ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ `ಫುಲ್ ಮೀಲ್ಸ್’ ಪ್ರದರ್ಶನ
ಲಿಖಿತ್ ಶೆಟ್ಟಿ ನಟನೆ ಹಾಗೂ ನಿರ್ಮಾಣದ ಎನ್. ವಿನಾಯಕ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಫುಲ್ ಮೀಲ್ಸ್ ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕನ್ನಡ ಪಾಪ್ಯುಲರ್ ಎಂಟರ್ಟೈನ್ಮೆಂಟ್ ವಿಭಾಗದ ಅಡಿಯಲ್ಲಿ ಅಧಿಕೃತವಾಗಿ ಆಯ್ಕೆಯಾಗಿದ್ದು, ಬೆಂಗಳೂರಿನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ.

ಮಧ್ಯಮ ವರ್ಗದ ವೆಡ್ಡಿಂಗ್ ಫೋಟೋಗ್ರಾಫರ್ ನ ಜೀವನ ಪಯಣ, ಕನಸುಗಳು ಮತ್ತು ಕುಟುಂಬ ಮೌಲ್ಯಗಳನ್ನು ಸಹಜವಾಗಿ ತೆರೆದಿಡುವ, ತ್ರಿಕೋನ ಪ್ರೇಮಕಥೆಯ ಹಿನ್ನೆಲೆಯ ಎಂಗೇಜಿಂಗ್ ರೊಮ್ಯಾಂಟಿಕ್ ಕಾಮಿಡಿ ಕಥಾವಸ್ತು ಪ್ರೇಕ್ಷಕರ ಮನ ಗೆದ್ದಿದೆ. ಃIಈಈಇS ವೇದಿಕೆಯಲ್ಲಿ ಚಿತ್ರ ಪ್ರದರ್ಶನಗೊಂಡು ಪ್ರೇಕ್ಷಕರು ಹಾಗೂ ಚಿತ್ರತಜ್ಞರಿಂದಲೂ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.
2025ರ ನವೆಂಬರ್ 21ರಂದು ರಾಜ್ಯಾದ್ಯಂತ ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಿ 25 ದಿನಗಳ ಯಶಸ್ವಿ ಪ್ರದರ್ಶನ ಕಂಡ ಈ ಚಿತ್ರ ಪಡೆದಿದೆ.ಇದರ ಜೊತೆಗೆ ಪ್ರಸ್ತುತ `ಫುಲ್ ಮೀಲ್ಸ್’ ಸಿನಿಮಾ ಅಮೆಜಾನ್ ಪ್ರೈಮ್ ವೀಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದ್ದು, ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಟ್ರೆಂಡಿಂಗ್ ಮೂವೀಸ್ ಪಟ್ಟಿಯಲ್ಲೂ ಸ್ಥಾನ ಪಡೆದುಕೊಂಡಿತ್ತು. ಥಿಯೇಟರ್‍ನಲ್ಲಿ ಮಿಸ್ ಮಾಡಿಕೊಂಡ ಪ್ರೇಕ್ಷಕರು ಮನೆಯಲ್ಲೇ ಕುಟುಂಬ ಸಮೇತರಾಗಿ ಚಿತ್ರ ವೀಕ್ಷಿಸಿ ತಮ್ಮ ಅಭಿಪ್ರಾಯಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಚಿತ್ರದಲ್ಲಿ ಖುಷಿ ರವಿ ಹಾಗೂ ತೇಜಸ್ವಿನಿ ಶರ್ಮ ನಾಯಕಿಯರಾಗಿ ಕಾಣಿಸಿಕೊಂಡಿದ್ದು,ಅಭಿನಯ ಪ್ರೇಕ್ಷಕರ ಗಮನ ಸೆಳೆಯುವಂತಿದೆ. ಜೊತೆಗೆ ರಂಗಾಯಣ ರಘು, ವಿಜಯ್ ಚಂಡೂರ್, ಸೂರಜ್ ಲೋಕ್ರೆ, ರವಿಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗ, ನಾಗೇಂದ್ರ ಅರಸ್, ಮೂಗು ಸುರೇಶ್, ಗಣೇಶ್ ರಾವ್, ಕೋಟೆ ಪ್ರಭಾಕರ್ ಸೇರಿದಂತೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಈ ಹಿಂದೆ ಸಂಕಷ್ಟಕರ ಗಣಪತಿ',ಅಬ್ಬಬ್ಬ’, `ಫ್ಯಾಮಿಲಿ ಪ್ಯಾಕ್’ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದ ಲಿಖಿತ್ ಶೆಟ್ಟಿ ಅವರು ತಮ್ಮ ನಟನೆ ಮತ್ತು ಆಕ್ಷನ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರರಂಗದ ಭರವಸೆಯ ನಟನಾಗಿ ಮತ್ತೊಮ್ಮೆ ಗುರುತಿಸಿಕೊಂಡಿದ್ದಾರೆ.

ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ತಮ್ಮ ಚೊಚ್ಚಲ ನಿರ್ದೇಶನದ ಚಿತ್ರದಲ್ಲೇ ಅವರು ಯಶಸ್ಸು ಕಂಡಿದ್ದು, ಆ ಮೂಲಕ ಅವರು ಭರವಸೆಯ ಯುವ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ.
ಚಿತ್ರಕ್ಕೆ ಗುರುಕಿರಣ್ ಸಂಗೀತ ನಿರ್ದೇಶನ, ಮನೋಹರ್ ಜೋಷಿ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಹರೀಶ್ ಗೌಡ ಸಂಭಾಷಣೆ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಕವಿರಾಜ್ ಮತ್ತು ಪ್ರಮೋದ್ ಮರವಂತೆ ಸಾಹಿತ್ಯ ಒದಗಿಸಿದ್ದಾರೆ.

