Kiccha Sudeep's "Max" to release on December 25
ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್”. ಡಿಸೆಂಬರ್ 25ಕ್ಕೆ ಬಿಡುಗಡೆ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ “ಮ್ಯಾಕ್ಸ್” ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ ತಂಡ ಘೋಷಿಸಿದೆ.
ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿ ಎನ್ನುವ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನು ಚಿತ್ರ ತಂಡ ಪೂರೈಸಿದ್ದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. “ಮ್ಯಾಕ್ಸ್” ಮಾಸ್ ಚಿತ್ರವಾಗಿದ್ದು, ವಿಜಯ್ ಕಾರ್ತಿಕೇಯ ನಿರ್ದೇಶಿಸಿರುತ್ತಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಮತ್ತು ಮುಂತಾದವರು ಈ ಚಿತ್ರದಲ್ಲಿ ನಟಿಸಿರುತ್ತಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ,
ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಿಸಿರುತ್ತಾರೆ.