“ಕಬ್ಜ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

ಆರ್.ಚಂದ್ರು ನಿರ್ದೇಶನದ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ಹಲವು ವಿಶೇಷಗಳಿಂದ ಕೂಡಿದೆ. ವಿಶ್ವದಾದ್ಯಂತ ಎಲ್ಲರ ಗಮನ ಸೆಳೆದಿರುವ ಈ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈಗ ಚಿತ್ರತಂಡದಿಂದ ಮತ್ತೊಂದು ಮಹತ್ತರವಾದ ವಿಷಯ ಹೊರಬಂದಿದೆ. ತಮ್ಮ ಅಮೋಘ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ” ಕಬ್ಜ ” ಚಿತ್ರದಲ್ಲಿ ನಟಿಸಿದ್ದಾರೆ. ಉಪೇಂದ್ರ, ಸುದೀಪ್ ಹಾಗೂ ಶಿವರಾಜಕುಮಾರ್ ಮೂವರು ನಟರನ್ನು ಒಂದೇ ಚಿತ್ರದಲ್ಲಿ ನೋಡುತ್ತಿರುವುದು ಅಭಿಮಾನಿಗಳ ಪಾಲಿಗಂತೂ ದೊಡ್ಡ ಹಬ್ಬವೇ ಸರಿ.
ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗು ಕಿಚ್ಚ ಸುದೀಪ್ ಸೇರಿದಂತೆ ಬಹುತಾರಾಗಣವಿರುವ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ ಎನ್ನುವ ವಿಷಯ ಎಲ್ಲೆಡೆ ಸದ್ದು ಮಾಡಿದ್ದರೂ ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು ಈ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ.ಜೊತೆಗೆ ಶಿವರಾಜ್ ಕುಮಾರ್ ನಟಿಸಿದ್ದಾರೆ ಎನ್ನುವ ಸಣ್ಣ ಸುಳಿವನ್ನೂ ನೀಡಿದ ಅಭಿಮಾನಿಗಳಲ್ಲಿ ಮತ್ತಷ್ಟು ಕಾತುರ ,ಕುತೂಹಲ ಹೆಚ್ಚುವಂತೆ ಮಾಡಿತ್ತು.ಕಬ್ಜ ಚಿತ್ರದ ಹೊಸ ಪೋಸ್ಟರ್ ನಲ್ಲಿ ಶಿವರಾಜ್ ಕುಮಾರ್ ಗನ್ ಹಿಡಿದು ನಿಂತಿರುವ ಪೋಸ್ಟರ್ ನಲ್ಲಿ ಅಕ್ಕ ಪಕ್ಕ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಕೂಡ ಇದ್ದಾರೆ.

ಕಬ್ಜದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ ಎನ್ನುವ ವಿಷಯ ಖಚಿತವಾಗಿದೆ. ಈ ಮೂಲಕ ಶಿವಣ್ಣ ಅಭಿಮಾನಿಗಳಲ್ಲಿ ಚಿತ್ರ ಮತ್ತಷ್ಟು ಕುತೂಹಲ ಹೆಚ್ಚುವಂತೆ ಮಾಡಿದೆ.ಬಹುಭಾಷೆ ಮತ್ತು ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಕಬ್ಜ ಚಿತ್ರದಲ್ಲಿ ಉಪೇಂದ್ರ ಮತ್ತು ಸುದೀಪ್ ಎರಡನೇ ಬಾರಿಗೆ ಜೊತೆಯಾಗಿ ಕಾಣಿಸಿಕೊಂಡಿರುವುದು ಇಬ್ಬರ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಹೆಚ್ಚುವಂತೆ ಮಾಡಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವಾದ ಮಾರ್ಚ್ 17 ರಂದು ದೇಶ ವಿದೇಶದಲ್ಲಿ ಚಿತ್ರ ತೆರೆಗೆ ಬರಲಿದೆ.ಮಾರ್ಚ್ 4 ರಂದು ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಮಾರ್ಚ್ 17 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.