಿ ಇದೆ. ತುಂಬಾ ಲಕ್ಕಿ ಎನಿಸುತ್ತೆ’ ಎಂದು ಹೇಳಿದರು.
ನಿರ್ದೇಶಕ ಪ್ರದೀಪ್ ಮಾತನಾಡಿ ‘ಸಿನಿಮಾದ ಕಥೆಗೆ ನಟಿ ಶ್ರುತಿ ಮತ್ತು ರಂಗಾಯಣ ರಘುÀು ತುಂಬಾ ಅವಶ್ಯಕತೆ ಇತ್ತು. ಪಾತ್ರ ತುಂಬಾ ಚೆನ್ನಾಗಿದೆ. ರಿತನ್ಯಾ ತುಂಬಾ ಚೆನ್ನಾಗಿ ನಟಿಸುತ್ತಾರೆ. ಅದನ್ನ ನೋಡಿ ವಿಜಯ್ ಅವರಿಗೆ ಕಥೆ ಹೇಳಿದೆ ,ಅವರಿಗೆ ಇಷ್ಟ ಆಯ್ತು ಮಗಳಿಗೆ ಓಕೆ ಆಗಬೇಕು ಅಂತ ಹೇಳಿದರು ಎಂದು ಮಾಹಿತಿ ನೀಡಿದರು
ರಂಗಾಯಣ ರಘು ಮಾತನಾಡಿ ಶ್ರುತಿ ಅವರ ಜೊತೆ ಮತ್ತೆ ನಟಿಸುತ್ತಿದ್ದೀನಿ. ಪಾತ್ರ ತುಂಬಾ ಅದ್ಭುತವಾಗಿದೆ. ಈ ಸಿನಿಮಾದಲ್ಲಿ ಇರುವ ಜಾಗ ತುಂಬಾ ಪ್ರಶಾಂತವಾಗಿರುತ್ತೆ, ಶಿವ ಇರುವ ಜಾಗವದು. ಅಂಥ ಅದ್ಭುತ ಪಾತ್ರದಲ್ಲಿ ನಟಿಸುತ್ತಿದ್ದೇನೆ ‘ ಎಂದು ಹೇಳಿದರು.

ಹಿರಿಯ ನಟಿ ಶ್ರುತಿ ಮಾತನಾಡಿ ಚಿತ್ರದಲ್ಲಿ ರಾಯಲ್ ಮೀನಾಕ್ಷಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ತನ್ನ ಪಾತ್ರದ ಬಗ್ಗೆ ತುಂಬಾ ಖುಷಿಯಾಗಿದೆ. ‘ಕಥೆ ತುಂಬಾ ಚೆನ್ನಾಗಿದೆ. ಬದುಕೆಲ್ಲ ಮುಗಿದ ಮೇಲೆ ಹೊರಡುವ ಜಾಗದಲ್ಲಿ ಇರ್ತೀನಿ’ ಎಂದರು
ಧರ್ಮ ವಿಶ್ ಸಂಗೀತ ನಿರ್ದೇಶನ. ಹಾಲೇಶ್ ಕ್ಯಾಮರಾ ಛಾಯಾಗ್ರಹಣವಿದೆ

