"Hayagriva" movie to release on February 27th

ಫೆಬ್ರವರಿ 27 ರಂದು “ಹಯಗ್ರೀವ” ಚಿತ್ರ ಬಿಡುಗಡೆ - CineNewsKannada.com

ಫೆಬ್ರವರಿ 27 ರಂದು “ಹಯಗ್ರೀವ” ಚಿತ್ರ ಬಿಡುಗಡೆ

ಪದ್ಮ ಸಮೃದ್ಧಿ ಮಂಜುನಾಥ್ ನಿರ್ಮಿಸಿರುವ, ರಘುಕುಮಾರ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಹಯಗ್ರೀವ” ಚಿತ್ರ ಫೆಬ್ರವರಿ 27 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಿರ್ಮಾಪಕ ಸಮೃದ್ಧಿ ಮಂಜುನಾಥ್ ಮಾತನಾಡಿ, ರಘುಕುಮಾರ್ ನಿರ್ದೇಶಿಸಿದ್ದ ಕಿರುಚಿತ್ರ ನೋಡಿದ್ದೆ.ನಟ ದರ್ಶನ್ ಮೂಲಕ ಧನ್ವೀರ್ ಪರಿಚಯವಾಯಿತು. ಧನ್ವೀರ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ. ಕನ್ನಡದಲ್ಲಿ ತೀರ ಅಪರೂಪದ ಕಥೆ ಇದು. ಪ್ರೇಕ್ಷಕ ಕೊಟ್ಟ ದುಡ್ಡಿಗೆ ಮೋಸವಾಗದ ಚಿತ್ರವಿದು ಎಂದರು.

ನಿರ್ದೇಶಕ ರಘುಕುಮಾರ್ ಮಾತನಾಡಿ ಮೈಥಾಲಜಿ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ಹೆಣೆಯಲಾಗಿದೆ. ಧನ್ವೀರ್‍ಗೆ ನಾಯಕಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದಾರೆ. ಸಾಧುಕೋಕಿಲ, ಶರತ್ ಲೋಹಿತಾಶ್ವ , ಶೊಭ್ ರಾಜ್, ಅಶ್ವಿನಿ ಗೌಡ, ಗಿಲ್ಲಿ ನಟ ಮುಂತಾದವರು ತಾರಾಬಳಗದಲ್ಲಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಗಿರೀಶ್ ಆರ್ ಗೌಡ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿರುವ ಈ ಚಿತ್ರಕ್ಕೆ ಶೈಲೇಶ್ ಕುಮಾರ್ ಹಾಗೂ ಚೇತನ್ ಸಿದ್ ಸಂಭಾಷಣೆ ಬರೆದಿದ್ದಾರೆ ಎಂದರು.

ನಟ ಧನ್ವೀರ್ ಮಾತನಾಡಿ ವಿಜಯಲಕ್ಷ್ಮಿ ದರ್ಶನ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದರು. ರಘುಕುಮಾರ್ ಕಥೆ ಹೇಳಿದ ರೀತಿಯಲ್ಲೇ ಚಿತ್ರವನ್ನು ತೆರೆಯ ಮೇಲೂ ತಂದಿದ್ದಾರೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ಪೊಲೀಸ್ ಅಧಿಕಾರಿ ಪಾತ್ರ. ಮತ್ತೊಂದು ಏನು ಎಂಬುದನ್ನು ಸಿನಿಮಾದಲ್ಲೇ ನೋಡಬೇಕು ಎಂದು ಹೇಳಿದರು.

ನಾಯಕಿ ಸಂಜನಾ ಆನಂದ್ ಮಾತನಾಡಿ ಹಿರಿಯ ಕಲಾವಿದರ ಜೊತೆಗೆ ಅಭಿನಯಿದ್ದು ಬಹಳ ಖುಷಿಯಾಯಿತು. ಮೊದಲಿನಿಂದಲೂ ನಾವೆಲ್ಲರೂ ನೀಡುತ್ತಾ ಬಂದಿರುವ ಪ್ರೋತ್ಸಾಹ ಈ ಚಿತ್ರಕ್ಕೂ ಇರಲಿ ಎಂದರು.

ಚಿತ್ರದಲ್ಲಿ ನಟಿಸಿರುವ ನಟ ಅಶ್ವಿನ್ ಹಾಸನ್ ಹಾಗೂ ನಟಿ ಆಶಾರಾಣಿ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin