‘ಕರಾವಳಿ’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ: ಪ್ರಜ್ವಲ್-ಗುರುದತ್ ಸಿನಿಮಾಕ್ಕೆ ಕುತೂಹಲ ಹೆಚ್ಚಳ

ಸ್ಯಾಂಡಲ್‍ವುಡ್ ನಲ್ಲಿ ಕರಾವಳಿ ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಪ್ರಕಟವಾಗಿದ್ದು ಸದ್ಯ ಚಿತ್ರದ ಫಸ್ಟ್‍ಲುಕ್ ಟೀಸರ್ ಬಿಡುಗಡೆ ಆಗಿದೆ. ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದು ವಿಶೇಷ.

ಮಂಗಳೂರಿನ ಬೀಚ್ ಫೆಸ್ಟಿವಲ್‍ನಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡಲಾಯಿತು. ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.

ಬಿಡುಗಡೆ ಆಗಿರುವ ಟೀಸರ್‍ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಗೆಯೇ ಎಮ್ಮೆ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್ ನೋಡ್ತಿದ್ರೆ ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಬಗ್ಗೆ ಇರುವ ಸಿನಿಮಾ ಎನ್ನುವುದು ಮೇಲ್ನೋಟಕ್ಕೆ ಗೋತ್ತಾಗುತ್ತಿದೆ. ಬ್ಯಾಗ್ರೌಂಡ್‍ನಲ್ಲಿ ಬರುವ ಯಕ್ಷಗಾನದ ಧ್ವನಿ, ಮ್ಯೂಸಿಕ್ ಟೀಸರ್‍ನ ತೂಕವನ್ನು ಹೆಚ್ಚಿಸುವ ಜೊತೆಗೆ ಕುತೂಹಲ ದುಪ್ಪಟ್ಟು ಮಾಡಿದೆ.

ಕರಾವಳಿ ಎಂದಮೇಲೆ ಆ ಭಾಗದ ಸಂಸ್ಕೃತಿ, ದೈವ, ಯಕ್ಷಗಾನ ಮುಖ್ಯವಾಗಿ ಕಂಬಳ ಸೇರಿದಂತೆ ಅಲ್ಲಿನ ಆಚಾರ ವಿಚಾರ ಎಲ್ಲವನ್ನು ಈ ಸಿನಿಮಾದಲ್ಲಿ ನೋಡುವ ಕಾತರದಲ್ಲಿದ್ದಾರೆ ಅಭಿಮಾನಿಗಳು. ಇನ್ನು ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಸದ್ಯ ರಿಲೀಸ್ ಆಗಿರುವ ಟೀಸರ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರ ಪಾತ್ರ ನೋಡಿದ್ರೆ ಇದುವರೆಗೂ ಅವರು ಮಾಡಿರುವ ಪಾತ್ರಗಳಲ್ಲಿಯೇ ಅತ್ಯಂತ ವಿಭಿನ್ನವಾಗಿದೆ. ಟೀಸರ್ ನೋಡ್ತಿದ್ರೆ ಪ್ರಜ್ವಲ್ 40ನೇ ಸಿನಿಮಾ ತುಂಬಾ ವಿಶೇಷವಾಗಿ ಮೂಡಿ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುದರಲ್ಲಿ ಎರಡು ಮಾತಿಲ್ಲ. ಇದೀಗ ಟೀಸರ್ ಮೂಲಕ ಸದ್ದು ಮಾಡುತ್ತಿರುವ ‘ಕರಾವಳಿ’ ಈ ತಿಂಗಳ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಶೂಟಿಂಗ್‍ಗೆ ಹೊರಡಲಿದೆ. ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

Related Posts

ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಹಾಡು ಬಿಡುಗಡೆ

ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಬಾಲಿವುಡ್‍ನ ಜನಪ್ರಿಯ ಗಾಯಕ…

57ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ `ಪಿಲಿ ಚನ್ನೆ’ ಆಯ್ಕೆ

`ನಡುಬೆಟ್ಟು ಅಪ್ಪಣ್ಣ’ ನಂತರ ಅನುಪಮ ಶರಧಿ ನಿರ್ದೇಶನದ ಎರಡನೇ ಚಿತ್ರಕ್ಕೆ ರಾಷ್ಟ್ರಮಟ್ಟದ ಗೌರವ ಒಂದೇ ಚಿತ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಬಹುಮುಖ ಪ್ರತಿಭೆ ಎನ್ನುವ ಹಿರಿಮೆಗೆ ಪಾತ್ರರಾಗಿದ್ಧಾರೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ 57ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೀತ್ಸೋತ್ಸ ಗೋವಾದಲ್ಲಿ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581