Good response for the movie "Three coin horse" in OTT

“ಮೂರು ಕಾಸಿನ ಕುದುರೆ” ಚಿತ್ರಕ್ಕೆ ಓಟಿಟಿಯಲ್ಲಿ ಉತ್ತಮ ಪ್ರತಿಕ್ರಿಯೆ - CineNewsKannada.com

“ಮೂರು ಕಾಸಿನ ಕುದುರೆ” ಚಿತ್ರಕ್ಕೆ ಓಟಿಟಿಯಲ್ಲಿ ಉತ್ತಮ ಪ್ರತಿಕ್ರಿಯೆ

ಚಿತ್ರ ನಿರ್ಮಾಣ ಮಾಡುವುದು ಒಂದೆಡೆಯಾದರೆ ಚಿತ್ರ ಬಿಡುಗಡೆ ಮಾಡುವುದು ಮತ್ತೊಂದು ಸಮಸ್ಯೆ. ಇಂತಹ ಸಮಸ್ಯೆಗಳನ್ನು ಬಹುತೇಕ ಚಿತ್ರಗಳ ನಿರ್ಮಾಪಕರು ನಿರ್ಮಾಪಕರು ಎದುರಿಸುತ್ತಿದ್ದಾರೆ. ಚಿತ್ರ ತಯಾರಾಗಿ 2 ವರ್ಷ ಕಳೆದ ಬಳಿಕ “ಮೂರು ಕಾಸಿನ ಕುದುರೆ” ಚಿತ್ರ ಬಿಡುಗಡೆಗೂ ಮುನ್ನವೇ ಒಟಿಟಿಯಲ್ಲಿ ಪ್ರದರ್ಶನ ಕಂಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ

ಕರ್ತೃ ಗಿರೀಶ್ ಎಂಬ ಯುವಪ್ರತಿಭೆಯ ನಿರ್ದೇಶನದ ಚಿತ್ರ “ಮೂರು ಕಾಸಿನಕುದುರೆ” ರೆಡಿಯಾಗಿ 2 ವರ್ಷವಾದರೂ ವಿತರಕರು ಸಿಗದೆ ರಿಲೀಸ್ ಮಾಡಲಾಗಿಲ್ಲ. ಆದರೆ ಅಮೆಜಾನ್ ಪ್ರೈಂ ಸಂಸ್ಥೆಯವರು ಚಿತ್ರ ನೋಡಿ ಕಂಟೆಂಟ್ ಇಷ್ಟಪಟ್ಟು ತಂಡದ ಜತೆ ಕೈಜೋಡಿಸಿದ್ದಾರೆ.

ಕಳೆದ ವಾರವಷ್ಟೇ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿರುವ ಮೂರು ಕಾಸಿನ ಕುದುರೆ ಚಿತ್ರಕ್ಕೆ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಇಂಥ ಉತ್ತಮ ಚಿತ್ರವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಿ ಎಂದು ಗಿರೀಶ್ ಅವರಿಗೆ ಒತ್ತಾಯಿಸುತ್ತಿದ್ದಾರೆ.

ಈ ವೇಳೆ ಮಾತಿಗಳಿದ ನಿರ್ಮಾಪಕ, ನಿರ್ದೇಶಕ, ಗಿರೀಶ್, ಇದೊಂದು ಸೋಷಿಯಲ್ ಡ್ರಾಮಾ ಆಗಿದ್ದು, ಚಿತ್ರದ 3 ಪ್ರಮುಖ ಪಾತ್ರಗಳಲ್ಲಿ ಪೂರ್ಣಚಂದ್ರ ಮೈಸೂರು, ಸನಾತನಿ ಹಾಗೂ ಗೋವಿಂದೇಗೌಡ ಕಾಣಿಸಿಕೊಂಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಗಿರೀಶ್ ಎಸ್.ಗೌಡ್ರು ಬರೆದಿದ್ದು, ಪ್ರದೀಪ್ ಗಾಂಧಿ ಅವರ ಛಾಯಾಗ್ರಹಣ, ಆನಂದರಾಜಾ ವಿಕ್ರಮ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ ಎಂದರು

ರಂಗಭೂಮಿ ಹಿನ್ನೆಲೆಯಿಂದ ಬಂದವನು. ಸಾಕಷ್ಟು ಸೀರಿಯಲ್, ಸಿನಿಮಾಗಳಿಗೆ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ. ಗಿರೀಶ್ ಗೌಡ್ರು ಜತೆಗೂಡಿ ಈ ಚಿತ್ರ ಮಾಡಿದೆವು. ಇದೊಂದು ಕಿಡ್ನಾಪ್ ಡ್ರಾಮಾ ಆಗಿದ್ದು 3 ಜನರ ಮೇಲೆ ನಡೆಯುವ ಕಥೆ. ಒಬ್ಬ ಆರ್ಟಿಸ್ಟ್, ಮತ್ತೊಬ್ಬ ಕ್ಯಾಬ್ ಡ್ರೈವರ್, ಮಿಡಲ್ ಕ್ಲಾಸ್ ನಿಂದ ಬಂದ ಈ ಯುವಕರು ತಮ್ಮ ಕನಸನ್ನು ಈಡೇರಿಸಿಕೊಳ್ಳುಲು ಹೋಗಿ ಏನೆಲ್ಲ ಎದುರಿಸುತ್ತಾರೆ.

ಇಷ್ಟವಿಲ್ಲದ ಹುಡುಗನನ್ನು ಮದುವೆಯಾಗದೆ ಮನೆಬಿಟ್ಟು ಬಂದ ಯುವತಿ, ಒಂದೊಂದು ಸನ್ನಿವೇಶಗಳಲ್ಲಿರುವ ಈ ಮೂರೂ ಪಾತ್ರಗಳು ಒಂದೆಡೆ ಸೇರಿದ ನಂತರ ಏನೇನಾಗುತ್ತದೆ. ಆ ಯುವತಿಯ ಜರ್ನಿಯೂ ಇವರ ಜತೆ ಸಾಗುತ್ತದೆ. ಈ ಮೂವರೂ ಒಂದೇ ಕ್ಯಾಬ್ ನಲ್ಲಿ ಜತೆಯಾಗುತ್ತಾರೆ. ಮೂರು ಭಾಗಗಳಲ್ಲಿ ಈ ಕಥೆ ನಡೆಯುತ್ತದೆ. ಇದು ಎರಡನೇ ಭಾಗ. ಹಿಂದೆ ನಡೆದಿರುವುದು, ಮುಂದೆ ನಡೆಯುವುದರ ಬಗ್ಗೆ ಸೂಚನೆ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು

ನಾಯಕ ಪೂರ್ಣಚಂದ್ರ ಮಾತನಾಡಿ ಕಲಾವಿದನಾಗಬೇಕೆಂದು ಹೊರಟ ನಾನು ದುಡ್ಡನ್ನು ಹೊಂದಿಸಿಕೊಳ್ಳಲು ಹೇಗೆಲ್ಲ ಕಷ್ಟಪಡುತ್ತೇನೆ ಎಂದು ಚಿತ್ರದಲ್ಲಿ ಹೇಳಲಾಗಿದೆ ಎಂದರು.

ನಾಯಕಿ ಸನಾತನಿ ಮಾತನಾಡಿ ಹಿಂದೆ ಹೋಮ್ಲಿ ಪಾತ್ರಗಳನ್ನೇ ಮಾಡಿದ್ದ ನಾನು ಇದರಲ್ಲಿ ಮಾಡ್ರನ್ ಆಗಿ ಕಾಣಿಸಿಕೊಂಡುದ್ದೇನೆ ಎಂದರು.

ಹಾಸ್ಯ ಕಲಾವಿದ ಗೋವಿಂದೇಗೌಡ ಮಾತನಾಡಿ ಕ್ಯಾಬ್ ಡ್ರೈವರ್, ಇಡೀ ಸಿನಿಮಾ ನನ್ನ ಪಾತ್ರ ಕ್ಯಾರಿ ಆಗುತ್ತೆ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin