First look teaser of the film “Dildaar” released

“ದಿಲ್‍ದಾರ್” ಚಿತ್ರದ ಮೊದಲ ನೋಟದ ಟೀಸರ್ ಬಿಡುಗಡೆ - CineNewsKannada.com

“ದಿಲ್‍ದಾರ್” ಚಿತ್ರದ ಮೊದಲ ನೋಟದ ಟೀಸರ್ ಬಿಡುಗಡೆ

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್‍ದಾರ್’. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ.ಯುವ ನಟ ಶ್ರೇಯಸ್ ಮಂಜು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ

ಆರ್. ಸಂತೋಷ್ ಕುಮಾರ್ ನಿರ್ಮಾಣ ಮಾಡಿರುವ ದಿಲ್‍ದಾರ್ ಚಿತ್ರ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಕುತೂಹಲ ಕೆರಳಿಸಿದೆ

ಭಿನ್ನವಾದ ಪ್ರೇಮ ಕಥಾನಕವನ್ನೊಳಗೊಂಡಿರುವ ಪಕ್ಕಾ ಆಕ್ಷನ್ ಚಿತ್ರ ಎಂದು ಚಿತ್ರತಂಡ ಹೇಳಿಕೊಂಡಿದೆ. ನಟ ಶರಣ್ ತಂಗಿ ಮಗಳಾದ ಕೀರ್ತಿ ಕೃಷ್ಣ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ.

ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಹರೇಕೃಷ್ಣ ರೆಡ್ಡಿ ಎಸ್ ಕರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin