“ಯಾರಿಗೂ ಹೇಳ್ಬೇಡಿ” ಚಿತ್ರಕ್ಕೆ ಕಿಚ್ಚ ಸುದೀಪ್ ಹಾರೈಕೆ: ಶೀಘ್ರ ಸಿನಿಮಾ ಬಿಡುಗಡೆ
ಕನ್ನಡದಲ್ಲಿ ಆಗಾಗ ಈ ಹಿಂದೆ ತೆರೆಗೆ ಬಂದಿದ್ದ ಚಿತ್ರಗಳ ಶೀರ್ಷಿಕೆ ಇಟ್ಟುಕೊಂಡು ಮತ್ತೆ ಹೊಸ ಸಿನಿಮಾಗಳು ಸೆಟ್ಟೇರುತ್ತಿವೆ. ಶೀರ್ಷಿಕೆ ಅದೇ ಆದರೂ ಕಥೆ ಮಾತ್ರ ಹೊಸದು. ಮೂರು ದಶಕಗಳ ಹಿಂದೆ ತೆರೆಗೆ ಬಂದಿದ್ದ “ಯಾರಿಗೂ ಹೇಳ್ಬೇಡಿ” ಈಗ ಅದೇ ಹೆಸರಲ್ಲಿ ತೆರೆಗೆ ಬರಲು ಸಜ್ಜಾಗಿದೆ.

ಇತ್ತೀಚೆಗೆ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಕಿಚ್ಚ ಸುದೀಪ್ ಶುಭ ಹಾರೈಸಿದ್ದರು. ಇದೇ ಖುಷಿಯಲ್ಲಿ ಚಿತ್ರತಂಡ ತಿಂಗಳಾಂತ್ಯದಲ್ಲಿ ಚಿತ್ರವನ್ನು ತೆರೆಗೆ ತರಲು ಮುಂದಾಗಿದೆ,
ಹೈದರಬಾದ್‍ನ ಹರೀಶ್ ಅಮ್ಮಿನೇನಿ ಕನ್ನಡ ಭಾಷೆಯ ಅಭಿಮಾನದ ಮೇಲೆ ಬಂಡವಾಳ ಹೂಡಿದ್ದು, ಸುನಿಲ್‍ಕುಮಾರ್ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಶಿವಗಣೇಶ್ ಆಕ್ಷನ್ ಕಟ್ ಹೇಳಿದ್ದಾರೆ.

ನಾಯಕ ಚೇತನ್ ವಿಕ್ಕಿ ಮಾತನಾಡಿ ಇದೊಂದು ಸಂಪೂರ್ಣ ಹಾಸ್ಯಮಯ ಚಿತ್ರವಾಗಿದೆ ಶುರುವಿನಿಂದ ಕೊನೆವರೆಗೂ ನಗಿಸುತ್ತಲೇ ಸಾಗುತ್ತದೆ. ನಾನಿಲ್ಲಿ ವಿಡಿಯೋ ಜಾಕಿಯಾಗಿ ಕಾಣಿಸಿಕೊಂಡಿದ್ದು, ಮದುವೆ ಮುಂಚಿನ ಒಂದು ಸಂದರ್ಭದಲ್ಲಿ ಸುಳ್ಳು ಹೇಳಿ ಕಷ್ಟಕ್ಕೆ ಸಿಲುಕುತ್ತೇನೆ. ಅದನ್ನು ಯಾರಿಗೂ ಹೇಳ್ಬೇಡಿ ಎಂದು ಸುಳ್ಳಿನ ಸರಮಾಲೆಯನ್ನೆ ಕಟ್ಟುತ್ತೇನೆ. ಕೊನೆಗೆ ಅದನ್ನು ಮುಚ್ಚಿಡಲು ಹೋದಾಗ ಏನೆಲ್ಲಾ ಅವಾಂತರಗಳು ಆಗುತ್ತದೆ. ಅದರಿಂದ ಹೇಗೆ ಹೊರಗೆ ಬರುತ್ತೇನೆ ಎಂಬುದು ಕಾಮಿಡಿ ಮೂಲಕ ಹೇಳಲಾಗಿದೆ. ನೋಡುಗರಿಗೆ ಪೈಸಾ ವಸೂಲ್ ಸಿನಿಮಾ ಅಂತ ಖಂಡಿತ ಹೇಳಬಹುದು.ಎಲ್ಲರ ಸಹಕಾರ ಬೇಕು ಎಂದು ಕೇಳಿಕೊಂಡರು
ಕಾಮಿಡಿ ಕಿಲಾಡಿಗಳು ಖ್ಯಾತಿಯ ಅಪ್ಪಣ್ಣ ಸ್ನೇಹಿತನಾಗಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ‘ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳಲ್ಲಿ ಅಭಿನಯಿಸಿದ್ದ ಚೈತ್ರಾ ಆಚಾರ್ ಡಾಕ್ಟರ್ ಪಾತ್ರದಲ್ಲಿ ನಾಯಕಿ. ಅಶ್ವಿನಿ ಪೆÇಲೆಪಲ್ಲಿ ಉಪನಾಯಕಿ. ಉಳಿದಂತೆ ಶರತ್ ಲೋಹಿತಾಶ್ವ, ಚೈತ್ರಾರಾವ್, ಶಭರೇಶ್, ಕಾರ್ತಿಕ್ ಮುಂತಾದವರು ನಟಿಸಿದ್ದಾರೆ.
ಸಂಗೀತ ಶಶಾಂಕ್ ಶೇಷಗಿರಿ, ಛಾಯಾಗ್ರಹಣ ಡೇವಿಡ್‍ಆನಂದರಾಜ್, ಸಂಭಾಷಣೆ ಶಿವರಾಜ್.ಡಿಎನ್‍ಎಸ್, ಹಿನ್ನಲೆ ಶಬ್ದ ಉದಿತ್‍ಹರಿದಾಸ್, ಸಾಹಸ ಕುಂಗುಫು ಚಂದ್ರು, ಸಾಹಿತ್ಯ ಕವಿರಾಜ್-ಪ್ರಮೋದ್ ಮರವಂತೆ, ಸಂಕಲನ ದೀಪಕ್.ಸಿ.ಎಸ್ ಅವರದಾಗಿದೆ.


