Golden Mega Star Ganesh as Charukesha Raja: Teaser of the movie "Pinaka" released

ಚಾರುಕೇಶ ರಾಜನ ಪಾತ್ರದಲ್ಲಿ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ : “ಪಿನಾಕ” ಚಿತ್ರದ ಟೀಸರ್ ಬಿಡುಗಡೆ - CineNewsKannada.com

ಚಾರುಕೇಶ ರಾಜನ ಪಾತ್ರದಲ್ಲಿ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ : “ಪಿನಾಕ” ಚಿತ್ರದ ಟೀಸರ್ ಬಿಡುಗಡೆ

ಗೋಲ್ಟನ್ ಮೆಘಾ ಸ್ಟಾರ್ ಗಣೇಶ್ ಅಭಿನಯದ `ಪಿನಾಕ’ ಚಿತ್ರ ಅಕ್ಟೋಬರ್ 2ಕ್ಕೆ ಬಿಡುಗಡೆ ಮಾಡಲು ಈಗಾಗಲೇ ದಿನಾಂಕ ಪ್ರಕಟಿಸಲಾಗಿದೆ. ಈ ನಡುವೆ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ನಟ ಗಣೇಶ್ “ಪಿನಾಕ”, ಚಾರುಕೇಶ ರಾಜನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ವಿಶ್ವಪ್ರಸಾದ್ ನಿರ್ಮಿಸುತ್ತಿರುವ ಚಿತ್ರವನ್ನು ನೃತ್ಯ ನಿರ್ದೇಶಕ ಧನಂಜಯ್ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದು ಗಣೇಶ್ ಅವರಿಗೆ ಜೋಡಿಯಾಗಿ ಅಮೃತಾ ಅಯ್ಯರ್ ನಟಿಸಿದ್ದಾರೆ. ಉಳಿದಂತೆ ಹಿರಿಯ ಕಲಾವಿದರಾದ ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು,ವರ್ಧನ್ ತೀರ್ಥಹಳ್ಳಿ ಸೇರಿದಂತೆ ಹಿರಿ-ಕಿರಿಯ ಕಲಾವಿದರ ದಂಡೇ ಚಿತ್ರದಲ್ಲಿದೆ

ಶಾಲೆಯಲ್ಲಿ ಮಕ್ಕಳೊಂದಿಗೆ ಗಣೇಶ್ ಹುಟ್ಟುಹಬ್ಬ ಆಚರಿಸಿಕೊಂಡರು. ಗಣೇಶ್ ಹೊಸ ಲುಕ್‍ಗೆ ಅಭಿಮಾನಿಹಳು ಫಿದಾ ಆಗಿದ್ದಾರೆ.

ನಟ ಗಣೇಶ್ ಮಾತನಾಡಿ ದೇವರು, ತಂದೆ – ತಾಯಿ ಹಾಗೂ ಅಭಿಮಾನಿಗಳ ಆಶೀರ್ವಾದದಿಂದ ಇಲ್ಲಿಯ ತನಕ ಬಂದಿದ್ದೇನೆ. ನನ್ನ ಮಕ್ಕಳು ” ಕಾರ್ತಿಕೇಯ 2″ ಚಿತ್ರ ನೋಡಿ ನೀವು ಈ ರೀತಿ ಚಿತ್ರದಲ್ಲಿ ಅಭಿನಯಿಸಬೇಕೆಂದು ಹೇಳುತ್ತಿದ್ದರು. ನಾನು ಶಿವ ಭಕ್ತ. “ಪಿನಾಕ” ಸಹ ಶಿವನ ಕುರಿತಾದ ಚಿತ್ರ. ಇಂತಹ ಚಿತ್ರದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ ಎಂದರು

ಚಿತ್ರದ ಚಿತ್ರೀಕರಣದಲ್ಲಿ ಸಾವಿರಾರು ಜನರು ಭಾಗಿಯಾಗುತ್ತಿದ್ದರು. ಕ್ಲೈಮ್ಯಾಕ್ಸ್ ಅಂತು ಈವರೆಗೂ ಯಾವ ಚಿತ್ರದಲ್ಲೂ ನೋಡಿರದ ಕ್ಲೈಮ್ಯಾಕ್ಸ್ ಎನ್ನಬಹುದು. 12 ನಿಮಿಷಗಳ ಕ್ಲೈಮ್ಯಾಕ್ಸ್ ಗೆ 22 ದಿನಗಳ ಚಿತ್ರೀಕರಣ ಮಾಡಿದ್ದೇವೆ. “ಪಿನಾಕ”, ಚಾರುಕೇಶ ರಾಜನ ಕಥೆ. ಈ ಚಿತ್ರದಲ್ಲಿ ನಟಿಸಿರುವ ಶ್ರೀನಿವಾಸಮೂರ್ತಿ, ರಂಗಾಯಣ ರಘು, ಸಾಧುಕೋಕಿಲ ಅವರಂತಹ ಹಿರಿಯ ಕಲಾವಿದರಿಂದ ಸಾಕಷ್ಟು ಕಲಿತಿದ್ದೇನೆ ಎಂದರು.

ನಾಯಕಿ ಅರ್ಚನಾ ಅಯ್ಯರ್ ಮಾತನಾಡಿ ಒಂದೊಳ್ಳೆ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿ ಚಿತ್ರ ವೀಕ್ಷಿಸಲು ಕಾತುರದಿಂದ ಇರುವುದಾಗಿ ಮಾಹಿತಿ ಹಂಚಿಕೊಂಡರು.

ಈ ವೇಳೆ ಮಾತಿಗಿಳಿದ ನಿರ್ದೇಶಕ ಧನಂಜಯ್ ಪಿನಾಕ ಚಿತ್ರದ ಮೂಲಕ ನಿರ್ದೇಶಕನಾಗಿ ಪಾದಾರ್ಪಣೆ ಮಾಡುತ್ತಿದ್ದೇನೆ. “ಪಿನಾಕ” ಚಿತ್ರದ ಬಗ್ಗೆ ಹೆಚ್ಚು ಮಾತನಾಡಿರಲಿಲ್ಲ.ಕೆಲಸ ಮಾತನಾಡಲಿ ಎನ್ನುವುದು ನನ್ನ ಉದ್ದೇಶ ಚಿತ್ರದಲ್ಲಿ ಹೇಳಬೇಕಾಗಿರುವುದು ಇನ್ನೂ ಬಹಳಷ್ಟಿದೆ. ಅಧ್ಯಾತ್ಮಿಕತೆಗೆ ಹೆಚ್ಚು ಒತ್ತು ಕೊಡಲಾಗಿದೆ. ಮುಂಬರುವ ಟ್ರೇಲರ್ ನಲ್ಲೂ ಚಿತ್ರದ ಕುರಿತು ಇನ್ನಷ್ಟು ತಿಳಿಸುವುದಾಗಿ ತಿಳಿಸಿದರು

ನಿರ್ಮಾಣ ಉಸ್ತುವಾರಿ ವಿಜಯಾ ರಾಜೇಶ್ ಮಾತನಾಡಿ, `ಗಣೇಶ್ ಜೊತೆಗೆ ಚಿತ್ರ ಮಾಡಬೇಕು ಎಂಬುದು ನನ್ನ ಹಾಗೂ ನನ್ನ ಸಹೋದರ ವಿಶ್ವಪ್ರಸಾದ್ ಆಸೆಯಾಗಿತ್ತು ಪೌರಾಣಿಕ ಹಿನ್ನೆಲೆಯಿರುವ ಹಾಗೂ ಶಿವನ ಕುರಿತಾದ ಕಥಾಹಂದರವಿರುವ ಈ ಕಥೆ ಆಯ್ಕೆ ಮಾಡಿಕೊಂಡೆವು. “ಪಿನಾಕ” ಚಿತ್ರ ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಜನರಿಗೂ ಈ ಚಿತ್ರ ಮೆಚ್ಚುಗೆಯಾಗುವ ಭರವಸೆ ಇದೆ ಎಂದರು.

ಸಹ ನಿರ್ಮಾಪಕಿ ಕೃತಿ ಪ್ರಸಾದ್‍ಮಾತನಾಡಿ, ಉತ್ತಮ ಚಿತ್ರ ಮೂಡಿಬರಲು ಸಹಕಾರ ನೀಡಿದ “ಪಿನಾಕ” ಚಿತ್ರತಂಡದವರಿಗೆ ಧನ್ಯವಾದ ಹೇಳಿದರು.

ಹಿರಿಯ ಕಲಾವಿದರಾದ ರಂಗಾಯಣ ರಘು ಹಾಗೂ ಸಾಧುಕೋಕಿಲ ಅವರು “ಪಿನಾಕ” ಚಿತ್ರದ ಚಿತ್ರೀಕರಣದ ಅನುಭವ ಹಂಚಿಕೊಂಡರು.

ನಟರಾದ ರೋಬೊ ಗಣೇಶ್ ಹಾಗೂ ರವೀಂದ್ರನಾಥ್ ಸಹ ತಮ್ಮ ಪಾತ್ರದ ಕುರಿತು ಮಾತನಾಡಿದರು. ಸಂಗೀತ ನಿರ್ದೇಶಕ ಗೌರಾ ಹರಿ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin