Glimpse of veteran actor Shivanna's 131st film as "I am coming" : Curiosity increases

“ಐ ಹ್ಯಾಮ್ ಕಮಿಂಗ್” ಎಂದ ಹಿರಿಯ ನಟ ಶಿವಣ್ಣನ 131ನೇ ಚಿತ್ರದ ಝಲಕ್ : ಕುತೂಹಲ ಹೆಚ್ಚಳ - CineNewsKannada.com

“ಐ ಹ್ಯಾಮ್ ಕಮಿಂಗ್” ಎಂದ ಹಿರಿಯ ನಟ ಶಿವಣ್ಣನ 131ನೇ ಚಿತ್ರದ ಝಲಕ್ : ಕುತೂಹಲ ಹೆಚ್ಚಳ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಹಲವು ಚಿತ್ರಗಳು ಪ್ರಕಟವಾಗಿವೆ. ಅವುಗಳಲ್ಲಿ “ ಐ ಹ್ಯಾಮ್ ಕಮಿಂಗ್” ಎನ್ನುವ ಸಂಭಾಷಣೆ ಇರುವ 131ನೇ ಚಿತ್ರ ಕುತೂಹಲ ಹೆಚ್ಚಿಸಿದೆ.

ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ. ಆ ಸ್ಪೆಷಲ್ ಗಿಫ್ಟ್ ಗಳಲ್ಲಿ ತುಂಬಾನೇ ಸ್ಪೆಷಲ್ ಎನಿಸಿಕೊಂಡಿರುವುದು ಶಿವಣ್ಣನ 131ನೇ ಚಿತ್ರದ ಝಲಕ್ ಬಿಡುಗಡೆಯಾಗಿದ್ದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೊದಲ ಝಲಕ್ ಶಿವಣ್ಣನ ಹುಟ್ಟುಹಬ್ಬಕ್ಕೆ ಅನಾವರಣಗೊಂಡಿದೆ.

ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೆÇಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ. ಶಿವಣ್ಣನನ್ನು ಅಚ್ಯುತ್ ಕುಮಾರ್ ವರ್ಣನೆ ಮಾಡುವ ರೀತಿ ಅದ್ಭುತವಾಗಿದೆ.

ಶಿವಣ್ಣ ವಿಡಿಯೋದಲ್ಲಿ ಕಾಣಿಸಿಕೊಳ್ಳಲ್ಲ. ಐ ಆಮ್ ಕಮಿಂಗ್ ಎನ್ನುವ ಕರುನಾಡ ಕಿಂಗ್ ನ ಫೆÇೀಟೋ ಬಿಟ್ಟು ಚಿತ್ರತಂಡ ಥ್ರಿಲ್ ಹೆಚ್ಚಿಸಿದೆ. ಚಂಡಮಾರುತ ಮೊದಲ ಮೌನ ಎಂಬ ಅಡಿಬರಹದೊಂದಿಗೆ ಶಿವಣ್ಣನ 131ನೇ ಚಿತ್ರದ ವಿಡಿಯೋ ಝಲಕ್ ಬಿಡುಗಡೆ ಮಾಡಲಾಗಿದ್ದು, ಅಚ್ಯುತ್ ಕುಮಾರ್, ರವೀಂದ್ರ ವಿಜಯ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.

ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ.

ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳು ಎದುರು ನೋಡುತ್ತಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪೆÇ್ರಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin