Kali song from the movie "Mark" released: Kiccha Sudeep, who plays Rudra avatar

“ಮಾರ್ಕ್ ” ಚಿತ್ರದ ಕಾಳಿ ಹಾಡು ಬಿಡುಗಡೆ: ರುದ್ರಾವತಾರ ತಾಳಿದ ಕಿಚ್ಚ ಸುದೀಪ್ - CineNewsKannada.com

“ಮಾರ್ಕ್ ” ಚಿತ್ರದ ಕಾಳಿ ಹಾಡು ಬಿಡುಗಡೆ: ರುದ್ರಾವತಾರ ತಾಳಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ನಟನೆಯ ಮಾರ್ಕ್ ಸಿನಿಮಾ ಈಗಾಗಲೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಇದೀಗ ಚಿತ್ರದ ಕಾಳಿ ಸಾಂಗ್ ಬಿಡುಗಡೆಯಾಗಿದೆ. ತ್ರಿಶೂಲ ಹಿಡಿದು ರೌದ್ರಾವತಾರ ತಾಳಿದ್ದಾರೆ

ಅನಿರುದ್ಧ ಶಾಸ್ತ್ರಿ ಸಾಹಿತ್ಯ ಬರೆದು ಹಾಡಿಗೆ ಧ್ವನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಗೀತೆಗಿದೆ. ಕಿಚ್ಚ ಕಾಳಿ ಹಾಡಿನಲ್ಲಿ ರುದ್ರಾವತಾರ ತಾಳಿದ್ದಾರೆ. ಕೈಯಲ್ಲಿ ತ್ರಿಶೂಲ ಹಿಡಿದು ದುಷ್ಟರ ಸಂಹಾರ ಮಾಡಲು ಹೊಸ ಅವತಾರದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ.

ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ವಿಜಯ್ ಕಾರ್ತಿಕೇಯ ಆಕ್ಷನ್ ಕಟ್ ಹೇಳಿದ್ದು ಸಿನಿಮಾನಲ್ಲಿ ಸುದೀಪ್ ಜೊತೆಗೆ ಶೈನ್ ಟಾಮ್ ಚಾಕೊ, ಯೋಗಿ ಬಾಬು ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿದ್ದಾರೆ.

ಸಿನಿಮಾಕ್ಕೆ ಕಿಚ್ಚ ಕ್ರಿಯೇಷನ್ ಮತ್ತು ಸತ್ಯಜ್ಯೋತಿ ಫಿಲಮ್ಸ್ ಬಂಡವಾಳ ಹೂಡಿದೆ. ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಮೂಲಕ ಪ್ರಿಯಾ ಸುದೀಪ್ ‘ಮಾರ್ಕ್’ ಸಿನಿಮಾವನ್ನು ವಿತರಣೆ ಮಾಡುವುದಕ್ಕೆ ಮುಂದಾಗಿದ್ದಾರೆ. ಇವರೊಂದಿಗೆ ಕೆಆರ್‌ಜಿ ಸ್ಟುಡಿಯೋ ಕೈ ಜೋಡಿಸಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin