ತಂದೆ-ಮಗನ ಬಾಂಧವ್ಯದ “ಸನ್ ಆಫ್ ಮತ್ತಣ್ಣ” ಚಿತ್ರ ಆಗಸ್ಟ್ 22ಕ್ಕೆ ತೆರೆಗೆ
ಡೈನಾಮಿಕ್ ಸ್ಟಾರ್ ದೇವರಾಜ್ ಪುತ್ರ ಪ್ರಣಂ ದೇವರಾಜ್ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಟಿಸಿರುವ “ಸನ್ ಆಫ್ ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಬರೆದಿರುವ, ಸಂಜಿತ್ ಹೆಗ್ಡೆ ಹಾಡಿರುವ ಹಾಗೂ ಸಚಿನ್ ಬಸ್ರೂರ್ ಸಂಗೀತ ನೀಡಿರುವ “ಮಿಡ್ ನೈಟ್ ರಸ್ತೆಯಲ್ಲಿ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ

ನಿರ್ದೇಶಕ ಶ್ರೀಕಾಂತ್ ಹುಣಸೂರು ಮಾತನಾಡಿ ಅಪ್ಪ – ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿದೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅಪ್ಪ – ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದುಕೊಂಡ ಹಾಗೆ ಚಿತ್ರವನ್ನು ಪೂರ್ಣಗೊಳಿಸಲು ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ಈ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ವಾರಣಾಸಿಯಲ್ಲಿ ನಡೆದಿದೆ. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡಿದ್ದ ಡೈನಾಮಿಕ್ ಸ್ಟಾರ್ ದೇವರಾಜ್, ಇತ್ತೀಚಿಗೆ ಸಿನಿಮಾ ನೋಡಿ ಪ್ರಶಂಸೆ ನೀಡಿದ್ದು ಬಹಳ ಖುಷಿಯಾಗಿದೆ ಎಂದು ತಿಳಿಸಿದರು.
ನಾಯಕ ಪ್ರಣಂ ದೇವರಾಜ್ ಮಾತನಾಡಿ ತಂದೆ – ಮಗನ ಬಾಂಧವ್ಯದ ಜೊತೆಗೆ ಪ್ರೇಮ ಕಥಾನಕವೂ ಹೌದು. ಚಿತ್ರದಲ್ಲಿ ಸಾಹಸ ಸನ್ನಿವೇಶಗಳಿಲ್ಲ. ನಿರ್ದೇಶಕರೂ ಮಾಡಿಕೊಂಡಿರುವ ಕಥೆ, ಚಿತ್ರಕಥೆ ಬಹಳ ಸೊಗಸಾಗಿದೆ.ರಂಗಾಯಣ ರಘು ಅವರಿಂದ ಸಾಕಷ್ಟು ಕಲಿತಿದ್ದೇನೆ. ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್ ಅಂತೂ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನ ಕೂಡ ಹಾಡಿಗೆ ಪೂರಕವಾಗಿದೆ. ಏಳುವರೆ ವರ್ಷಗಳ ನಂತರ ಸಿನಿಮಾ ಆಗಸ್ಟ್ 22 ರಂದು ಬಿಡುಗಡೆಯಾಗುತ್ತಿದೆ ಎಂದರು.

ನಾಯಕಿ ಖುಷಿ ರವಿ ಮಾತನಾಡಿ ಚಿತ್ರದಲ್ಲಿ ವೈದ್ಯೆ. ಸಾಕ್ಷಿ ನನ್ನ ಪಾತ್ರದ ಹೆಸರು. ಒಂದೊಳ್ಳೆ ಚಿತ್ರದಲ್ಲಿ ನಟಿಸಿದ ಖುಷಿಯಿದೆ ನಾಯಕಿಯಾಗಿ ನಟಿಸಿರುವ ಏಳನೇ ಚಿತ್ರ. ಬೇರೆ ಭಾಷೆಗಳಲ್ಲಿ ನನಗೆ ಅವಕಾಶ ಸಿಗುತ್ತಿದೆ. ಆದರೆ ಕನ್ನಡದಲ್ಲಿ ಹೆಚ್ಚು ಅವಕಾಶಗಳು ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಮಾತನಾಡಿ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಎರಡನೇ ಹಾಡು ಬಿಡುಗಡೆಯಾಗಿದೆ. ಮೊದಲು ಹಾಡು “ಕಮ್ಮಂಗಿ ನನ್ ಮಗನೇ” ಸಹ ಮೆಚ್ಚುಗೆ ಪಡೆದುಕೊಂಡಿದೆ. “ಮಿಡ್‌ನೈಟ್ ರಸ್ತೆಯಲ್ಲಿ” ಹಾಡು ಗಮನ ಸೆಳೆಯಲಿದೆ ಎಂದರು.

ಹಾಡಿನ ನೃತ್ಯ ನಿರ್ದೇಶನದ ಬಗ್ಗೆ ಧನು ಮಾಸ್ಟರ್, ಛಾಯಾಗ್ರಹಣದ ಕುರಿತು ಛಾಯಾಗ್ರಾಹಕ ಸ್ಕೇಟಿಂಗ್ ಕೃಷ್ಣ ಮಾಹಿತಿ ನೀಡಿದರು. ಸಂಕಲನಕಾರ ಹರೀಶ್ ಕೊಮ್ಮೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
.


