Filming of Laughing Buddha is over
ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ
ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿರುವ “ ಲಾಫಿಂಗ್ ಬುದ್ಧ” ಚಿತ್ರೀಕರಣ ಮುಕ್ತಾಯವಾಗಿದೆ.
ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್ ವರ್ಕ್ ಆರಂಭವಾಗಿದೆ.
ಕಾಮಿಡಿ ಹಾಗೂ ಡ್ರಾಮ ಜಾನರ್ ನ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.