ಜನಾಂಗೀಯ ಸಂಘರ್ಷದ ನಡುವೆ ಅರಳಿದ ಪ್ರೇಮಕಥೆ “ಕರ್ಕಿ” - CineNewsKannada.com

ಜನಾಂಗೀಯ ಸಂಘರ್ಷದ ನಡುವೆ ಅರಳಿದ ಪ್ರೇಮಕಥೆ “ಕರ್ಕಿ”

`ತಮಿಳಿನ ಹಿರಿಯನಿರ್ದೇಶಕ ಪವಿತ್ರನ್ `ಕರ್ಕಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ, ಮೂಲಕ ಜನಾಂಗೀಯ ಸಂಘರ್ಷದ ನಡುವೆ ಅರಳಿದ ಪ್ರೇಮಕಥೆಯನ್ನು ಸದ್ಯದಲ್ಲಿಯೇ ಪ್ರೇಕ್ಷಕರ ಮುಂದೆ ಇಡಲು ಚಿತ್ರತಂಡ ಮುಂದಾಗಿದೆ. .

ಶೀರ್ಷಿಕೆ ಮತ್ತು ಫಸ್ಟ್ ಲುಕ್‍ನಿಂದ ಗಮನ ಸೆಳೆದಿರುವ ಕರ್ಕಿ, ತೆರೆಗೆ ಬರಲು ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಟೀಸರ್ ಮತ್ತು ಟ್ರೇಲರ್ ಬಿಡುಗಡೆ ಮಾಡಿದೆ. ವಿಭಿನ್ನ ಕಥಾಹಂದರದ ಮೂಲಕ ಗಮನ ಸೆಳೆದಿದ್ದು ಚಿತ್ರದ ಬಗ್ಗೆ ಕತೂಹಲ ಹೆಚ್ಚುವಂತೆ ಮಾಡಿದೆ.

ವಾಟ್ಸಾಪ್ ಲವ್, `ರಾಜರಾಣಿ ಸೇರಿದಂತೆ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಜಯಪ್ರಕಾಶ್‍ರೆಡ್ಡಿ ಕರ್ಕಿ’ ಸಿನೆಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ವಿತರಕ ಪ್ರಕಾಶ್ ಪಳನಿ `ಕರ್ಕಿ’ ಸಿನೆಮಾಕ್ಕೆ ಬಂಡವಾಳ ಹೂಡಿದ್ದಾರೆ

ಚಿತ್ರ ಸಾಹಿತಿ ಕವಿರಾಜ್ ಮಾತನಾಡಿ, `ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್ ಕರ್ಕಿ’ ಸಿನೆಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಆರು ಹಾಡುಗಳಿದ್ದು, ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ. ಪವಿತ್ರನ್ ಅವರಂಥ ನಿರ್ದೇಶಕರ ಜೊತೆ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು, ನನಗೂ ಹೊಸ ಅನುಭವ ನೀಡಿದೆ. ಪ್ರತಿ ಹಾಡಿನ ಒಂದೊಂದು ಪದವನ್ನೂ ಅವರೂ ಅರ್ಥೈಸಿಕೊಂಡು, ಸ್ಪಂದಿಸುತ್ತಿದ್ದರು. ನಮ್ಮ ನಡುವಿನ ಕಥೆಯೊಂದು ಹೊಸ ರೀತಿಯಲ್ಲಿ ಮೂಡಿಬಂದಿದ್ದು, `ಕರ್ಕಿ’ ನೋಡುಗರಿಗೆ ಹೊಸ ಅನುಭವ ಕೊಡಲಿದೆ’ ಎಂದು ಹೇಳಿದರು.

Kaviraj

ಈ ವೇಳೆ ಮಾತನಾಡಿದ ನಿರ್ಮಾಪಕ ಪ್ರಕಾಶ್ ಪಳನಿ ಚಿತ್ರದ ಕಥೆ ಇಷ್ಟವಾಗಿ ನಿರ್ಮಿಸಲು ಮುಂದಾದೆ. ಮೊದಲು ಸಿನೆಮಾವನ್ನು ಕನ್ನಡದ ದೊಡ್ಡ ನಿರ್ದೇಶಕರೊಬ್ಬರು ಮಾಡಬೇಕಿತ್ತು. ಕಾರಣಾಂತರಗಳಿಂದ ನಿರ್ದೇಶನ ಮಾಡಲಾಗಲಿಲ್ಲ. ಅವರ ಬದಲಾಗಿ ತಮಿಳು ನಿರ್ದೇಶಕ ಪವಿತ್ರನ್ ಚಿತ್ರ ನಿರ್ದೇಶನ ಮಾಡಿದ್ದಾರೆ. `ಕರ್ಕಿ’ ಸಿನೆಮಾ ತುಂಬ ಚೆನ್ನಾಗಿ ಮೂಡಿಬಂದಿದೆ. ಸೆಪ್ಟೆಂಬರ್ ಅಂತ್ಯದೊಳಗೆ ಬಿಡುಗಡೆ ಮಾಡುವ ಯೋಚನೆಯಿದೆ ಎಂದರು.

Praksh Palani

ನಾಯಕ ಜಯಪ್ರಕಾಶ್ (ಜೆ.ಪಿ) ರೆಡ್ಡಿ ಮಾತನಾಡಿ ಚಿತ್ರದಲ್ಲಿ ಕಾನೂನು ಪದವಿಧರನಾಗಬೇಕು ಎಂಬ ಕನಸು ಇಟ್ಟುಕೊಂಡ ಮುತ್ತುರಾಜ್ ಎಂಬ ಹಳ್ಳಿ ಹುಡುಗನ ಪಾತ್ರ. ಜಾತಿ ಮತ್ತು ಜನಾಂಗೀಯ ವಿಷಯವನ್ನು ಮನ ಮುಟ್ಟುವಂತೆ ಈ ಸಿನೆಮಾದಲ್ಲಿ ಹೇಳಲಾಗಿದೆ. ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಈ ಸಿನೆಮಾ ಸಾಗುತ್ತದೆ. ಆದಷ್ಟು ನೈಜವಾಗಿ ಸಿನೆಮಾದ ಕಥೆ, ಪಾತ್ರಗಳು ಮೂಡಿಬಂದಿದೆ ಎಂದು ಹೇಳಿದರು

Actor Jp and Actress Meenakshi

ಮಲೆಯಾಳಿ ಬೆಡಗಿ ಮೀನಾಕ್ಷಿ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಸಾಧುಕೋಕಿಲ, ಬಲರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ ಮೊದಲಾದವರು `ಕರ್ಕಿ’ ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

`ಕರ್ಕಿ' ಸಿನೆಮಾಕ್ಕೆ ಹೃಷಿಕೇಶ ಛಾಯಾಗ್ರಹಣ, ಶ್ರೀ ಕ್ರೇಜಿಮೈಂಡ್ಸ್ ಸಂಕಲನವಿದೆ. ಕರ್ಕಿ’ ಸಿನೆಮಾದ ಆರು ಹಾಡುಗಳಿಗೆ ಕವಿರಾಜ್ ಸಾಹಿತ್ಯವಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ

Director Pavitran

ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ಕರ್ಕಿ' ಸಿನೆಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸದ್ಯಕರ್ಕಿ’ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಸೋಶಿಯಲ್ ಮೀಡಿಯಾಗಳಲ್ಲಿ ಒಂದಷ್ಟು ಸದ್ದು ಮಾಡುತ್ತಿದ್ದು, `ಕರ್ಕಿ’ಯ ಕಮಾಲ್ ಥಿಯೇಟರಿನಲ್ಲಿ ಹೇಗೆ ನಡೆಯಲಿದೆ ಎಂಬುದು ಸಿನೆಮಾ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin