"Jollydays" boy's song from the movie "31 Days" released

“ಜಾಲಿಡೇಸ್” ಹುಡುಗನ “31 ಡೇಸ್” ಚಿತ್ರದ ಹಾಡು ಬಿಡುಗಡೆ - CineNewsKannada.com

“ಜಾಲಿಡೇಸ್” ಹುಡುಗನ “31 ಡೇಸ್” ಚಿತ್ರದ ಹಾಡು ಬಿಡುಗಡೆ

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 ಡೇಸ್ ಚಿತ್ರದ ಹಾಡುಗಳ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ ವಿ. ಮನೋಹರ್ ಅವರ 150ನೇ ಚಿತ್ರ ಇದಾಗಿದ್ದು ಚಿತ್ರತಂಡ ಆತ್ಮೀಯವಾಗಿ ಸನ್ಮಾನಿಸಿತು

ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಸಂಗೀತ ನಿರ್ದೇಶಕ ಗುರುಕಿರಣ್, ನಟಿ – ನಿರ್ಮಾಪಕಿ ಗೀತಪ್ರಿಯ ಮುಂತಾದ ಗಣ್ಯರು ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಸಂಗೀತ ನಿರ್ದೇಶಕ ವಿ.ಮನೋಹರ್, ಮಾತನಾಡಿ ಸಂಗೀತ ನಿರ್ದೇಶಕನಾಗಿದ್ದೆ ಅನಿರೀಕ್ಷಿತ. ನಿರ್ದೇಶಕನಾಗಲು ಬಂದ ನಾನು, ಸಂಗೀತ ನಿರ್ದೇಶಕನಾದೆ. ಇದಕ್ಕೆ ಉಪೇಂದ್ರ ಅವರು ಕಾರಣ. “ತರ್ಲೆ ನನ್ಮಗ” ನನ್ನ ಸಂಗೀತ ಸಂಯೋಜನೆಯ ಮೊದಲ ಚಿತ್ರ. “31 ಡೇಸ್” 150 ನೇ ಚಿತ್ರ. ಇಷ್ಟು ವರ್ಷದ ಸಂಗೀತದ ಜರ್ನಿಗೆ ಸಾಥ್ ನೀಡಿದ ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಇನ್ನೂ ಈ ಚಿತ್ರದಲ್ಲಿ 11 ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ – ಗಾಯಕಿಯರು ಹಾಡಿದ್ದಾರೆ. ನಾಯಕ ನಿರಂಜನ್ ಶೆಟ್ಟಿ ಬಹಳ ವರ್ಷಗಳ ಪರಿಚಯ. ಅವರ ಶ್ರೀಮತಿ ನಾಗವೇಣಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ನಾಯಕ ನಿರಂಜನ್ ಶೆಟ್ಟಿ ಮಾತನಾಡಿ “ಜಾಲಿಡೇಸ್” ಚಿತ್ರದ ಮೂಲಕ ನಾಯಕನಾದೆ. “31 ಡೇಸ್” ನಾನು ನಾಯಕನಾಗಿ ನಟಿಸಿರುವ 8 ನೇ ಚಿತ್ರ. 35 ಚಿತ್ರಗಳಲ್ಲಿ ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ. ಈ ಚಿತ್ರವನ್ನು ನನ್ನ ಪತ್ನಿ ನಾಗವೇಣಿ ಎನ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಗುರುಗಳಾದ ವಿ.ಮನೋಹರ್ ಸಂಗೀತ ನೀಡಿದ್ದಾರೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಗೀತ ನಿರ್ದೇಶಕ ಗುರುಕಿರಣ್, ನನ್ನನ್ನು ಬಾಲ್ಯದಿಂದ ನೋಡಿರುವ ಜಯಪ್ರಕಾಶ್ ಹೆಗ್ಡೆ ಅವರು ನಮ್ಮ ಚಿತ್ರದ ಹಾಡುಗಳನ್ನು ಅನಾವರಣ ಮಾಡಿದ್ದು ಖುಷಿಯಾಗಿದೆ. ಚಿತ್ರಕಲಾ ಪರಿಷತ್ತಿಗೂ ನನಗೂ ವಿಶೇಷವಾದ ನಂಟಿದೆ. ನಾನು ಇಲ್ಲಿ ಕಲಾ ವಿದ್ಯಾರ್ಥಿಯಾಗಿದ್ದೆ. ನಾನು ಚಿತ್ರಕಲೆ ಕಲಿತ ಜಾಗವಿದು. ಹಾಗಾಗಿ ಇಲ್ಲೇ ಹಾಡುಗಳನ್ನು ಬಿಡುಗಡೆ ಮಾಡಿದ್ದೇನೆ. ಕೆಲವೇ ದಿನಗಳಲ್ಲಿ ನಮ್ಮ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದರು.

ನಿರ್ಮಾಪಕಿ ನಾಗವೇಣಿ ಎನ್ ಶೆಟ್ಟಿ ಮಾತನಾಡಿ ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹ ಬೇಕು ಎಂದು ಮನವಿ ಮಾಡಿದರು.

ನಿರ್ದೇಶಕ ರಾಜ ರವಿಕುಮಾರ್ ಮಾತನಾಡಿ ಸಾಕಷ್ಟು ಚಿತ್ರಗಳಿಗೆ ಸಹ ನಿರ್ದೇಶಕನಾಗಿದ್ದ ನನ್ನನ್ನು ನಿರಂಜನ್ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮಾಡಿದ್ದಾರೆ. ಇದೊಂದು ಹೈ ವೋಲ್ಟೇಜ್ ಲವ್ ಸ್ಟೋರಿಯಾಗಿದೆ ಎಂದರು

ಚಿತ್ರದ ನಾಯಕಿ ಪ್ರಜ್ವಲಿ ಸುವರ್ಣ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. .

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin