from the movie "Koragajja" "Guliga"God Kshetra Nirmana by director

“ಕೊರಗಜ್ಜ” ಚಿತ್ರ ದ “ಗುಳಿಗ” ದೈವಕ್ಕೆ ನಿರ್ದೇಶಕರಿಂದ ಕ್ಷೇತ್ರ ನಿರ್ಮಾಣ - CineNewsKannada.com

“ಕೊರಗಜ್ಜ” ಚಿತ್ರ ದ “ಗುಳಿಗ” ದೈವಕ್ಕೆ ನಿರ್ದೇಶಕರಿಂದ ಕ್ಷೇತ್ರ ನಿರ್ಮಾಣ

“ಕೊರಗಜ್ಜ” ಚಿತ್ರ ದಲ್ಲಿ ಬರುವ “ಗುಳಿಗ”ದೈವಕ್ಕೆ ನಿರ್ದೇಶಕರಿಂದ ಕ್ಷೇತ್ರ ನಿರ್ಮಾಣ, ಅದ್ದೂರಿಯ ಕೋಲ ಸೇವೆ. ‘ಕರಿ ಹೈದ ಕೊರಗಜ್ಜ” ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.

ಮತ್ತೊಂದು ಕುತೂಹಲ ದ ವಿಚಾರ ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ. ಸೆಟ್ ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದರು. ಸ್ಥಳಿಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು. ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ “ಗುಳಿಗ”ನ ಸ್ಥಳ ವೆಂದು ಸ್ಥಳಿಯರು ತಿಳಿಸಿದರು. ದೈವದ ಮೇಲಿನ ಗೌರವ-ಭಕ್ತಿಯಿಂದ ಪುತ್ತೂರಿನಿಂದ ಬೆಳ್ತಂಗಡಿಯ ಅರಣ್ಯ ಪ್ರದೇಶದಲ್ಲಿ ಸೆಟ್ ಕೆಲಸವನ್ನು ಸ್ಥಳಾಂತರ ಗೊಳಿಸಲಾಯಿತು.

ಚಿತ್ರದಲ್ಲಿ ಗುಳಿಗ ದೈವದ ಪಾತ್ರವನ್ನು ಹಾಲಿವುಡ್- ಫ಼್ರೆಂಚ್- ಬಾಲಿವುಡ್ ನಟ ಹಾಗೂ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ಅಭಿನಯಿಸಿದ್ದು, ಮಂಗಳೂರಿನ ಸೋಮೆಶ್ವರ ಸಮುದ್ರ ಕಿನಾರೆಯಲ್ಲಿ ಗುಳಿಗ ದೈವದ ಚಿತ್ರೀಕರಣವನ್ನು ನಡೆಸುತ್ತಿದ್ದಾಗಲೂ, ತಂಡಕ್ಕೆ ಹಲವಾರು ರೀತಿಯ ಅಡೆತಡೆಗಳು ಎದುರಾಯಿತು.
ಈ ಬಗ್ಗೆ ತಿಳಿದವರಲ್ಲಿ ಚಿಂತನ -ಮಂಥನ ನಡೆಸಿದಾಗ ನಿರ್ದೇಶಕ ಸುಧೀರ್ ಅತ್ತಾವರ್ ರವರ ಹಿರಿಯರಿದ್ದ ಮನೆಯಲ್ಲಿ ಗುಳಿಗ ದೈವದ ಸಾನಿಧ್ಯವಿದ್ದು , ಹಲವಾರು ವರ್ಷಗಳಿಂದ ಆ ಮನೆಯಲ್ಲಿ ಯಾರೂ ವಾಸವಿರದೆ, ಪಾಳು ಬಿದ್ದಕಾರಣ ದೈವಕ್ಕೆ ಪೂಜೆ ಪುರಸ್ಕಾರಗಳು ನಡೆಯದಿರುವ ವಿಚಾರ ಗೋಚರಿಸಿತು.
ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಕಾರ್ಯ ಮುಗಿಸಿ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು ನಡೆಸಿದರು. ಈ ಸಮಯದಲ್ಲಿ ಹಿರಿಯ ನಟಿ ಭವ್ಯ, ನಿರ್ಮಾಪಕರಾದ ತ್ರಿವಿಕ್ರಮ ಸಾಫಲ್ಯ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ, ಕಲಾವಿದರಾದ ಭರತ್ ಸೂರ್ಯ, ರಿತಿಕ ಹಾಗೂ ಹಲವು ತಂತ್ರಜ್ಞರು ಅಹೋರಾತ್ರಿ ವಿಜೃಂಭಣೆಯಿಂದ ನಡೆದ ಕೋಲಸೇವೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಚಿತ್ರತಂಡವು ಚಿತ್ರೀಕರಣ ಮುಗಿದ ಕೂಡಲೇ ಕೊರಗಜ್ಜನಿಗೂ ಕೋಲಸೇವೆಯನ್ನು ಅದ್ದೂರಿಯಾಗಿ ನೆರವೇರಿಸಿತ್ತು.
“ಕೊರಗಜ್ಜ”ನ ಕುರಿತಾದ ಸಿನಿಮಾ ಮಾಡಬೇಕೆಂದು ಹಲವಾರು ನಿರ್ಮಾಪಕರು ಕಳೆದ ಕೆಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಆದರೆ ನಿರ್ಮಾಪಕ ತ್ರಿವಿಕ್ರಮ ರವರು ಬಿಗ್ ಬಜೆಟ್ ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin