“ಎಲ್ರ ಕಾಲೆಳಿಯತ್ತೆ ಕಾಲ’.ಚಿತ್ರ ಏಪ್ರಿಲ್ 17 ರಂದು ಬಿಡುಗಡೆ
ಸುಜಯ್ ಶಾಸ್ತ್ರಿ ನಿರ್ದೇಶನದ, ಗೋವಿಂದರಾಜುನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. 90ರ ಕಾಲಘಟ್ಟದ ರೆಟ್ರೊ ಶೈಲಿಯ ಕಥಾಹಂದರ ಹೊಂದಿರುವ ಚಿತ್ರ ಏಪ್ರಿಲ್ 17 ರಂದು ಚಿತ್ರ ಬಿಡುಗಡೆಯಾಗಲಿದೆ

ನಿರ್ದೇಶಕ ಸುಜಯ್ ಶಾಸ್ತ್ರಿ ಮಾತನಾಡಿ ರಿಯಾಲಿಟಿ ಶೋ ವೊಂದರಲ್ಲಿ ಚಂದನ್ ಶೆಟ್ಟಿ ನೋಡಿ ಕಥೆಗೆ ಸೂಕ್ತ ನಾಯಕ ಎಂದೆನಿಸಿತು. ಗೆಳೆಯ ರಾಜಗುರು ಹೊಸಕೋಟೆ ಬರೆದಿರುವ ಚಿತ್ರದ ಕಥೆ ಹೇಳಿದ್ದೆವು. ಚಿತ್ರೀಕರಣಕ್ಕೂ ಮುನ್ನ ಪೂರ್ವತಯಾರಿ ನೀಡಲಾಯಿತು. ಚಿತ್ರದಲ್ಲಿ ಚಂದನ್, ನಾಯಕಿ ಅರ್ಚನಾ ಕೊಟ್ಟಿಗೆ ಉತ್ತಮವಾಗಿ ಅಭಿನಯಿಸಿದ್ದಾರೆ. ಎಲ್ಲರ ಮನಸ್ಸಿಗೂ ಹತ್ತಿರವಾಗುವಂತಹ ಕಥೆಇದೆ, ಪ್ರವೀಣ್ – ಪ್ರದೀಪ್ ಸುಮಧುರ ಸಂಗೀತ ನೀಡಿದ್ದಾರೆ ಎಂದರು.
ನಾಯಕ ಚಂದನ್ ಶೆಟ್ಟಿ ಮಾತನಾಡಿ ನಾಯಕನಾಗಿ ಮೊದಲ ಚಿತ್ರ. ಸುಜಯ್ ಶಾಸ್ತ್ರಿ, ರಾಜಗುರು ಹೊಸಕೋಟೆ ಅವರೆಲ್ಲಾ ರಂಗಭೂಮಿ ಹಿನ್ನೆಲೆಯವರು. ಒಂದು ರೀತಿ ಶಾಲೆ ಇದ್ದ ಹಾಗೆ. ಅವರಿಂದ ಸಾಕಷ್ಟು ಕಲಿತಿದ್ದೇನೆ. ಟ್ರೇಲರ್ ಗೆ ನಿರೀಕ್ಷೆಗೂ ಮೀರಿ ಮೆಚ್ಚುಗೆ ಸಿಕ್ಕಿದೆ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡುವ ಒಂದೊಳ್ಳೆ ಎಂದು ಹೇಳಿದರು

ನಾಯಕಿ ಅರ್ಚನಾ ಕೊಟ್ಟಿಗೆ ಮಾತನಾಡಿ ತಮ್ಮ ಪಾತ್ರ ಚೆನ್ನಾಗಿದೆ ಎಂದು ಹೇಳಿದರು
ನಿರ್ಮಾಪಕ ಗೋವಿಂದರಾಜು ಮಾತನಾಡಿ ರಾಜಗುರು ಹೇಳಿದ ಕಥೆ ಇಷ್ಟವಾಯಿತು. ಇದೇ ಏಪ್ರಿಲ್ 17 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಕೆ.ವಿ.ಎನ್ ಸಂಸ್ಥೆ ಚಿತ್ರ ವಿತರಣೆ ಮಾಡುತ್ತಿದೆ ಎಂದು ಹೇಳಿದರು.
ರಾಜಗುರು ಹೊಸಕೋಟೆ ಮಾಹಿತಿ ನೀಡಿ,ಕಾಲದ ಮಹತ್ವ ಸಾರುವ ಕಥೆಯಿದು ಎಂದರು
ಚಿತ್ರದಲ್ಲಿ ನಟಿಸಿರುವ ಮಂಜು ಪಾವಗಡ, ಮಾಹಂತೇಶ್, ಅನಂತ ಪದ್ಮನಾಭ ಹಾಗೂ ಸಂಗೀತ ನಿರ್ದೇಶಕ ಪ್ರದೀಪ್ ಚಿತ್ರದ ಕುರಿತು ಮಾತನಾಡಿದರು.

