“Hubballi Hunters” first phase of shooting complete

“ಹುಬ್ಬಳ್ಳಿ ಹಂಟರ್ಸ್” ಮೊದಲ ಹಂತದ ಚಿತ್ರೀಕರಣ ಪೂರ್ಣ - CineNewsKannada.com

“ಹುಬ್ಬಳ್ಳಿ ಹಂಟರ್ಸ್” ಮೊದಲ ಹಂತದ ಚಿತ್ರೀಕರಣ ಪೂರ್ಣ

“ಬೆಲ್ ಬಾಟಮ್” ನಿರ್ಮಾಪಕ ಸಂತೋಷ್ ಕುಮಾರ್ ಹೊಸ ಸಿನಿಮಾ ನಿರ್ಮಾಣದ ಚಿತ್ರ “ ಹುಬ್ಬಳ್ಳಿ ಹಂಟರ್ಸ್”ಮ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಎಡಗೈ ಅಪಘಾತಕ್ಕೆ ಕಾರಣ ಚಿತ್ರ ನಿರ್ದೇಶಿಸಿದ್ದ ಸಮರ್ಥ್ ಬಿ ಕಡ್ಕೋಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ

ಹುಬ್ಬಳ್ಳಿಯಲ್ಲಿ ಮುಹೂರ್ತ ನೆರವೇರೆಸಿದ್ದ ಚಿತ್ರತಂಡ ಹುಬ್ಬಳ್ಳಿಯಲ್ಲಿ 14 ದಿನ ಶೂಟಿಂಗ್ ಚಿತ್ರೀಕರಣ ನಡೆಸಿದೆ. ಮಾರ್ಚ್ ತಿಂಗಳಲ್ಲಿ ಎರಡನೇ ಹಂತದ ಚಿತ್ರೀಕರಣ ನಡೆಸಲು ಮುಂದಾಗಿದೆ

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ, ಮಹಾನಟಿ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.

ಸಿನಿಮಾದ ಟೈಟಲ್ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಕಥೆ ಬರೆದು ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಅವರೊಂದಿಗೆ ಸಂಭಾಷಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin