Naresh-Pavitra Lokesh 'Remarriage' Teaser Released

ನರೇಶ್-ಪವಿತ್ರಾ ಲೋಕೇಶ್ ‘ಮತ್ತೆ ಮದುವೆ’ ಟೀಸರ್ ರಿಲೀಸ್ - CineNewsKannada.com

ನರೇಶ್-ಪವಿತ್ರಾ ಲೋಕೇಶ್ ‘ಮತ್ತೆ ಮದುವೆ’ ಟೀಸರ್ ರಿಲೀಸ್

ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ ಟೀಸರ್..ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ.

ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ, ಇದು ರಿಯಲ್ ಲೈಫ್ ಕಥೆಯಂತೆ ಭಾಸವಾಗಿದೆ.

ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರ್ತಿದ್ದು, ಮೇ ತಿಂಗಳಲ್ಲಿ ಥಿಯೇಟರ್ ಅಂಗಳ ಪ್ರವೇಶಿಸಲಿದೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin