Filming of “Sangeetha Bar and Restaurant” with a different name complete

ವಿಭಿನ್ನ ಹೆಸರಿನ “ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್” ಚಿತ್ರೀಕರಣ ಪೂರ್ಣ - CineNewsKannada.com

ವಿಭಿನ್ನ ಹೆಸರಿನ “ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್” ಚಿತ್ರೀಕರಣ ಪೂರ್ಣ

ಚಂದನವನದಲ್ಲಿ ಇತ್ತೀಚೆಗೆ ಹೊಸ ಹೊಸ ಕಂಟೆಂಟು ಮತ್ತು ಹೊಸ ತನದ ಶೀರ್ಷಿಕೆಯ ಚಿತ್ರಗಳು ಹೆಚ್ಚಾಗಿ ಸದ್ದು ಮಾಡುತ್ತಿವೆ. ಆ ರೀತಿಯ ಚಿತ್ರಗಳ ಸಾಲಿಗೆ ಮತ್ತೊಂದು ಕುತೂಹಲಭರಿತ ಚಿತ್ರ “ ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್”. ಬಾರ್ ಅಂಡ್ ರೆಸ್ಟೋರೆಂಟ್‍ಗೂ ಸಿನಿಮಾಗೂ ಏನು ಸಂಬಂಧ ಎನ್ನುವುದನ್ನು ನಿರ್ದೇಶಕ ಸಂದೇಶ್ ಶೆಟ್ಟಿ ಅಜ್ರಿ ಮತ್ತಷ್ಟು ಕುತೂಹಲ ಹೆಚ್ಚುವಂತೆ ಚಿತ್ರ ಕಟ್ಟಿಕೊಟ್ಟಿದ್ದಾರೆ

ತಮ್ಮ ಮ್ಯಾನರಿಸಮ್ ಮೂಲಕವೇ ಜನ ಮನಗೆದ್ದಿರುವ ನಟ ಕೋಮಲ್ ಕುಮಾರ್, ಮೇಘನಾ ರಾಜ್, ಅನುಷಾ ರೈ ಸೇರಿದಂತೆ ಹಲವು ಕಲಾವಿದರು ನಟಿಸಿರುವ ಚಿತ್ರ ಇದು. ಚಿತ್ರಕ್ಕೆ ವಿಕಾಸ್‍ಶೆಟ್ಟಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಎರಡು ಹಂತಗಳಲ್ಲಿ 75 ದಿನಗಳ ಕಾಲ ಕುಂದಾಪುರ, ಶಿವಮೊಗ್ಗ, ತೀರ್ಥಹಳ್ಳಿ ಸೇರಿದಂತೆ ಕರಾವಳಿ ಮಲೆನಾಡು ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ

ಚಿತ್ರಕ್ಕಾಗಿ ಕುಂದಾಪುರದ ಅಂಪಾರಿನ ವಾಲ್ತೂರು ಗ್ರಾಮದಲ್ಲಿ ಏಳು ವಿಭಿನ ಬೃಹತ್ ಸೆಟ್ ನಿರ್ಮಿಸಿ, ಬಹುಭಾಗದ ಚಿತ್ರೀಕರಣ ಮಾಡಿರುವುದು ಚಿತ್ರೀಕರಣ ಮಾಡಿರುವುದು ವಿಶೇಷ.ಚಿತ್ರದ ಶೇಕಡಾ ಶೇಕಡಾ 90ರಷ್ಟು ಚಿತ್ರೀಕರಣವನ್ನು ಸೆಟ್‍ಗಳಲ್ಲಿಯೇ ಪೂರ್ಣಗೊಳಿಸಲಾಗಿದೆ..

ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮಾಹಿತಿ ನೀಡಿ “ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್” ಎಂದು ಸಿನಿಮಾಗೆ ಹೆಸರಿದ್ದರೂ ಚಿತ್ರ ವಿಶೇಷವಾಗಿದೆ. ಚಿತ್ರದ ಮೊದಲಾರ್ಧ ಬಾರ್‍ನಲ್ಲಿ ಶುರುವಾಗಿ, ಬಾರ್ ಸುತ್ತ ಸಾಗಿದರೆ, ದ್ವಿತೀಯಾರ್ಧ ದೇವರ ತಾಣದಲ್ಲಿ ಶುರುವಾಗಿ ಅಲ್ಲೇ ಮುಗಿಯುತ್ತದೆ. ಮೊದಲಾರ್ಧ ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ ಆಗಿದ್ದರೆ, ದ್ವಿತೀಯಾರ್ಧ ದೇವರ ತಾಣ ಅಂತಿದೆ ಎನ್ನುವ ಮೂಲಕ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚು ಮಾಡಿದ್ದಾರೆ

Sandesh shetty

ನಟ ಕೋಮಲ್ ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್ ಚಿತ್ರದಲ್ಲಿ ಎರಡು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದರಲ್ಲಿ ಆಸ್ಥಾನವೊಂದರ ವರ್ಣಚಿತ್ರ ಕಲಾವಿದನಾಗಿ ಕಾಣಿಸಿಕೊಂಡರೆ, ಮತ್ತೊಂದರಲ್ಲಿ ಸಿನಿಮಾ ನಿರ್ದೇಶಕನ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿ ಮೇಘನಾ ರಾಜ್ “ದೇವರ ತಾಣ”ದಲ್ಲಿ ರಾಣಿಯಾಗಿ ಕಾಣಿಸಿಕೊಂಡರೆ, `ಸಂಗೀತ’ ಬಾರ್ ನಲ್ಲಿ ನಾಯಕಿಯಾಗಿ ಜೊತೆಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Anusha Rai

ನಿರ್ದೇಶಕರಾಗಿ ಕಂಡ ಕನಸಿಗೆ ನಿರ್ಮಾಪಕ ವಿಕಾಸ್ ಶೆಟ್ಟಿ ಕೇವಲ ಹಣವಲ್ಲದೆ ತನು-ಮನ ಕೂಡ ಜೊತೆಗೆ ಧಾರೆ ಎರೆದಿದ್ದಾರೆ. ಇಲ್ಲಿಯವರೆಗೆ ಮಾಡಿದ ಸಿನಿಮಾಗಳು ಒಂದು ಥರದ ಅನುಭವ ನೀಡಿದರೆ, ಸಿನಿಮಾ ಅವೆಲ್ಲಕ್ಕಿಂತ ಮಿಗಿಲಾದ ಬೇರೊಂದು ಅನುಭವ ನೀಡಿದೆ. ಕನ್ನಡದ ಚಿತ್ರರಂಗದ ಮಟ್ಟಿಗೆ ಇದೊಂದು ವಿಭಿನ್ನ ಚಿತ್ರವಾಗಲಿದೆ ಎನ್ನುವ ಭರವಸೆ ವ್ಯಕ್ತಪಡಿಸಿದ್ದಾರೆ

ಚಿತ್ರದಲ್ಲಿ ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡ್, ವಜ್ರಧೀರ್ ಜೈನ್, ಉತ್ಸವ್, ಕಾರ್ತಿಕ್ ರಾವ್, ರಾಘು ರಾಮನಕೊಪ್ಪ, ಸಿರಿಜಾ, ವರ್ಧನ್, ಕರಣ್ , ರಾಧಿಕ ರಾವ್ ದಿವ್ಯಶ್ರೀ, ಅಕ್ಷತಾ, ಅರಸು, ಮಹೇಶ್, ನಾಗರಾಜ್ , ಚಿತ್ರಕಲಾ, ಉಮೇಶ್ ಕಿನ್ನಾಳ್, ಮನೀಶ್ ಶೆಟ್ಟಿ, ರಾಧಾಕೃಷ್ಣ, ಮಹಾಬಲೇಶ್ವರ ಭಟ್ ಹೀಗೆ ದೊಡ್ಡ ಕಲಾವಿದರ ಬೃಹತ್ ತಾರಾಗಣವೇ ಚಿತ್ರದಲ್ಲಿದೆ ಎಂದಿದ್ಧಾರೆ

ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಕೂಡ ಚಿತ್ರದ ಪಾತ್ರವೊಂದಕ್ಕೆ ತೆರೆಮೇಲೆ ಬಣ್ಣ ಹಚ್ಚಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin