Golden star Ganesh starrer "Pinaka" release on October 2

ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ”ಪಿನಾಕ” ಚಿತ್ರ ಬಿಡುಗಡೆ - CineNewsKannada.com

ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ”ಪಿನಾಕ” ಚಿತ್ರ ಬಿಡುಗಡೆ

ವಿಶ್ವಪ್ರಸಾದ್ ಅದ್ದೂರಿಯಾಗಿ ನಿರ್ಮಿಸುತ್ತಿರುವ, ಕನ್ನಡ ಚಿತ್ರರಂಗದ ಹೆಸರಾಂತ ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ `ಪಿನಾಕ’ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ “ಪಿನಾಕ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

ಪಿನಾಕ' ಎಂದರೆ ಒಬ್ಬ ರಕ್ಷಕ ಎನ್ನುವ ಅವರು,ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಗಣೇಶ್ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗಣೇಶ್ ವೃತ್ತಿಜೀವನದಲ್ಲೇ ಇದೊಂದು ಅದ್ಭುತ ಚಿತ್ರವಾಗಲಿದೆ ಹಾಗೂ ಬಿಗ್ ಬಜೆಟ್‍ನ ಚಿತ್ರವೂ ಆಗಿದೆ.

ಚಿತ್ರದ ಗಣೇಶ್ ಅವರ ಹೊಸ ಲುಕ್ ಅಭಿಮಾನಿಗಳ ಮನ ಗೆಲ್ಲುತ್ತಿದೆ. ಅದ್ದೂರಿಯಾಗಿ ಮೂಡಿಬರುತ್ತಿರುವ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇದೊಂದು ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದೆ. ಅಪಾರವೆಚ್ಚದಲ್ಲಿ ಹಾಕಲಾಗಿರುವ ಅನೇಕ ಸೆಟ್ ಗಳು “ಪಿನಾಕ” ಚಿತ್ರದ ವಿಶೇಷಗಳಲ್ಲಿ ಒಂದಾಗಿದೆ.

ಫಸ್ಟ್ ಲುಕ್ ಪೆÇೀಸ್ಟರ್, ಹುಟ್ಟುಹಬ್ಬದಂದು ಬಿಡುಗಡೆಯಾಗಿರುವ ಪೆÇೀಸ್ಟರ್ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಗಣೇಶ್ ು ನೀಡಿರುವ ಸಹಕಾರಕ್ಕೆ ಚಿತ್ರತಂಡ ಧನ್ಯವಾದ ತಿಳಿಸಿದೆ. ನುರಿತ ತಂತ್ರಜ್ಞರ ಕಾರ್ಯವೈಖರಿ ಹಾಗೂ ಅನುಭವಿ ಕಲಾವಿದರ ತಾರಾಬಳಗ “ಪಿನಾಕ” ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin