“ಜೊಡೆತ್ತು” ಚಿತ್ರ ಆರಂಭ: ಕನ್ನಡ ಸೇರಿ ಮೂರು ಭಾಷೆಯಲ್ಲಿ ಚಿತ್ರ ತಯಾರು
ಚಿತ್ರರಂಗದಲ್ಲಿ ಅದಭಿರುಚಿಯ ಚಿತ್ರ ನಿರ್ಮಾಪಕ ಎಂದೇ ಗುರುತಿಸಿಕೊಂಡಿರುವ ನಿರ್ಮಾಪಕ ಸೋಮಶೇಖರ್ (ಕಟ್ಟಿಗೇನಹಳ್ಳಿ) ಹೊಸ ಚಿತ್ರ ಕೈಗೆತ್ತಿಕೊಂಡಿದ್ದಾರೆ. ಅದುವೇ “ಜೋಡೆತ್ತು”. ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಚಿತ್ರಕ್ಕೆ ಆಯೋಗ್ಯ ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಕನ್ನಡ, ತೆಲುಗು, ತಮಿಳು ಸೇರಿ ಮೂರು ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದೆ. ಚಿತ್ರದ ಮುಹೂರ್ತಕ್ಕೆ ನಟ ಶರಣ್, ನಿರ್ದೇಶಕ ಆರ್ ಚಂದ್ರ,ಸೇರಿದಂತೆ ಹಲವು ಗಣ್ಯರು ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು, ಇದೇ ವೇಳೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಯಿತು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಭಾಗಿಯಾಗಿ ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು
ನಿರ್ದೇಶಕ ಆಯೋಗ್ಯ ಮಹೇಶ್ ಕುಮಾರ್ ಮಾತನಾಡಿ` ಚಿತ್ರದಲ್ಲಿ ಚಿಕ್ಕಣ್ಣ ಅವರ ಪಾತ್ರ ಹಾಗೂ ಗೆಟಪ್ ಎರಡೂ ಭಿನ್ನವಾಗಿದೆ. ಕಥೆಯಲ್ಲಿ ಗಟ್ಟಿತನವಿದೆ. ಪಕ್ಕಾ ದೇಸಿ ಸೊಗಡಿನಲ್ಲಿ ತಯಾರಾಗುತ್ತಿರುವ ಸಿನಿಮಾ. ಮಂಡ್ಯ ಸೀಮೆಯಿಂದ ಬಂದಿರುವುದರಿಂದ ಅಲ್ಲಿನ ಸೊಗಡನ್ನು ಸಿನಿಮಾದಲ್ಲಿ ಸಾಧ್ಯವಾದಷ್ಟೂ ಕಟ್ಟಿಕೊಡಲು ಪ್ರಯತ್ನಿಸುತ್ತೇನೆ’ ಎಂದರು
ನಟ ಚಿಕ್ಕಣ್ಣ ಮಾತನಾಡಿ ಸಿನಿಮಾದ ಕಥೆ 80ರ ದಶಕದ ಕಾಲಘಟ್ಟದಲ್ಲಿ ನಡೆಯುತ್ತದೆ. ನಿಜವಾದ `ಜೋಡೆತ್ತು’ ಯಾರೆಂಬುದನ್ನು ಸದ್ಯದಲ್ಲೇ ತಿಳಿಸುತ್ತೇವೆ. ಕೆರಿಯರ್‍ನಲ್ಲೇ ದೊಡ್ಡ ಬಜೆಟ್‍ನ ಸಿನಿಮಾ. ಹಳ್ಳಿಯಲ್ಲಿ ಶುರುವಾಗಿ ಹಳ್ಳಿಯಲ್ಲೇ ಮುಗಿಯುವ ಸಿನಿಮಾ. ಫ್ಯಾಮಿಲಿ ಸೆಂಟಿಮೆಂಟ್, ಕಾಮಿಡಿ, ಆಕ್ಷನ್ ಎಲ್ಲಾ ಅಂಶಗಳೂ ಕೂಡಿರುವ ಸಿನಿಮಾವಿದು. ನವೆಂಬರ್‍ನಿಂದ ಶೂಟಿಂಗ್ ಶುರುವಾಗಲಿದೆ. ಅಂದಹಾಗೆ ಈ ಸಿನಿಮಾದ ಟೈಟಲ್ ರಾಮಮೂರ್ತಿ ಅವರ ಬಳಿಯಿತ್ತು. ನಮಗಾಗಿ ಬಿಟ್ಟುಕೊಟ್ಟರು ಅವರಿಗೆ ಧನ್ಯವಾದಗಳು’ ಎಂದರು

ನಿರ್ಮಾಪಕ ಸೋಮಶೇಖರ್ (ಕಟ್ಟಿಗೇನಹಳ್ಳಿ) ಮಾಹಿತಿ ನೀಡಿ ಆಕಾಶ್ ಎಂಟರ್‍ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ, ಹಿಂದಿನ ಸಿನಿಮಾಗಳಿಗಿಂತ ಭಿನ್ನವಾಗಿರಲಿದೆ. ದೊಡ್ಡ ಮಟ್ಟದಲ್ಲಿ ನಿರ್ಮಿಸಿ, ಬಿಡುಗಡೆ ಮಾಡುವ ಆಲೋಚನೆಯಿದೆ. ಮಹೇಶ್ ದೇವ್ ಕಥೆ ನೀಟಾಗಿ ಬರೆದಿದ್ದಾರೆ. ತೆರೆಯ ಮೇಲೆ ಇನ್ನೂ ಸೊಗಸಾಗಿ ಮೂಡಿಬರುವಂತೆ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ. ಬಜೆಟ್‍ನ ಯಾವುದೇ ಮಿತಿಯಿಲ್ಲ’ ಎಂದು ತಿಳಿಸಿದರು
ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಮಾತನಾಡಿ ಚಿತ್ರದಲ್ಲಿ ಐದು ಹಾಡುಗಳಿವೆ. ಮಾಸ್-ಕ್ಲಾಸ್ ಅಂಶಗಳಿಂದ ಕೂಡಿರಲಿದೆ ಎಂದು ಹೇಳಿದರು

ಸ್ಟಾರ್ ಸಿನಿಮಾಗಳಿಗೆ ಕ್ಯಾಮೆರಾಮನ್ ಆಗಿ ಕಾರ್ಯ ನಿರ್ವಹಿಸಿರುವ ಸುಧಾಕರ್ ಎಸ್ ರಾಜ್ `ಜೋಡೆತ್ತು’ಗಳಿಗೆ ಕ್ಯಾಮೆರಾ ಕಣ್ಣಾಗಿದ್ದಾರೆ. ಮಾಸ್ತಿ, ರಾಜಶೇಖರ್ ಹಾಗೂ ರಘು ನಿಡುವಳ್ಳಿ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದು, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಜೋಡೆತ್ತು ಸಿನಿಮಾಕ್ಕಿದೆ.

