ಡಿಸೆಂಬರ್ 14ರಿಂದ 17ರವರೆಗೆ ಕರುನಾಡ ಸಂಭ್ರಮ: ನಟ ರಮೇಶ್ ಅರವಿಂದ್‍ಗೆ “ಕನ್ನಡ ಕಲಾಭೂಷಣ” ಪ್ರಶಸ್ತಿ
ಕರುನಾಡ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 14ರಿಂದ 17ರವರೆಗೆ ನಡೆಯುತ್ತಿರುವ ಅದ್ದೂರಿ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗುತ್ತಿದೆ. ಜಿಕೆಜಿಎಸ್ ಟ್ರಸ್ಟ್ ವತಿಯಿಂದ ನಿರಂತರವಾಗಿ ಪ್ರತಿ ವರ್ಷ ನಡೆಯುತ್ತಿರುವ ಈ ಕಾರ್ಯಕ್ರಮ ಈ ಬಾರಿ 12ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಸಾಕಷ್ಟು ವಿಶೇಷತೆ ಹಾಗೂ ಕಲರ್ ಫುಲ್ ನಿಂದ ಕರುನಾಡ ಸಂಭ್ರಮ ಕೂಡಿರಲಿದೆ.
ಬೆಂಗಳೂರಿನ ಶ್ರೀನಿವಾಸನಗರದಲ್ಲಿರುವ ಕೆಂಪೇಗೌಡ ಆಟದ ಮೈದಾನದಲ್ಲಿ ಈ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ವರುಣ್ ಸ್ಟುಡಿಯೋಸ್, ರಾಜ್ ಇವೆಂಟ್ಸ್ ಜೊತೆಗೂಡಿ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದೆ. ಕಾರ್ಯಕ್ರಮದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಕನ್ನಡ ಕಲಾಭೂಷಣ ಪ್ರಶಸ್ತಿ ನೀಡಲಾಗುತ್ತಿದೆ. ಈ ಬಾರಿ ನಟ ರಮೇಶ್ ಅರವಿಂದ್ ಕನ್ನಡ ಕಲಾಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಕರುನಾಡ ಸಂಭ್ರಮ ಅಂದ್ರೇನೆ ಕಲರ್ ಫುಲ್ ಕಾರ್ಯಕ್ರಮ, ಚಂದನವನದ ತಾರೆಗಳ ಸಮಾಗಮ, ಸ್ಟಾರ್ ಗಾಯಕರ ಹಾಡು, ನಟ, ನಟಿಯರ ಡಾನ್ಸ್. ಈ ಬಾರಿಯೂ ಈ ಸಂಭ್ರಮ ಇನ್ನಷ್ಟು ರಂಗಿನಿಂದ ಕೂಡಿರಲಿದೆ.
ಕಾರ್ಯಕ್ರಮದಲ್ಲಿ ಗುರುಕಿರಣ್, ರಾಜೇಶ್ ಕೃಷ್ಣನ್, ನವೀನ್ ಸಜ್ಜು ಅವರ ಗಾಯನ ಕಾರ್ಯಕ್ರಮದ ಮೆರಗು ಹೆಚ್ಚಿಸಲಿದೆ. ರಮೇಶ್ ಅರವಿಂದ್, ನೀನಾಸಂ ಸತೀಶ್, ಅಜಯ್ ರಾವ್, ವಿಜಯ್ ರಾಘವೇಂದ್ರ, ಚಿಕ್ಕಣ್ಣ ಸೇರಿದಂತೆ ಹಲವು ಕನ್ನಡ ತಾರೆಯರು ಕರುನಾಡ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.