First look of 'Balaramana Dinagalu released on Tiger's birthday

ಟೈಗರ್ ಹುಟ್ಟುಹಬ್ಬಕ್ಕೆ ‘ಬಲರಾಮನ ದಿನಗಳು’ ಚಿತ್ರದ ಫಸ್ಟ್ ಲುಕ್ ಬಿಡುಗಡೆ - CineNewsKannada.com

ಟೈಗರ್ ಹುಟ್ಟುಹಬ್ಬಕ್ಕೆ ‘ಬಲರಾಮನ ದಿನಗಳು’ ಚಿತ್ರದ ಫಸ್ಟ್ ಲುಕ್ ಬಿಡುಗಡೆ

“ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ “ಬಲರಾಮನ ದಿನಗಳು” ಚಿತ್ರದ ಫಸ್ಟ್ ಲುಕ್ ನಟ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿದೆ.

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸಲಾಗುತ್ತಿದೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಇದು 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಆ ಕಾಲಮಾನದ ಗೆಟಪ್ ನಲ್ಲಿ ವಿನೋದ್ ಪ್ರಭಾಕರ್ ಅವರು ಕಾಣಿಸಿಕೊಂಡಿದ್ದಾರೆ. ಟೈಗರ್ ಅವರ ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

“ಅಟ್ಟಕತ್ತಿ”, ” ಕಾಲ”, “ಕಬಾಲಿ”, “ಭೈರವ”, “ದಸರಾ”, “ಕಲ್ಕಿ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರ ಸಂಗೀತ ಸಂಯೋಜಿಸುತ್ತಿರುವ 51ನೇ ಚಿತ್ರ. ಈಗಾಗಲೇ ಸಂಗೀತ ನಿರ್ದೇಶನಕ್ಕೆ ಸಂಬಂಧಿಸಿದ ಕೆಲಸಗಳು ಆರಂಭವಾಗಿದೆ.

ಬಹು ನಿರೀಕ್ಷಿತ “ಬಲರಾಮನ ದಿನಗಳು” ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin