ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ವೇಳೆ ನವೀನ್ ಶಂಕರ್, ದಾನೀಶ್ ಸೇಠ್ “ಕಿರಿಕ್” ಗೆ ಸಜ್ಜು
ಕನ್ನಡ ಚಿತ್ರರಂಗದಲ್ಲಿ ಮುಂಚೂಣಿ ವಿತರಣಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಕೆಆರ್‍ಜಿ ಸಂಸ್ಥೆಯ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಮುಂದಾಳತ್ವದಲ್ಲಿ ಸಂಸ್ಥೆ ಯಶಸ್ವಿಯಾಗಿ ಮುನ್ನೆಡೆಯುತ್ತಿದ್ದು ಜೊತೆ ಜೊತೆಗೆ ನಿರ್ಮಾಣದಲ್ಲಿಯೂ ಸೈ ಎನಿಸಿಕೊಂಡಿದೆ.
ಇದೀಗ ಸಂಸ್ಥೆಯ ನಾಲ್ಕನೇ ನಿರ್ಮಾಣದ ಚಿತ್ರ “ಕಿರಿಕ್ “et’ 11: ಚಿತ್ರ ಒಂದು ನಗೆ ಹಬ್ಬವಾಗಿ ತಯಾರಾಗಲಿದೆ. ಒಂದಷ್ಟು ಯುವಕರು ಯಾವುದೇ ರೀತಿಯಲ್ಲೂ ಅದೃಷ್ಟ ದೇವತೆ ಒಲಿಯದೆ ಇದ್ದಾಗ ಇಡೀ ದೇಶ ಅತ್ಯಂತ ಹುಮ್ಮಸ್ಸಿನಿಂದ ಆಡುವ, ನೋಡುವ ಕ್ರಿಕೆಟ್ ನಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗುತ್ತಾರೆ.
ನವೀನ್ ಶಂಕರ್ ಮತ್ತು ದಾನಿಶ್ ಸೇಠ್ ನಟನೆಯ ಈ ಚಿತ್ರವನ್ನು ಮನೋಜ್ ಕುಮಾರ್ ಕಾಲಾವನನ್ ಕಥೆ ಹೆಣೆದಿದ್ದರೆ , ಸುಮನ್ ಕುಮಾರ್ ಅವರು ನಿರ್ದೇಶಿಸಲಿದ್ದಾರೆ.
ಸುಮನ್ ಕುಮಾರ್ ಅವರು ಈ ಹಿಂದೆ ರಘುತಾತ ಚಿತ್ರವನ್ನು ನಿರ್ದೇಶಿಸಿದ್ದು , ವೆಬ್ ಸೀರಿಸ್ ಲೋಕದಲ್ಲಿ ಬಹಳ ಜನಪ್ರಿಯ ಆಗಿರುವ The Family Man ಒಚಿಟಿ ಮತ್ತು Farzi ಯ ಕಥೆಯನ್ನು ಹೆಣೆದಿದ್ದಾರೆ.
ವಾಸುಕಿ ವೈಭವ್ ಸಂಗೀತ
ಈ ಚಿತ್ರಕ್ಕೆ ಸಂಗೀತವನ್ನು ಬಡವ ರಾಸ್ಕಲ್ ಚಿತ್ರಕ್ಕೆ ಸಂಗೀತ ನೀಡಿದ್ದ ವಾಸುಕಿ ವೈಭವ್ ಅವರು ನೀಡಲಿದ್ದಾರೆ. ಈ ಚಿತ್ರವನ್ನು ಕಾರ್ತಿಕ್ , ವಿಜಯ್ ಸುಬ್ರಮಣ್ಯಂ ಮತ್ತು ಯೋಗಿ ಜಿ ರಾಜ್ ಅವರು ನಿರ್ಮಿಸಲಿದ್ದಾರೆ.
ಕೆ ಆರ್ ಜಿ ಸ್ಟುಡಿಯೋಸಿನ 6 ವರ್ಷಗಳ ಚಿತ್ರರಂಗದ ಪಯಣದಲ್ಲಿ ಇದು 4 ನೇ ಚಿತ್ರ ನಿರ್ಮಾಣವಾಗಲಿದೆ.ಕಿರಿಕ್ `et’11 ಚಿತ್ರದ ಚಿತ್ರೀಕರಣ ಈ ವರ್ಷ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಸಮಯದಲ್ಲೇ ಶುರುವಾಗಲಿದೆ