ಹೊಸ ಪ್ರತಿಭೆಗಳಿಗೆ ಬೆನ್ನಲುಬಾಗಿ ನಿಂತ ‘ಜೋಗಿ’ ಪ್ರೇಮ್ –ರಕ್ಷಿತಾ ದಂಪತಿ
ಸ್ಯಾಂಡಲ್‍ವುಡ್‍ನ ಸ್ಟಾರ್ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಚಿತ್ರರಂಗದಲ್ಲಿ ಈಗ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಕನಸಿನ ಹೊಸ ನಿರ್ಮಾಣ ಸಂಸ್ಥೆ “ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್” ಅನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಕೇವಲ ದೊಡ್ಡ ಸಿನಿಮಾಗಳನ್ನು ಮಾಡುವುದಷ್ಟೇ ಅಲ್ಲದೆ, ಹೊಸ ಆಲೋಚನೆ ಮತ್ತು ಅದ್ಭುತ ಪ್ರತಿಭೆ ಹೊಂದಿರುವ ಯುವಕರಿಗೆ ಪೆÇ್ರೀತ್ಸಾಹ ನೀಡುವ ಉದ್ದೇಶದಿಂದ ಈ ಬ್ಯಾನರ್ ಪ್ರಾರಂಭಿಸಲಾಗಿದೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ದಿಸೆ ನೀಡಲು ಪ್ರೇಮ್-ರಕ್ಷಿತಾ ದಂಪತಿ ಮುಂದಾಗಿದ್ದಾರೆ.
ನೂತನ ಬ್ಯಾನರ್‍ನ ಮೊದಲ ಚಿತ್ರವನ್ನು ಪ್ರೇಮ್ ಅವರ ಗರಡಿಯಲ್ಲಿ ಪಳಗಿದ ಶಿಷ್ಯ ಮಂಜುನಾಥ್ ಬಿ.ಎಸ್. ನಿರ್ದೇಶಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಪ್ರೇಮ್ ಅವರ ಜೊತೆ ಸಹ-ನಿರ್ದೇಶಕರಾಗಿ ಹಾಗೂ ಚಿತ್ರಸಾಹಿತಿಯಾಗಿ ಗುರುತಿಸಿಕೊಂಡಿರುವ ಮಂಜುನಾಥ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ.
‘ಏಕ್ ಲವ್ ಯಾ’ ಖ್ಯಾತಿಯ ಯುವ ನಟ ರಾಣಾ ಈ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ.ಛಾಯಾಗ್ರಹಣ: ಖ್ಯಾತ ಛಾಯಾಗ್ರಾಹಕ ವಿಲಿಯಂ ಡೆವಿಡ್ ಅವರ ಕ್ಯಾಮರಾ ಕಣ್ಣಲ್ಲಿ ಚಿತ್ರ ಮೂಡಿಬರಲಿದೆ. ಯುವ ಪ್ರತಿಭೆ ರೋಮಿಯೋ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

