“ಗೆರಿಲ್ಲಾ ವಾರ್” ನಿರ್ದೇಶಕ ಓಂ ಪ್ರಕಾಶ್ 50ನೇ ಚಿತ್ರ
“ಎಕೆ- 47” “”, “ಲಾಕಪ್ ಡೆತ್”, ” ಕಲಾಸಿಪಾಳ್ಯ”, “ಹುಚ್ಚ” ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ “ಗೆರಿಲ್ಲಾ ವಾರ್”.

“ಮಂಡ್ಯ ಸ್ಟಾರ್” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ “ಮಂಡ್ಯ ಸ್ಟಾರ್” ಲೋಕಿ ಎಂದೇ ಪ್ರಸಿದ್ಧರಾಗಿರುವ ಲೋಕೇಶ್ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು ಕುತೂಹಲ ಕೆರಳಿಸಿದೆ
ಗಂಗಮ್ಮ ಎಂಟಪ್ರ್ರೈಸಸ್ ಲಾಂಛನದಲ್ಲಿ ರಮೇಶ್ ಅಬ್ಬನಕುಪ್ಪೆ ಹಾಗೂ ಸ್ನೇಹಿತರು ನಿರ್ಮಿಸುತ್ತಿರುವ ಚಿತ್ರವನ್ನು ಸಿ.ಮಾದೇಶ್ ಅರ್ಪಿಸುತ್ತಿದ್ದಾರೆ. ಓಂಪ್ರಕಾಶ್ ರಾವ್ ಅವರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ದೀಪು.ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ. ರವಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನವಿದೆ.

ನಿರ್ದೇಶಕ ಓಂಪ್ರಕಾಶ್ ರಾವ್ ಮಾತನಾಡಿ “ಗೆರಿಲ್ಲಾ ವಾರ್” ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸುತ್ತದೆ. ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ. ಹಾಗಂತ ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಈಗಿನ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್ ನಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ತಿಳಿಸಿದರು.

“ಮಂಡ್ಯ ಸ್ಟಾರ್” ಲೋಕಿ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಚ್ಯುತಕುಮಾರ್, ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಸುಧಾ ಬೆಳವಾಡಿ, ಚಿತ್ರಾ ಶೆಣೈ, ಪೂಜಾ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾಯಕಿ ಸೇರಿದಂತೆ ಚಿತ್ರದ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದಿದ್ಧಾರೆ

