ಕಾದಾಡಿ ಚಿತ್ರದ ಲಿರಿಕಲ್ ಹಾಡು ಬಿಡುಗಡೆ

ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್‍ಶಶಿಕುಮಾರ್ ‘ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಳ್ಳುತ್ತಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಸಿದ್ದುಕೋಡಿಪುರ ಸಾಹಿತ್ಯದ ‘ಪ್ರೀತಿಸುವ ಎದೆಯೊಳಗೆ ಈ ಕಥೆಯು ಸಾಗುತಿದೆ, ಜಿನುಜಿನುಗೊ ಪ್ರೀತಿಯಲಿ ಮನದೊಳಗೆ ಇನಿಯುತಿದೆ’ ಹಾಡಿಗೆ ಅನುರಾಧಭಟ್ ಧ್ವನಿಯಾಗಿದ್ದಾರೆ.

ತ್ಯಾಗಮಯವಾಗುತ್ತಿರುವ ಜನರ ಜೀವನವು ದಿನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೆವೆ. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ನಾಯಕಿಯರು. ಉಳಿದಂತೆ ಪೋಸಾನಿ ,ರವಿಕಾಳೆ, ಮಾರಿಮುತ್ತು, ಪ್ರೇಮ್‍ಮನೋಹರ್, ಶ್ರವಣ್‍ರಾಘವೇಂದ್ರ ಮುಂತಾದವರು ನಟಿಸಿದ್ದಾರೆ.

ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‍ಸೂರಿಸೆಟ್ಟಿ, ಸಂಕಲನ ಪ್ರಕಾಶ್‍ತೋಟ, ನೃತ್ಯ ರಾಜ್‍ಪಿಡಿ-ರಾಜ್‍ಕೃಷ್ಣ, ಸಾಹಸ ಬಿ.ಎಲ್.ಸತೀಶ್-ವಿನ್‍ಚೇನ್‍ಆಂಜಿ-ಬಿಂಬಸಾರ-ರಾಮಕೃಷ್ಣ-ರಾಮಸುಂಕರ ಅವರದಾಗಿದೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಅಂದಹಾಗೆ ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

ಪೂರ್ತಿಯಾಗಿ ಓದಿ

Related Posts

ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಹಾಡು ಬಿಡುಗಡೆ

ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಬಾಲಿವುಡ್‍ನ ಜನಪ್ರಿಯ ಗಾಯಕ…

57ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ `ಪಿಲಿ ಚನ್ನೆ’ ಆಯ್ಕೆ

`ನಡುಬೆಟ್ಟು ಅಪ್ಪಣ್ಣ’ ನಂತರ ಅನುಪಮ ಶರಧಿ ನಿರ್ದೇಶನದ ಎರಡನೇ ಚಿತ್ರಕ್ಕೆ ರಾಷ್ಟ್ರಮಟ್ಟದ ಗೌರವ ಒಂದೇ ಚಿತ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಬಹುಮುಖ ಪ್ರತಿಭೆ ಎನ್ನುವ ಹಿರಿಮೆಗೆ ಪಾತ್ರರಾಗಿದ್ಧಾರೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ 57ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೀತ್ಸೋತ್ಸ ಗೋವಾದಲ್ಲಿ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581