Fiftieth Day Celebration for Bisilu Kudure film

“ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ - CineNewsKannada.com

“ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ

ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ.

ಹೃದಯ ಶಿವ, ನಾಯಕ ಸಂಪತ್ ಮೈತ್ರೈಯಾ ಸೇರಿದಂತೆ ಇಡೀ ಚಿತ್ರತಂಡ ಈ ಸಂತಸವನ್ನು ಮಾಧ್ಯಮದ ಮುಂದೆ ಹಂಚಿಕೊಂಡರು.

ನಿರ್ದೇಶಕ ಹೃದಯ ಶಿವ ಮಾತನಾಡಿ, ಅರಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ ದಿನ ಪೂರೈಸಿದೆ. ಸದ್ಯದಲ್ಲೇ “ಬಿಸಿಲು ಕುದುರೆ” ಓಟಿಟಿಯಲ್ಲೂ ಬರಲಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಸದ್ಯದಲ್ಲೇ ನನ್ನ ನಿರ್ದೇಶನದಲ್ಲಿ ಎರಡು ಹೊಸ ಚಿತ್ರಗಳು ಆರಂಭವಾಗಲಿದೆ. ಅದರಲ್ಲಿ ಒಂದು ಬಿಗ್ ಬಜೆಟ್ ನ ಚಿತ್ರವಾಗಿರಲಿದೆ ಎಂದರು

ನಾಯಕ ಸಂಪ್ ಮೈತ್ರೇಯಾ ಮಾತನಾಡಿ ಚಿತ್ರದ ಕುರಿತು ಬಿಡುಗಡೆ ಪೂರ್ವದಲ್ಲೇ ಸಾಕಷ್ಟು ಮಾತನಾಡಿದ್ದೇನೆ. ಈಗ ಐವತ್ತನೇ ದಿನದ ಸಂತೋಷವನ್ನು ಸಂಭ್ರಮಿಸುತ್ತಿದ್ದೇನೆ ಎಂದುರು.

ಗಾಯಕಿ ಶಶಿಕಲಾ ಸೇರಿದಂತೆ ಚಿತ್ರತಂತ್ರದ ಸದಸ್ಯರಿಗೆ ಹೃದಯ ಶಿವ ಚಿತ್ರತಂಡದವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ವಿಕ್ಚರಿ ವಾಸು, ಸಂಗೀತ ನಿರ್ದೇಶಕ ಇಮ್ತಿಯಾಜ್ ಸುಲ್ತಾನ್,
ಛಾಯಾಗ್ರಾಹಕ ನಾಗಾರ್ಜುನ, ಸಂಕಲನಕಾರ ಕೆಂಪರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ಬಿಸಿಲು ಕುದರೆ” ಯಶಸ್ಸಿನ ಬಗ್ಗೆ ಮಾತನಾಡಿದರು.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin