Fans Fida for the song of the film "Forest": The shooting is completed

“ಫಾರೆಸ್ಟ್” ಚಿತ್ರದ ಹಾಡಿಗೆ ಅಭಿಮಾನಿಗಳು ಫಿದಾ : ಚಿತ್ರೀಕರಣ ಪೂರ್ಣ - CineNewsKannada.com

“ಫಾರೆಸ್ಟ್” ಚಿತ್ರದ ಹಾಡಿಗೆ ಅಭಿಮಾನಿಗಳು ಫಿದಾ : ಚಿತ್ರೀಕರಣ ಪೂರ್ಣ

ಕನ್ನಡದಲ್ಲಿ ಬಹು ತಾರಾಗಣದ ಚಿತ್ರಗಳು ಹಾಗೊಮ್ಮೆ ಹೀಗೊಮ್ಮೆ ಬರುತ್ತಿವೆ. ಅದರ ಸಾಲಿಗೆ ಮತ್ತೊಂದು ಸೇರ್ಪಡೆ “ ಫಾರೆಸ್ಟ್” ನಟರಾದ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಎಲ್ಲರೂ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Archana Kottige

“ಫಾರೆಸ್ಟ” ಚಿತ್ರ ಕಟೆಂಟ್ ಆಧಾರಿತ ಚಿತ್ರ ಎನ್ನುವ ಹೆಗ್ಗಳಿಕೆ ಪಡೆದಿದೆ. ಸದ್ಯದಲ್ಲಿಯೇ ಬಾಕಿ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ತೆರೆಗೆ ಬರಲು ಸಿದ್ದವಾಗಿದೆ

Chikkanna

ಎನ್ ಎಂ ಕಾಂತರಾಜ್ ನಿರ್ಮಾಣದ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ “ಓಡೋ ಓಡೋ” ಹಾಡು ಎನ್ ಎಂ ಕೆ ಸಿನಿಮಾಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

Sharanya Shetty

ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ ಈ ಹಾಡನ್ನು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಮಲ್ಟಿಸ್ಟಾರರ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಫಾರೆಸ್ಟ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

Guru Nandan

ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೆ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದು. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ “ಫಾರೆಸ್ಟ್” ಚಿತ್ರಕ್ಕಿದೆ.

Anish Tejeshwar

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Sharanya Shetty

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin