Even if “Thangalaan” has a hundred Part, it will be played by Chian Vikram

“ತಂಗಲಾನ್” ನೂರು ಭಾಗ ಬಂದರೂ ಅದರಲ್ಲಿ ನಾಯಕನಾಗಿ ನಟಿಸುವೆ: ಚಿಯಾನ್ ವಿಕ್ರಮ್ - CineNewsKannada.com

“ತಂಗಲಾನ್” ನೂರು ಭಾಗ ಬಂದರೂ ಅದರಲ್ಲಿ ನಾಯಕನಾಗಿ ನಟಿಸುವೆ: ಚಿಯಾನ್ ವಿಕ್ರಮ್

ತಮಿಳು ಚಿತ್ರರಂಗದಲ್ಲಿ “ಅನ್ನಿಯನ್”, “ಪಿತಾಮಗನ್” ಸೇರಿದಂತೆ ವಿಭಿನ್ನ ಪಾತ್ರಗಳ ಮೂಲಕ ಜನಮನ ಗೆದ್ದಿರುವ ಚಿಯಾನ್ ವಿಕ್ರಮ್ ಇದೀಗ, “ತಂಗಲಾನ್” ಚಿತ್ರದ ಮೂಲಕ ಮತ್ತೊಮ್ಮೆ ಅಭಿಮಾನಿಗಳನ್ನು ಮೋಡಿ ಮಾಡಲು ಸಜ್ಜಾಗಿದ್ದಾರೆ. ತಂಗಲಾನ್ 100 ಭಾಗ ಬಂದರೂ ಅವುಗಳಲ್ಲಿ ನಾಯಕನಾಗಿ ಕಾಣಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ನಟ ಚಿಯಾನ್ ವಿಕ್ರಮ್

“ಕಬಾಲಿ” ಖ್ಯಾತಿಯ ನಿರ್ದೇಶಕ ಪ. ರಂಜಿತ್ ಅವರು ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಮುಂದಿಟ್ಟುಕೊಂಡು ಚಿತ್ರ ಮಾಡಿದ್ದಾರೆ. ಹೀಗಾಗಿ ಚಿತ್ರ ಮತ್ತಷ್ಟು ಕುತೂಹಲ ಹೆಚ್ಚು ಮಾಡಿದೆ. ಅಂದ ಹಾಗೆ ಚಿತ್ರ ಆಗಸ್ಟ್ 15ಕ್ಕೆ ಸ್ವಾತಂತ್ರ್ಯೋತ್ಸವ ದಿನದಂದು ತೆರೆಗೆ ಬರಲಿದೆ.

ಜ್ಞಾನವೇಲ್ ರಾಜ್ ನಿರ್ಮಾಣದ, ಪ.ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್ ಅಭಿನಯದ `ತಂಗಲಾನ್’ ಚಿತ್ರ ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಅದರಲ್ಲಿ ಕನ್ನಡದಲ್ಲಿಯೂ ಕೂಡ.ಚಿತ್ರದಲ್ಲಿ ಚಿಯಾನ್ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟಿಷ್ ನಟ ಡೇನಿಯಲ್ ಮುಂತಾದವರು ನಟಿಸಿದ್ದಾರೆ.

ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರದ ಬಗ್ಗೆ ಹೇಳಿಕೊಳ್ಳಲು ತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ವೇಳೆ ಮಾಹಿತಿ ಹಂಚಿಕೊಂಡಿತು ತಂಡ

ನಟ ಚಿಯಾನ್ ವಿಕ್ರಮ್ ಮಾತನಾಡಿ ನಾನು ಇದುವರೆಗೂ "ಅನ್ನಿಯನ್", "ಪಿತಾಮಗನ್" ಸೇರಿದಂತೆ ಹಲವು ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ. ಆದರೆ,ತಂಗಲಾನ್’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ. ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ಪ್ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್ ದೃಶ್ಯಗಳು ಸಹ ಕಷ್ಟವಾಗಿತ್ತು. ನಾವು ನಮಗೆ ಗೊತ್ತಿಲ್ಲದ ಪಾತ್ರಗಳಾಗುವುದೇ ನಿಜವಾದ ಕಷ್ಟ. ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ. ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು. ಈ ಚಿತ್ರಕ್ಕಾಗಿ ಒಂದು ಶತಕದ ಹಿಂದಕ್ಕೆಹೋಗುವಂತಾಯಿತು ಎಂದು ತಿಳಿಸಿದರು.

Chiyaan Vikram and Malavika Mohanan

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್ ಆರು ತಿಂಗಳ ತಯಾರಿ ನಡೆಸಿದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಹಂಚಿಕೊಂಡರು.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಮಾಡುವುದಕ್ಕೆ ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ `ಕಾಂತಾರ’ ದೊಡ್ಡ ಸ್ಫೂರ್ತಿ ಎಂದು ತಿಳಿಸಿದ ಚಿಯಾನ್ ವಿಕ್ರಮ್, ಉತ್ತಮ ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎನ್ನುವುದನ್ನು ಆ ಚಿತ್ರ ತೋರಿಸಿತು’ ಎಂದರು.

ನಿರ್ದೇಶಕ ಪ.ರಂಜಿತ್ ಮಾತನಾಡಿ, ಕೆಜಿಎಫ್ ಬಗ್ಗೆ ತಮಿಳಿನಲ್ಲಿ ಬಂದ ಸಣ್ಣ ಕಥೆಯನ್ನು ಆಧರಿಸಿ ಜೊತೆಗೆ ಅನೇಕ ಪತ್ರಿಕೆಗಳಲ್ಲಿ ಬಂದ ಲೇಖನ ಆಧರಿಸಿ ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಕಥೆಯನ್ನು ಮುಂದಿಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಚಿತ್ರ ಎಲ್ಲರಿಗೂ ಇಷ್ಟವಾಗಲಿದೆ ಎನ್ನುವ ವಿಶ್ವಾಸವನ್ನು ಅವರು ಇದೇ ವೇಳೆ ವ್ಯಕ್ತಪಡಿಸಿದರು.

ನಟಿ ಮಾಳವಿಕ ಮೋಹನನ್ ಮಾತನಾಡಿ. “ನಾನು ಮತ್ತು ವರಲಕ್ಷ್ಮೀ” ಕನ್ನಡ ಚಿತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡ “ತಂಗಲಾನ್” ಚಿತ್ರದ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.

Chiyaan Vikram and Malavika Mohanan

ಹಾಲಿವುಡ್ ನಟ ಡೇನಿಯಲ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin