"Jigar" trailer release: Hits theaters on July 5

“ಜಿಗರ್” ಚಿತ್ರದ ಟ್ರೈಲರ್ ಬಿಡುಗಡೆ: ಜುಲೈ 5 ರಂದು ಸಿನಿಮಾ ತೆರೆಗೆ - CineNewsKannada.com

“ಜಿಗರ್” ಚಿತ್ರದ ಟ್ರೈಲರ್ ಬಿಡುಗಡೆ: ಜುಲೈ 5 ರಂದು ಸಿನಿಮಾ ತೆರೆಗೆ

ಪೂಜಾ ವಸಂತಕುಮಾರ್ ನಿರ್ಮಾಣದ, ಸೂರಿ ಕುಂದರ್ ನಿರ್ದೇಶನದ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ “ಜಿಗರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಹಿರಿಯ ಸಿನಿಮಾ ಪ್ರಚಾರಕರ್ತ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ಧಾರೆ. ಚಿತ್ರ ಜುಲೈ 5ರಂದು ತೆರೆಗೆ ಬರುತ್ತಿದೆ.

ನಾಯಕ ಪ್ರವೀಣ್ ತೇಜ್ ಮಾತನಾಡಿ ಪ್ರೇಮಕಥೆಗಳಿಗೆ ಸೀಮಿತನಾಗಿದ್ದ ನನ್ನನ್ನು ನಿರ್ದೇಶಕರು ಈ ಚಿತ್ರದ ಮೂಲಕ ಆಕ್ಷನ್ ಹೀರೋ ಮಾಡಿದ್ದಾರೆ ಚಿತ್ರದಲ್ಲಿ ಪಾತ್ರದ ಹೆಸರು ಜೀವ. ಉತ್ಸಾಹಿ ಯುವಕನೊಬ್ಬ ಫಿಶ್ ಟೆಂಡರ್ ಶಿಪ್ ನಲ್ಲಿ ಭಾಗಿಯಾಗುತ್ತಾನೆ. ಆಮೂಲಕ ಭೂಗತಲೋಕಕ್ಕೂ ಕಾಲಿಡುತ್ತಾನೆ. ಅಲ್ಲಿ ಮೂರು ನಾಲ್ಕು ಸಂಘಗಳಿರುತ್ತದೆ. ಸಂಘಗಳ ನಡುವೆ ಸಂಘರ್ಷವೂ ಇರುತ್ತದೆ. ಇದು ಚಿತ್ರದ ಪ್ರಮುಖ ಕಥಾಹಂದರ. ಇದರೊಟ್ಟಿಗೆ ಲವ್, ಆಕ್ಷನ್, ಕಾಮಿಡಿ ಕೂಡ ನಮ್ಮ ಚಿತ್ರದಲ್ಲಿದೆ ಎಂದು ಮಾಹಿತಿ ಹಂಚಿಕೊಂಡರು

ನಿರ್ದೇಶಕ ಸೂರಿ ಕುಂದರ್ ಮಾತನಾಡಿ, ಸುಮಾರು ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಖ್ಯಾತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ. ಸ್ವತಂತ್ರ ನಿರ್ದೇಶಕನಾಗಿ ಮೊದಲ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. “ಜಿಗರ್” ಎಂದರೆ ಎರಡು ಗುಂಡಿಗೆವುಳ್ಳವನು ಹಾಗೂ ಯಾವುದಕ್ಕೂ ಅಂಜದವನು ಎಂದು ಅರ್ಥ. ಚಿತ್ರವನ್ನು ಮಲ್ಪೆ , ಉಡುಪಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಜುಲೈ 5 ರಂದು “ಜಿಗರ್” ಬಿಡುಗಡೆಯಾಗಲಿದೆ. ನೋಡಿ ಪ್ರೋತ್ಸಾಹಿಸಿ ಎಂದು ಕೇಳಿಕೊಂಡರು

ನಾಯಕಿ ವಿಜಯಶ್ರೀ, ನಟ ಯಶ್ ಶೆಟ್ಟಿ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ರಿತ್ವಿಕ್ ಮುರಳಿಧರ್, ಗೀತರಚನೆಕಾರ ಗಣೇಶ್, ಛಾಯಾಗ್ರಾಹಕ ಶಿವಸೇನ ಮುಂತಾದವರು “ಜಿಗರ್” ಚಿತ್ರದ ಕುರಿತು ಮಾತನಾಡಿದರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin