Gilli actor promoted to hero with ``Super Hit''

ಗಿಲ್ಲಿ ನಟ `ಸೂಪರ್ ಹಿಟ್’ ಚಿತ್ರದ ಮೂಲಕ ನಾಯಕನಾಗಿ ಬಡ್ತಿ - CineNewsKannada.com

ಗಿಲ್ಲಿ ನಟ `ಸೂಪರ್ ಹಿಟ್’ ಚಿತ್ರದ ಮೂಲಕ ನಾಯಕನಾಗಿ ಬಡ್ತಿ

ಕಿರುತೆರೆಯಲ್ಲಿ ಹಾಸ್ಯದ ಮೂಲಕ ಮನರಂಜನೆ ನೀಡುತ್ತಿರುವ ಗಿಲ್ಲಿ ನಟ “ ಸೂಪರ್ ಹಿಟ್” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಗಿಲ್ಲಿ ನಟ ಅಭಿನಯದ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ವಿಜಯಾನಂದ್ ನಿರ್ದೇಶನದ ಚಿತ್ರಕ್ಕಿದೆ

“ಸು ಫ್ರಂ ಸೋ” ನಂತರ ಕನ್ನಡದಲ್ಲಿ ಮತ್ತೊಂದು ಆ ರೀತಿಯ ಕಾಮಿಡಿಯ ಮೂಲಕ ಸಂಚಲನ ಸೃಷ್ಟಿಸುವ ಲಕ್ಷಣಗಳು ಸೂಪರ್ ಹಿಟ್ ಚಿತ್ರದ ಟೀಸರ್‍ನಲ್ಲಿ ಗೋಚರಿಸಿದೆ.ಚಿತ್ರಕ್ಕೆ ಸೂಪರ್ ಹಿಟ್ ಎನ್ನು ಶೀರ್ಷಿಕೆ ಇಟ್ಟಿದ್ದು ಅವರ ಕೆಳಗೆ ರನ್ನಿಂಗ್ ಸಕ್ಸಸ್‍ಫುಲಿ ಎಂಬ ಅಡಿಬರಹವಿದೆ

ನಿರ್ದೇಶಕ ವಿಜಯಾನಂದ ಮಾಹಿತಿ ನೀಡಿ ಏಳುಬೀಳು ಕಂಡಿದ್ದ ಸಿನಿಮಾ ನಿರ್ಮಾಪಕ ಜಿ. ಉಮೇಶ್ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡೋ ಕನಸು ಹೊಂದಿದ್ದರಂತೆ. ವಿಚಾರವನ್ನು ಗಮನದಲ್ಲಿಟ್ಟುಕೊಂಡಿದ್ದ ನಿರ್ದೇಶಕರು, ಕಥೆಗೂ ಹೊಂದಿಕೆಯಾಗೋದರಿಂದ ಅದನ್ನೇ ಶೀರ್ಷಿಕೆ ಇಡಲಾಗಿದೆ ಎಂದರು

ಸು ಫ್ರಂ ಸೋ ಚಿತ್ರಕ್ಕೆ ಸಿಕ್ಕ ಅಭೂತಪೂರ್ವ ಬೆಂಬಲ ನಮ್ಮ ಸಿನಿಮಾಗೂ ಸಿಗಲಿದೆ. ಕಮರ್ಶಿಯಲ್ ಧಾಟಿಯಲ್ಲಿ, ಹಾಸ್ಯವನ್ನೇ ಪ್ರಧಾನವಾಗಿಟ್ಟುಕೊಂಡು ಸಿನಿಮಾ ಮಾಡಲಾಗಿದೆ.ಈಗಾಗಲೇ ಎಲ್ಲ ಕೆಲಸ ಕಾರ್ಯಗಳೂ ಮುಕ್ತಾಯಗೊಂಡಿವೆ. ಒಂದೊಳ್ಳೆ ಸಮಯ ನೋಡಿ ಬಿಡುಗಡೆ ಮಾಡೋದಷ್ಟೇ ಬಾಕಿ ಉಳಿದಿದೆ ಎಂದು ಹೇಳಿದರು

ಸಿನಿಮಾ ಆರಂಭದಿಂದ ಕೊನೆಯವರೆಗೂ ಪ್ರತೀ ಹತ್ತು ನಿಮಿಷಕ್ಕೊಮ್ಮೆ ಪ್ರೇಕ್ಷಕರನ್ನು ಬೆರಗಾಗಿಸುವ ಅಂಶಗಳನ್ನು ಹೊಂದಿದೆ. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿ ಥ್ರಿಲ್ಲರ್ ಕಾಮಿಡಿ ಜಾನರಿನಲ್ಲಿ ವಿಭಿನ್ನ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು

ಸಾಮಾಜಿಕ ಮಾಧ್ಯಮದಲ್ಲಿ ಹವಾ ಸೃಷ್ಠಿಸಿರುವ ಗೌರವ್ ಶೆಟ್ಟಿ ಮತ್ತು, ಗಿಲ್ಲಿ ನಟ ನಾಯಕರಾಗಿ ನಟಿಸಿದ್ದಾರೆ. ಶ್ವೇತಾ ನಾಯಕಿಯಾಗಿ ಜೊತೆಯಾಗಿದ್ದಾರೆ. ಜಿ. ಉಮೇಶ್ ಚಿತ್ರ ನಿರ್ಮಾಣ ಮಾಡಿದ್ದಾರೆ.

ಸಾಹಿತಿ ಡಾ. ವಿ, ನಾಗೇಂದ್ರ ಪ್ರಸಾದ್ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಇನ್ನುಳಿದಂತೆ, ಆರ್.ಡಿ ನಾಗಾರ್ಜುನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಮತ್ತು ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಡ್ರ್ಯಾಗನ್ ಮಂಜು, ಸಾಧು ಕೋಕಿಲ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು, ಸೋಮಶೇಖರ್, ವಂಶಿ, ಮಂಜಣ್ಣ, ಬಿ.ಎನ್ ಮಂಗಳ, ಅಶ್ವಿನಿ ರಾವ್, ಸ್ವಪ್ನ ಶೆಟ್ಟಿಗಾರ್, ಮಂಗಳೂರು ಮೀನನಾಥ ಮುಂತಾದವರ ತಾರಾಗಣವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin