Extra 0rdiner Man title fix for Nithin film: Kannada Bedagi Srileela is the heroine

ನಿತಿನ್ ಚಿತ್ರಕ್ಕೆ ಎಕ್ಟ್ರ ಆಡಿನರ್ ಮ್ಯಾನ್ ಶೀರ್ಷಿಕೆ ಫಿಕ್ಸ್: ಕನ್ನಡದ ಬೆಡಗಿ ಶ್ರೀಲೀಲಾ ನಾಯಕಿ - CineNewsKannada.com

ನಿತಿನ್ ಚಿತ್ರಕ್ಕೆ ಎಕ್ಟ್ರ ಆಡಿನರ್ ಮ್ಯಾನ್ ಶೀರ್ಷಿಕೆ ಫಿಕ್ಸ್: ಕನ್ನಡದ ಬೆಡಗಿ ಶ್ರೀಲೀಲಾ ನಾಯಕಿ

ತೆಲುಗು ಚಿತ್ರರಂಗದ ಪ್ರಾಮಿಸಿಂಗ್ ಹೀರೋ ನಿತಿನ್ 32ನೇ ಸಿನಿಮಾಗೆ ಟೈಟಲ್ ಫಿಕ್ಸ್ ಮಾಡಲಾಗಿದೆ. ವಕ್ಕಂತಂ ವಂಶಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಎಕ್ಟ್ರ ಆಡಿನರಿ ಮ್ಯಾನ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಚಿತ್ರಕ್ಕೆ ಕನ್ನಡದ ಬೆಡಗಿ ಶ್ರೀಲೀಲ ನಾಯಕಿ.

ಎಕ್ಟ್ರ ಆಡಿನರಿ ಮ್ಯಾನ್ ಔಟ್ ಅಂಡ್ ಔಟ್ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು, ಈಗಾಗಲೇ ಶೇ.60 ರಷ್ಟು ಚಿತ್ರೀಕರಣ ಮುಗಿಸಿದೆ. ನಿತಿನ್ ಗೆ ಜೋಡಿಯಾಗಿ ಕನ್ನಡದ ಬೆಡಗಿ ನಟಿ ಶ್ರೀಲೀಲಾ ನಟಿಸುತ್ತಿದ್ದಾರೆ.

ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರುತ್ತಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಅನೌನ್ಸ್ ಮಾಡಿರುವ ಚಿತ್ರತಂಡ ಬಿಡುಗಡೆ ದಿನಾಂಕವನ್ನೂ ಸಹ ತಿಳಿಸಿದೆ. ಇದೇ ವರ್ಷಾಂತ್ಯಕ್ಕೆ ಅಂದರೆ ಡಿಸೆಂಬರ್ 23ಕ್ಕೆ ಎಕ್ಟ್ರ ಆಡಿನರಿ ಮ್ಯಾನ್ ಸಿನಿಮಾ ತೆರೆಗೆ ಬರಲಿದೆ.

ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಪೋಟೊದಲ್ಲಿ ನಿತಿನ್ ಗಡ್ಡ, ಕೂದಲು ಬಿಟ್ಟು ರಗಡ್ ಆಗಿ ಕಾಣಿಸಿಕೊಂಡಿದ್ದರೆ ಮತ್ತೊಂದು ಪೋಟೊದಲ್ಲಿ ಸ್ಟೈಲೀಶ್ ಆಗಿ ಮಿಂಚಿದ್ದಾರೆ. ಎರಡು ಶೇಡ್‍ನಲ್ಲಿ ನಾಯಕನನ್ನು ಪರಿಚಯ ಮಾಡಿಕೊಡಲಾಗಿದೆ. ಹಿಂದೆಂದೂ ಕಾಣದ ವಿಭಿನ್ನ ಪಾತ್ರದಲ್ಲಿ ನಿತಿನ್ ನಟಿಸಿದ್ದಾರೆ.

ಈ ಮೊದಲು ಈ ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿರುವುದಾಗಿ ಚಿತ್ರತಂಡ ತಿಳಿಸಿತ್ತು. ನಿತಿನ್- ರಶ್ಮಿಕಾ ನಟನೆಯ ‘ಭೀಷ್ಮ’ ಸಿನಿಮಾ ಹಿಟ್ ಆಗಿತ್ತು. ಹಾಗಾಗಿ ಅದೇ ಕಾಂಬಿನೇಷನ್‍ನಲ್ಲಿ ಮತ್ತೊಂದು ಸಿನಿಮಾ ಘೋಷಣೆ ಆಗಿತ್ತು. ಚಿತ್ರದಲ್ಲಿ ರಶ್ಮಿಕಾ ನಟಿಸೋದು ಕನ್ಫರ್ಮ್ ಆಗಿತ್ತು. ಸಿನಿಮಾ ಮುಹೂರ್ತ ಸಮಾರಂಭದಲ್ಲೂ ರಶ್ಮಿಕಾ ಭಾಗಿ ಆಗಿದ್ದರು. ಡೇಟ್ಸ್ ಕಾರಣದಿಂದ ರಶ್ಮಿಕಾ ಚಿತ್ರದಿಂದ ಹೊರ ನಡೆದಿದ್ದು, ಆ ಜಾಗಕ್ಕೆ ಶ್ರೀಲೀಲಾ ಎಂಟ್ರಿಯಾಗಿದೆ.

ಸುಧಾಕರ್ ರೆಡ್ಡಿ ಹಾಗೂ ನಿಖಿತಾ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿರುವ ಎಕ್ಟ್ರ ಆಡಿನರಿ ಮ್ಯಾನ್ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗುತ್ತಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin