“Kanakraja” is a fan of the Chief Minister: Anoop Revanna in a new avatar

“ಕನಕರಾಜ” ಮುಖ್ಯಮಂತ್ರಿಗಳ ಅಭಿಮಾನಿ: ಹೊಸ ಅವತಾರದಲ್ಲಿ ಅನೂಪ್ ರೇವಣ್ಣ - CineNewsKannada.com

“ಕನಕರಾಜ” ಮುಖ್ಯಮಂತ್ರಿಗಳ ಅಭಿಮಾನಿ: ಹೊಸ ಅವತಾರದಲ್ಲಿ ಅನೂಪ್ ರೇವಣ್ಣ

ಸಾಮಾನ್ಯವಾಗಿ ಯವಜನತೆ ರಾಜಕೀಯಕ್ಕೆ ಬರಬೇಕು. ರಾಜಕಾರಣಿಯಾಗಬೇಕು ಎನ್ನುವ ಮಾತು ಸಾಮಾನ್ಯಈ ಮಾತನ್ನೇ ಪ್ರಮುಖವಾಗಿಟ್ಟುಕೊಂಡು ಚಿತ್ರದ ಕಥೆ ಮಾಡಲಾಗಿದೆ. “ಕನಕರಾಜ” ಮುಖ್ಯಮಂತ್ರಿಗಳ ಅಭಿಮಾನಿಯ ಹೊಸ ಅವತಾರದಲ್ಲಿ ಯುವ ನಟ ಅನೂಪ್ ರೇವಣ್ಣ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಮಹೂರ್ತಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಸಚಿವ ಎಚ್. ಎಂ ರೇವಣ್ಣ ಸೇರಿದಂತೆ ಹಲವರು ಆಗಮಿಸಿ ಚಿತ್ರಕ್ಕೆ ಮತ್ತು ತಂಡಕ್ಕೆ ಶುಭ ಹಾರೈಸಿದರು. ಈ ವೇಳೆ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್ ಸೇರಿದಂತೆ ಹಲವರು ಹಾಜರಿದ್ದರು

ಎಸ್ ಆರ್ ಸನತ್ ಕುಮಾರ್ ನಿರ್ಮಿಸಿ ಡಾ,ವಿ.ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆ ಮಾಡುತ್ತಿರುವ ಚಿತ್ರಕ್ಕೆ ವಿ.ಎಂ.ರಾಜು ಮತ್ತು ನೀಲ್ ಕೆಂಗಾಪುರ ಜಂಟಿಯಾಗಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ನಿರ್ಮಾಪಕ ಸನತ್ ಕುಮಾರ್ ಮಾತನಾಡಿ “ಕನಕರಾಜ” ಚಿತ್ರದಲ್ಲೂ ಯುವಜನತೆಗೆ ಉತ್ತಮ ಸಂದೇಶವಿದೆ. ರಾಜ್ಯದ ವಿವಿಧ ಊರುಗಳಲ್ಲಿ, ಪಕ್ಕದ ರಾಜ್ಯಗಳಲ್ಲಿ ಹಾಗೂ ವಿದೇಶದಲ್ಲೂ ಈ ಚಿತ್ರದ ಚಿತ್ರೀಕರಣ ನಡೆಯಲಿದೆ ಎಂದು ತಿಳಿಸಿದರು.

ನಿರ್ದೇಶಕರಲ್ಲೊಬ್ಬರಾದ ವಿ.ಎಂ.ರಾಜು ಮಾತನಾಡಿ ಚಿತ್ರವನ್ನು ಬೆಂಗಳೂರು, ಮಂಗಳೂರು, ಪಕ್ಕದ ರಾಜ್ಯಗಳು ಹಾಗೂ ವಿದೇಶದಲ್ಲೂ ಚಿತ್ರೀಕರಣ ನಡೆಯಲಿದೆ. ರಮೇಶ್ ಕೊಯಿರ ಛಾಯಾಗ್ರಹಣ, ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನವಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿರುತ್ತದೆ ಎಂದರು.

ನಾಯಕ ಅನೂಪ್ ರೇವಣ್ಣ ಮಾತನಾಡಿಚಿತ್ರದಲ್ಲಿ ಲಾಯರ್ ಪಾತ್ರ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳ ಅಭಿಮಾನಿಯೂ ಹೌದು. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು

ನಾಯಕಿ ನಿಮಿಷ ಮಾತನಾಡಿ “ಕನಕರಾಜ” ಚಿತ್ರದ ಕಥೆ ಹಾಗೂ ನನ್ನ ಪಾತ್ರ ಚೆನ್ನಾಗಿದೆ ಎಂದು ತಿಳಿಸಿದರು.

ಸಂಗೀತ ನಿರ್ದೇಶಕ ಡಾ.ವಿ.ನಾಗೇಂದ್ರಪ್ರಸಾದ್ ಮಾತನಾಡಿ ಚಿತ್ರದ ನಾಯಕ ವಕೀಲನಾಗಿದರೂ ರಾಜಕೀಯದಲ್ಲೂ ಸಕ್ರಿಯ. ಜೊತೆಗೆ ಮುಖ್ಯಮಂತ್ರಿಗಳ ಅಭಿಮಾನಿಯೂ ಹೌದು ಮುಂದೆ ಏನೆಲ್ಲಾ ಆಗಲಿದೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು ಎಂದು ಹೇಳಿದರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin