“ಕಬ್ಜ” ಚಿತ್ರದ ನಂತರ ಆರ್ ಚಂದ್ರು ನಿರ್ದೇಶನದದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಹಿಂದಿ ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ.

ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ಗಳಲ್ಲಿ ಯಾವುದೇ ಅಡೆತಡೆಗಳಿಲ್ಲದೆ ಅಂದುಕೊಂಡ ಹಾಗೆ “ಒರಿಜಿನಲ್ ಮಾನ್ ಸ್ಟರ್” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಿದ್ದು, ಎರಡನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಅಣಿಯಾಗುತ್ತಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ತೆಲುಗು ನಟ ಸುನೀಲ್ ಹಾಗೂ ಅನೇಕ ಕಲಾವಿದರು ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ಆರ್ ಚಂದ್ರು ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಿದ್ದ “ಮೈಲಾರಿ” ಚಿತ್ರ ನೋಡುಗರ ಮೆಚ್ಚುಗೆಗೆ ಪಾತ್ರವಾಗಿ ಭರ್ಜರಿ ಯಶಸ್ಸು ಕಂಡಿತ್ತು. ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ “ಕಬ್ಜ” ಚಿತ್ರದಲ್ಲೂ ಶಿವರಾಜಕುಮಾರ್ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದರು . ಈಗ ಆರ್ ಚಂದ್ರು ಹಾಗೂ ಶಿವರಾಜಕುಮಾರ್ ಅವರ ಕಾಂಬಿನೇಶನ್ ನಲ್ಲಿ “ಒರಿಜಿನಲ್ ಮಾನ್ ಸ್ಟರ್” ಚಿತ್ರ ಮೂಡಬರುತ್ತಿದ್ದು, ಈ ಚಿತ್ರ ಆರಂಭದಲ್ಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ಎ ಜೆ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಎಲ್ಲಾ ಭಾಷೆಗಳ ಜನಪ್ರಿಯ ಕಲಾವಿದರು ಅಭಿನಯಿಸಿಲಿದ್ದಾರೆ.









