Fans are in awe of the love song from the movie "Bad".

“ಬ್ಯಾಡ್” ಚಿತ್ರದ ಪ್ರೇಮಗೀತೆಗೆ ಅಭಿಮಾನಿಗಳು ಫಿದಾ - CineNewsKannada.com

“ಬ್ಯಾಡ್” ಚಿತ್ರದ ಪ್ರೇಮಗೀತೆಗೆ ಅಭಿಮಾನಿಗಳು ಫಿದಾ

ಪಿ.ಸಿ.ಶೇಖರ್ ನಿರ್ದೇಶನದದಲ್ಲಿ ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ಬ್ಯಾಡ್” ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ ಬರೆದಿರುವ “ನೀ ಬರುವೆ ಅಂತ ನಾ ಕಾದು ಕುಂತ” ಎಂಬ ಸುಂದರ ಪ್ರೇಮಗೀತೆ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.

ಕನ್ನಡ ಚಿತ್ರರಂಗದ ಭವರಸೆಯ ನಟ ನಕುಲ್ ಗೌಡ ಮತ್ತು ಮಾನ್ವಿತ ಹರೀಶ್ ಅಭಿನಯದ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ಪೃಥ್ವಿ ಭಟ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಹಾಡು ಜನಮನಸೂರೆಗೊಳ್ಳುತ್ತಿದ್ದು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಕುಲ್ ಗೌಡ ಹಾಗೂ ಮಾನ್ವಿತ ಹರೀಶ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ನಾಯಕನ ಬರುವಿಕೆಗಾಗಿ ಕಾದು ಕುಳಿತ್ತಿರುವ ನಾಯಕಿ, ಕಾಯುವಿಕೆಯ ಆ ಸಮಯದಲ್ಲಿ ಏನೆಲ್ಲಾ ಕಲ್ಪಿಸಿಕೊಳ್ಳುತ್ತಾಳೆ ಎಂಬುದನ್ನು ಈ ಹಾಡಿನ ಮೂಲಕ ತೋರಿಸಲಾಗಿದೆ ಎಂದು ತಿಳಿಸಿರುವ ನಿರ್ದೇಶಕ ಪಿ.ಸಿ.ಶೇಖರ್, ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ ಎನ್ನುತ್ತಾರೆ.

“ಬ್ಯಾಡ್ ” ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಿತ್ರೀಕರಣ ಮುಕ್ತಾಯವಾಗಿದೆ. ಟೀಸರ್ ಮೂಲಕ ಸದ್ದು ಮಾಡುತ್ತಿರುವ ಈ ಚಿತ್ರದ ಹಾಡುಗಳು ಸಹ ಜನಪ್ರಿಯವಾಗುತ್ತಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ “ಬ್ಯಾಡ್ ” ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ “ಬ್ಯಾಡ್” ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.

“ಪ್ರೀತಿಯ ರಾಯಭಾರಿ” ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ “ಬ್ಯಾಡ್” ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin