Kiccha Sudeep wishes good luck for the trailer of the film "#Paaru Parvati"

“#ಪಾರು ಪಾರ್ವತಿ” ಚಿತ್ರದ ಟ್ರೇಲರ್‍ಗೆ ಶುಭಕೋರಿದ ಕಿಚ್ಚ ಸುದೀಪ್ - CineNewsKannada.com

“#ಪಾರು ಪಾರ್ವತಿ” ಚಿತ್ರದ ಟ್ರೇಲರ್‍ಗೆ ಶುಭಕೋರಿದ ಕಿಚ್ಚ ಸುದೀಪ್

ಪಿ.ಬಿ.ಪ್ರೇಂನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಪ್ರಮುಖಪಾತ್ರದಲ್ಲಿ ನಟಿಸಿರುವ “#ಪಾರು ಪಾರ್ವತಿ” ಚಿತ್ರದ ಟ್ರೈಲರ್ ನೋಡಿ ಕಿಚ್ಚ ಸುದೀಪ್ ಶುಭಹಾರೈಸಿದ್ದಾರೆ.

ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅನಾವರಣ ಮಾಡಿದ್ದರು. ಟ್ರೇಲರ್ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಜನವರಿ 31 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಕಿಚ್ಚ ಸುದೀಪ್, ಅಡ್ವೆಂಚರ್ ಕಾಮಿಡಿ ಜಾನರ್‍ನ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಚಿತ್ರದಲ್ಲಿ ಪ್ರಮುಖ ಪಾತ್ರಧಾರಿ ಎಂದೇ ಹೇಳಲಾಗುತ್ತಿರುವ ಕಾರ್ ಅನ್ನು ಸಹ ಸುದೀಪ್ ಸ್ವತಃ ವೀಕ್ಷಿಸಿದರು. ನಟಿ ದೀಪಿಕಾ ದಾಸ್, ನಿರ್ಮಾಪಕ ಪ್ರೇಂನಾಥ್, ನಿರ್ದೇಶಕ ರೋಹಿತ್ ಕೀರ್ತಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರವಾಸ ಕಥನಕ್ಕೆ ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರಕಾಂಡ್ ನಲ್ಲಿ ಚಿತ್ರೀಕರಣ ನಡೆದಿದೆ. ಅಬಿನ್ ರಾಜೇಶ್ ಛಾಯಾಗ್ರಹಣ, ಆರ್ ಹರಿ ಸಂಗೀತ ನಿರ್ದೇಶನ ಹಾಗೂ ಸಿ.ಕೆ.ಕುಮಾರ ಅವರ ಸಂಕಲನ “#ಪಾರು ಪಾರ್ವತಿ” ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin