"Kalki 2898 AD" trailer released; The movie will release on June 27

“ಕಲ್ಕಿ 2898 ಎಡಿ” ಚಿತ್ರದ ಟ್ರೇಲರ್ ಬಿಡುಗಡೆ; ಜೂನ್ 27ರಂದು ಸಿನಿಮಾ ತೆರೆಗೆ - CineNewsKannada.com

“ಕಲ್ಕಿ 2898 ಎಡಿ” ಚಿತ್ರದ ಟ್ರೇಲರ್ ಬಿಡುಗಡೆ; ಜೂನ್ 27ರಂದು ಸಿನಿಮಾ ತೆರೆಗೆ

ವೈಜ್ಞಾನಿಕ ಮತ್ತು ಕಾಲ್ಪನಿಕ ಸಮ್ಮಿಶ್ರಣದ ದೃಶ್ಯಕಾವ್ಯ ‘ಕಲ್ಕಿ 2898 ಎಡಿ’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ. ಜೂನ್ 27 ರಂದು ಚಿತ್ರ ತೆರೆಗೆ ಬರಲು ಸಜ್ಜಾಗಿದೆ.

ಮೊದಲ ನೋಟ ಭಾರತೀಯ ಪುರಾಣಗಳಲ್ಲಿ ಬೇರೂರಿರುವ ಅಸಾಧಾರಣ ‘ಕಲ್ಕಿ 2898 ಎಡಿ ಸಿನಿಮೀಯ ಬ್ರಹ್ಮಾಂಡವನ್ನು ಪ್ರೇಕ್ಷಕರಿಗೆ ಪರಿಚಯಿಸಿದರೆ ಇದೀಗ ಬಿಡುಗಡೆ ಆಗಿರುವ ಟ್ರೇಲರ್ ಚಿತ್ರದೊಳಗಿನ ಇನ್ನಷ್ಟ ಆಳವನ್ನು ನೋಡುಗನಿಗೆ ಪರಿಚಯಿಸಿದೆ. ಇದು ಮಹಾಕಾವ್ಯದ ಇನ್ನೊಂದು ಹಂತದ ಬಗ್ಗೆ ಸುಳಿವು ನೀಡುತ್ತದೆ.

ಟ್ರೇಲರ್‍ನಲ್ಲಿ ಒಂದಕ್ಕಿಂತ ಒಂದು ಮೀರಿಸುವ ಪಾತ್ರಗಳೇ ಹೈಲೈಟ್. ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ‘ಅಶ್ವತ್ಥಾಮ’ ಆಗಿ ಧೈರ್ಯಶಾಲಿ ಸಾಹಸಗಳನ್ನು ಪ್ರದರ್ಶಿಸುತ್ತಾರೆ. ಉಳಗನಾಯಗನ್ ಕಮಲ್ ಹಾಸನ್ ಗುರುತಿಸಲಾಗದ ಇನ್ನೂ ಮಾರಣಾಂತಿಕ ಅವತಾರದಲ್ಲಿ ‘ಯಾಸ್ಕಿನ್’ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಭೈರವನಾಗಿ, ದೀಪಿಕಾ ಪಡುಕೋಣೆ ‘ಸುಮತಿ’ ಪಾತ್ರದಲ್ಲಿ ಎದುರಾಗಿದ್ದಾರೆ. ದಿಶಾ ಪಟಾನಿ ‘ರಾಕ್ಸಿ’ ಖಡಕ್ ಆಗಿಯೇ ಮಿಂಚು ಹರಿಸಿದ್ದಾರೆ.

ಕಲ್ಕಿ 2898 ಎಡಿ ಚಿತ್ರದ ಟ್ರೇಲರ್‍ನಲ್ಲಿ ಬಗೆಬಗೆ ವಿಭಿನ್ನ ಪ್ರಪಂಚಗಳನ್ನು ಕಾಣಬಹುದು. ಒಂದು ಕಾಶಿ, ಅದರ ಉಳಿವಿಗಾಗಿ ಹೋರಾಡುತ್ತಿರುವ, ಕೊನೆಯದಾಗಿ ಉಳಿದ ನಗರವೆಂದು ಬಿಂಬಿಸಲಾಗಿದೆ. ದೃಶ್ಯವೈಭವವೇ ಇಡೀ ಟ್ರೇಲರ್‍ನ ಜೀವಾಳ. ಊಹೆಗೂ ನಿಲುಕದ ಒಂದಷ್ಟು ಅಚ್ಚರಿಗೆ ದೂಡುವ ದೃಶ್ಯಗಳೇ ಇಲ್ಲಿನ ಹೈಲೈಟ್. ಅತ್ಯುತ್ತಮ ಹಿನ್ನೆಲೆ ಸ್ಕೋರ್, ಹೈ ಕ್ಲಾಸ್ ವಿಎಫ್ ಎಕ್ಸ್ ಮತ್ತು ರೋಮಾಂಚನಗೊಳಿಸುವ ದೃಶ್ಯಗಳೊಂದಿಗೆ, ಈ ಸಿನಿಮಾ ಮೂಡಿಬಂದಿದೆ. ತೆಲುಗು, ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ಕಲ್ಕಿ 2898 ಎಡಿ ‘ ಚಿತ್ರದಲ್ಲಿ ನಿರ್ದೇಶಕ ನಾಗ್ ಅಶ್ವಿನ್ ಅವರ ದೂರದೃಷ್ಟಿಯ ವಿಧಾನವು ಭಾರತೀಯ ಸಿನಿಮಾವನ್ನು ಅದರ ನೆಲದ ದೃಶ್ಯಗಳು ಮತ್ತು ಕಥೆ ಹೇಳುವ ಮೂಲಕ ಮರುವ್ಯಾಖ್ಯಾನಿಸುವ ಭರವಸೆ ನೀಡುತ್ತದೆ. ‘ಕಲ್ಕಿ 2898 ಎಡಿ’ ನಿಜವಾದ ಪ್ಯಾನ್-ಇಂಡಿಯನ್ ಸಿನಿಮಾ ಎನಿಸಿಕೊಂಡಿದೆ.

ತಾರಾಗಣದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ ಮತ್ತು ವೈಜಯಂತಿ ಮೂವೀಸ್ ಬಂಡವಾಳ ಹೂಡಿದೆ. ಈ ಬಹುಭಾಷಾ, ಪುರಾಣ- ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ, ಜೂನ್ 27ರಂದು ಬಿಡುಗಡೆಯಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin