ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಚಿತ್ರ ಆರಂಭ: “ಕೃಷ್ಣಂ ಪ್ರಣಯ ಸಖಿ”ಗೆ ಚಿತ್ರೀಕರಣ

ಗೋಲ್ಡನ್‍ಸ್ಟಾರ್ ಗಣೇಶ್ ಅಭಿನಯದ ಹೊಸ ಚಿತ್ರ “ಕೃಷ್ಣಂ ಪ್ರಣಯ ಸಖಿ” ಸದ್ದಿಲ್ಲದೆ ಆರಂಭವಾಗಿದ್ದು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಚಿತ್ರೀಕರಣ ಪೂರ್ಣಗೊಂಡಿದೆ.

ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ,ನಟ ಗೋಲ್ಡನ್ ಗಣೇಶ್ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡ ಶುಭಕೋರಿದೆ,
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ ” ಕೃಷ್ಣಂ ಪ್ರಣಯ ಸಖಿ”. ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು.
ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ.

ನಾಯಕ ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು.
ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿ ನಟಿಸಿದ್ದಾರೆ.