"Gramayana" trailer supported by star actors of the film industry: The film releases on July 3

“ಗ್ರಾಮಾಯಣ”ದ ಟ್ರೇಲರ್‍ಗೆ ಚಿತ್ರರಂಗದ ತಾರಾ ನಟರ ಬೆಂಬಲ : ಜುಲೈ 3 ಕ್ಕೆ ಚಿತ್ರ ಬಿಡುಗಡೆ - CineNewsKannada.com

“ಗ್ರಾಮಾಯಣ”ದ ಟ್ರೇಲರ್‍ಗೆ ಚಿತ್ರರಂಗದ ತಾರಾ ನಟರ ಬೆಂಬಲ : ಜುಲೈ 3 ಕ್ಕೆ ಚಿತ್ರ ಬಿಡುಗಡೆ

ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್, ಮೇಘ ಶೆಟ್ಟಿ ನಾಯಕ ನಾಯಕಿಯಾಗಿ ಅಭಿನಯಿಸಿರುವ “ಗ್ರಾಮಾಯಣ” ಚಿತ್ರದ ಟ್ರೇಲರ್ ಬಿಡುಗಡೆ ಬಿಡುಗಡೆಯಾಗಿದ್ದು ನಟ ದುನಿಯಾ ವಿಜಯ್ ಹಾಗೂ ನಟಿ ಅಪರ್ಣ ಅವರ ಪತಿ ನಾಗರಾಜ್ ವಸ್ತಾರೆ ಟ್ರೈಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು

ಈ ವೇಳೆ ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಸಂಗೀತ ನಿರ್ದೇಶಕ ಹಂಸಲೇಖ, ಯವ ರಾಜಕುಮಾರ್, ನಟ ನವೀನ್ ಶಂಕರ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಗಣ್ಯರೂ ಈ ಕ್ಷಣಕ್ಕೆ ಸಾಕ್ಷಿಯಾದರು

ನಟ ದುನಿಯಾ ವಿಜಯ್ ಮಾತನಾಡಿ ವಿನಯ್ ರಾಜಕುಮಾರ್ ಎಂದರೆ ಬಹಳ ಇಷ್ಟ. ದೇವನೂರು ಚಂದ್ರು ಉತ್ತಮ ನಿರ್ದೇಶಕ. ನಾನು ಅವರನ್ನು ಎರಡನೇ ಸೂರಿ ಅಂತಲೇ ಕರೆಯುತ್ತೇನೆ. ಈ ಚಿತ್ರವನ್ನು ನಿರ್ಮಾಣ ಮಾಡಿರುವ ಲಹರಿ ಸಂಸ್ಥೆಗೆ ಹಾಗೂ ಇಡೀ “ಗ್ರಾಮಾಯಣ” ತಂಡಕ್ಕೆ ಒಳ್ಳೆಯದಾಗಲಿ ಎಂದರು.

ನಟಿ ಅಪರ್ಣ ಪತಿ ನಾಗರಾಜ್ ವಸ್ತಾರೆ ಮಾತನಾಡಿ ಅಪರ್ಣ, “ಗ್ರಾಮಾಯಣ” ಚಿತ್ರದ ಚಿತ್ರೀಕರಣ ಮುಗಿಸಿಕೊಂಡು ಬಂದ ಮೇಲೆ ಅಲ್ಲಿನ ವಿಷಯಗಳನ್ನು ಬಳಿ ಹಂಚಿಕೊಳ್ಳುತ್ತಿದ್ದರು. ಅವರಿಲ್ಲದೆ ಅವರ ಅಭಿನಯದ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು, ಬಹಳ ಬೇಸರವಾಗಿದೆ. “ಗ್ರಾಮಾಯಣ” ಚಿತ್ರ ಯಶಸ್ವಿಯಾಗಲಿ ಎಂದು ಹೇಳಿದರು.

ನಟ ರಾಘವೇಂದ್ರ ರಾಜಕುಮಾರ್ ಮಾತನಾಡಿ ಈ ಚಿತ್ರದ ಬಗ್ಗೆ ನಾವು ಹೇಳುದಕ್ಕಿಂತ ಅಭಿಮಾನಿಗಳು ಹೇಳಬೇಕು. ಜುಲೈ 3 ಚಿತ್ರ ತೆರೆಗೆ ಬರುತ್ತಿದೆ. ಎಲ್ಲರೂ ನೋಡಿ. ಪೆÇ್ರೀತ್ಸಾಹ ನೀಡಿ ಎಂದರು.

ಅಣ್ಣನ ಚಿತ್ರ ಯಶಸ್ವಿಯಾಗಲೆಂದು ಯುವ ರಾಜಕುಮಾರ್ ಹಾರೈಸಿದರು. ನಿರ್ದೇಶಕ ಸಿಂಪಲ್ ಸುನಿ ಚಿತ್ರದ ಮೊದಲ ಪ್ರದರ್ಶನಕ್ಕೆ ಒಂದು ಆಡಿಯನ್ನೇ ಬುಕ್ ಮಾಡುವುದಾಗಿ ಹೇಳಿದರು. ನಟ ನವೀನ್ ಶಂಕರ್ ಕೂಡ “ಗ್ರಾಮಾಯಣ”ಕ್ಕೆ ಶುಭ ಕೋರಿದರು.

ನಿರ್ಮಾಪಕ ನವೀನ್ ಮನೋಹರ್, ಲಹರಿ ವೇಲು ಮಾತನಾಡಿ “ಗ್ರಾಮಾಯಣ” ಟ್ರೇಲರ್ ಚೆನ್ನಾಗಿ ಬಂದಿದೆ. ಚಿತ್ರ ಇನ್ನೂ ಚೆನ್ನಾಗಿ ಬಂದಿದೆ. ಲಹರಿ ಸಂಸ್ಥೆ ನಿರ್ಮಾಣದ ಒಂಭತ್ತನೇ ಚಿತ್ರ. ವಿನಯ್ ರಾಜಕುಮಾರ್ ಅವರ ಅಭಿನಯದ ಒಂಭತ್ತನೇ ಚಿತ್ರವೂ ಹೌದು. ಒಂಭತ್ತು ನಮ್ಮ ಸಂಸ್ಥೆಗೆ ಅದೃಷ್ಟದ ಸಂಖ್ಯೆ. ಆಗಮಿಸಿದ ಎಲ್ಲಾ ಅತಿಥಿಗಳಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು. ಅವರು ಸಹ ಎಲ್ಲರಿಗೂ ಧನ್ಯವಾದ ಹೇಳಿದರು. ಲಹರಿ ಸಂಸ್ಥೆಯ ಸ್ಥಾಪಕ ಮನೋಹರ್ ನಾಯ್ಡು ಹಾಗೂ ಅವರ ಸಹೋದರ ರಮೇಶ್ ಅವರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಾಯಕ ವಿನಯ್ ರಾಜಕುಮಾರ್ ಮಾತನಾಡಿ ಈ ವೇದಿಕೆ ನೋಡುತ್ತಿದ್ದರೆ, ನನಗೆ ಚಿತ್ರದ ಆರಂಭದ ದಿನಗಳು ನೆನಪಾಗುತ್ತಿದೆ.ಚಿತ್ರ ಶುರುವಾಗಿ ಇಷ್ಟು ವರ್ಷ ಆಯಿತು ಅಂತ ಎಲ್ಲರೂ ಹೇಳುತ್ತಿದ್ದಾರೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು. ಲಹರಿ ಸಂಸ್ಥೆಯವರು ನಮ್ಮ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಅವರಿಗೆ, ನಿರ್ದೇಶಕರಿಗೆ, ಇಡೀ ತಂಡಕ್ಕೆ ಹಾಗೂ ಆಗಮಿಸಿದ ಪ್ರತಿಯೊಬ್ಬ ಗಣ್ಯರಿಗೂ ಧನ್ಯವಾದ ಎಂದು ಮಾತನಾಡಿದ, ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಈ ಚಿತ್ರದಲ್ಲಿ ಮಾಡಿರುವುದಾಗಿ ಹೇಳಿದರು.

ನಿರ್ದೇಶಕ ದೇವನೂರು ಚಂದ್ರು ಮಾತನಾಡಿ ಚಿತ್ರದ ಬಗ್ಗೆ ನಾನು ಹೇಳುವುದೇನು ಇಲ್ಲ. ಒಂದಂತೂ ಹೇಳುತ್ತೇನೆ. ಕೊಟ್ಟ ದುಡ್ಡಿಗೆ ಮೋಸವಾಗದ ಚಿತ್ರವಿದು. ಒಂದೊಳ್ಳೆ ಚಿತ್ರ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ , ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ಎಂದು ಹೇಳಿದ ತುಂಬಾ ಭಾವುಕರಾದರು.

ಟಿ ಮೇಘ ಶೆಟ್ಟಿ ಕೂಡ ಎಲ್ಲರಿಗೂ ಧನ್ಯವಾದ ತಿಳಿಸಿದರು. ನಟ ಅರುಣ್ ಸಾಗರ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಹಾಗೂ ಗೀತರಚನೆಕಾರ ಪ್ರಮೋದ್ ಮರವಂತೆ ಮುಂತಾದವರು “ಗ್ರಾಮಾಯಣ” ಚಿತ್ರದ ಕುರಿತು ಮಾತನಾಡಿದರು.

ವಿನಯ್ ರಾಜಕುಮಾರ್, ಮೇಘ ಶೆಟ್ಟಿ, ಲೂಸ್ ಮಾದ ಯೋಗೀಶ್, ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಬಲ ರಾಜವಾಡಿ, ಅಪರ್ಣ ವಸ್ತಾರೆ, ಸೀತಾ ಕೋಟೆ, ಪ್ರಶಾಂತ್ ಹೊನ್ನಾಳಿ, ಅವಿನಾಶ್ ರೈ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin