ಮಹಾನ್” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಖ್ಯಾತ ನಟಿ ವರ್ಷ ಬೊಳ್ಳಮ್ಮ
ಸದಭಿರುಚಿಯ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ಹಾಗೂ ಜನಪ್ರಿಯ ನಟ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ವರ್ಷ ಬೊಳ್ಳಮ್ಮ ಅಭಿನಯಿಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವರ್ಷ ಬೊಳ್ಳಮ್ಮ. ತಮಿಳಿನ “ಬಿಗಿಲ್”, “96” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಹಾಗೂ ತೆಲುಗು, ಮಲೆಯಾಳಂ ಚಿತ್ರಗಳಲ್ಲೂ ನಟಿಸಿರುವ ವರ್ಷ ಬೊಳ್ಳಮ್ಮ ನಟಿಸುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದೆ. ಎಂದಿದ್ಧಾರೆ
ಮೂಲತಃ ಕನ್ನಡದವಳಾದ ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ “ಮಹಾನ್” ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. “ಮಾಹಾನ್” ಒಂದು ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ ಎಂದು ತಿಳಿಸಿದ್ದಾರೆ

ಪಿ.ಸಿ.ಶೇಖರ್ ನಿರ್ದೇಶನದ ಚಿತ್ರಗಳನ್ನು ನೋಡಿದ್ದೇನೆ. ಸದಭಿರುಚಿಯ ಚಿತ್ರಗಳ ನಿರ್ದೇಶಕರು ಪಿ.ಸಿ.ಶೇಖರ್ “ಮಹಾನ್” ಚಿತ್ರದ ಕಥೆ ಹೇಳಿದಾಗ, ಕಥೆಯಲ್ಲಿರುವ ಸಾಮಾಜಿಕ ಕಳಕಳಿ ಬಹಳ ಇಷ್ಟವಾಯಿತು. ಪಿ.ಸಿ.ಶೇಖರ್ ಜೊತೆಗೆ ಕೆಲಸ ಮಾಡುತ್ತಿರುವುದು ಹಾಗೂ ವಿದ್ಯಾ ಸಂಸ್ಥೆ ನಡೆಸುತ್ತಿರುವ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ಕಳಕಳಿಯುಳ್ಳ ಈ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ನನಗೆ ಬಹಳ ಸಂತಸ ತಂದಿದೆ ಎಂದಿದ್ದಾರೆ
ವಿಜಯ ರಾಘವೇಂದ್ರ ಅವರ ಅಭಿಮಾನಿ. ಅವರೊಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ವರ್ಷ ಬೊಳ್ಳಮ್ಮ ತಿಳಿಸಿದ್ದಾರೆ.

ಚಿತ್ರದ ತಾರಾಬಳದಲ್ಲಿ ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತ ಗೌಡ, ವರ್ಷ ಬೊಳ್ಳಮ್ಮ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ

